ಮಹದಾಯಿ ವಿವಾದದ ಹೇಳಿಕೆ; ದಿನೇಶ್ ಗುಂಡೂರಾವ್ ಸ್ಪಷ್ಟನೆ
ಬೆಂಗಳೂರು, ನವೆಂಬರ್ 01: " ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸುದ್ದಿ ಮಾಡಲಾಗಿದೆ" ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
ದಿನೇಶ್ ಗುಂಡೂರಾವ್ ಗೋವಾ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಕರ್ನಾಟಕ ಮತ್ತು ಗೋವಾ ನಡುವೆ ಮಹದಾಯಿ ವಿವಾದಲ್ಲಿ ಜಟಾಪಟಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಗೋವಾ ಪರವಾಗಿದ್ದಾರೆ ಎಂಬ ಸುದ್ದಿಗಳು ಪ್ರಕಟವಾಗಿದ್ದವು.
ಭಾನುವಾರ ಈ ಕುರಿತು ಟ್ವೀಟರ್‌ನಲ್ಲಿ ದಿನೇಶ್ ಗುಂಡೂರಾವ್ ಸ್ಪಷ್ಟನೆಯನ್ನು ನೀಡಿದ್ದಾರೆ. "ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸುದ್ದಿ ಮಾಡಲಾಗಿದೆ. ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಅಂತಿಮವಾಗಿ ಈ ವಿವಾದವನ್ನು ನ್ಯಾಯಾಲಯವೇ ಇತ್ಯರ್ಥ ಪಡಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿತ್ತು" ಎಂದು ಹೇಳಿದ್ದಾರೆ.

"ಆದರೂ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿದ್ದರೆ ಈ ವಿವಾದ ಶೀಘ್ರ ಇತ್ಯರ್ಥವಾಗುತಿತ್ತು ಎಂಬ ಮತ್ತೊಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಈ ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ" ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಆಗಿದ್ದೇನು? : ಗೋವಾ ವಿಧಾನಸಭೆ ಪ್ರತಿಪಕ್ಷ ನಾಯಕರು ನೀಡಿದ ಹೇಳಿಕೆಯಿಂದಾಗಿ ದಿನೇಶ್ ಗುಂಡೂರಾವ್ ಅವರ ಗೋವಾ ಪರವಾಗಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. "ಕರ್ನಾಟಕ ಜೊತೆಗಿನ ಮಹದಾಯಿ ವಿಚಾರದಲ್ಲಿ ಗೋವಾ ಪ್ರದೇಶ ಕಾಂಗ್ರೆಸ್ ಘಟಕವು ಯಾವ ನಿರ್ಣಯ ಕೈಗೊಳ್ಳುತ್ತದೆಯೋ ಆ ನಿರ್ಣಯವನ್ನು ತಾವು ಬೆಂಬಿಸುವುದಾಗಿ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ" ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಗಳು ಗೋವಾದ ಸ್ಥಳೀಯ ಚಾನೆಲ್‌ಗಳಲ್ಲಿ ಪ್ರಸಾರವಾಗಿತ್ತು. ಕರ್ನಾಟಕ-ಗೋವಾ ನಡುವಿನ ಜಟಾಪಟಿ ಸಮಯದಲ್ಲಿ ದಿನೇಶ್ ಗುಂಡೂರಾವ್ ಇಂತಹ ಹೇಳಿಕೆ ನೀಡಿದ್ದಾರೆಯೇ? ಎಂಬುದು ಚರ್ಚೆಗೆ ಕಾರಣವಾಗಿತ್ತು.
1.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) November 1, 2020
ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸುದ್ದಿ ಮಾಡಲಾಗಿದೆ.
ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಅಂತಿಮವಾಗಿ ಈ ವಿವಾದವನ್ನು ನ್ಯಾಯಾಲಯವೇ ಇತ್ಯರ್ಥ ಪಡಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿತ್ತು.












Click it and Unblock the Notifications