ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹದಾಯಿ ವಿವಾದದ ಹೇಳಿಕೆ; ದಿನೇಶ್ ಗುಂಡೂರಾವ್ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ನವೆಂಬರ್ 01: " ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸುದ್ದಿ ಮಾಡಲಾಗಿದೆ" ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

ದಿನೇಶ್ ಗುಂಡೂರಾವ್ ಗೋವಾ ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾಗಿದ್ದಾರೆ. ಕರ್ನಾಟಕ ಮತ್ತು ಗೋವಾ ನಡುವೆ ಮಹದಾಯಿ ವಿವಾದಲ್ಲಿ ಜಟಾಪಟಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಗೋವಾ ಪರವಾಗಿದ್ದಾರೆ ಎಂಬ ಸುದ್ದಿಗಳು ಪ್ರಕಟವಾಗಿದ್ದವು.

ಮಹದಾಯಿ; ಕರ್ನಾಟಕದ ವಿರುದ್ಧ ಸುಪ್ರೀಂಗೆ ಗೋವಾ ಅರ್ಜಿ ಮಹದಾಯಿ; ಕರ್ನಾಟಕದ ವಿರುದ್ಧ ಸುಪ್ರೀಂಗೆ ಗೋವಾ ಅರ್ಜಿ

ಭಾನುವಾರ ಈ ಕುರಿತು ಟ್ವೀಟರ್‌ನಲ್ಲಿ ದಿನೇಶ್ ಗುಂಡೂರಾವ್ ಸ್ಪಷ್ಟನೆಯನ್ನು ನೀಡಿದ್ದಾರೆ. "ಮಹದಾಯಿ ವಿಚಾರಕ್ಕೆ ಸಂಬಂಧಪಟ್ಟಂತೆ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಸುದ್ದಿ ಮಾಡಲಾಗಿದೆ. ಮಹಾದಾಯಿ ನದಿ ನೀರಿನ ಹಂಚಿಕೆ ವಿವಾದದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ಅಂತಿಮವಾಗಿ ಈ ವಿವಾದವನ್ನು ನ್ಯಾಯಾಲಯವೇ ಇತ್ಯರ್ಥ ಪಡಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿತ್ತು" ಎಂದು ಹೇಳಿದ್ದಾರೆ.

ಕರ್ನಾಟಕಕ್ಕೆ ಕೇಂದ್ರದ ಉಡುಗೊರೆ; ಮಹದಾಯಿ ಯೋಜನೆ ಅಧಿಸೂಚನೆ ಪ್ರಕಟ ಕರ್ನಾಟಕಕ್ಕೆ ಕೇಂದ್ರದ ಉಡುಗೊರೆ; ಮಹದಾಯಿ ಯೋಜನೆ ಅಧಿಸೂಚನೆ ಪ್ರಕಟ

Dinesh Gundu Rao Clarification On His Statement On Mahadayi Dispute

"ಆದರೂ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಿದ್ದರೆ ಈ ವಿವಾದ ಶೀಘ್ರ ಇತ್ಯರ್ಥವಾಗುತಿತ್ತು ಎಂಬ ಮತ್ತೊಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಈ ನನ್ನ ಹೇಳಿಕೆಯಲ್ಲಿ ಯಾವುದೇ ಬದಲಾವಣೆ ಇಲ್ಲ" ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಮಹದಾಯಿ; ಅಧಿಸೂಚನೆ ಹೊರಡಿಸಲು ಸುಪ್ರೀಂ ನಿರ್ದೇಶನಮಹದಾಯಿ; ಅಧಿಸೂಚನೆ ಹೊರಡಿಸಲು ಸುಪ್ರೀಂ ನಿರ್ದೇಶನ

ಆಗಿದ್ದೇನು? : ಗೋವಾ ವಿಧಾನಸಭೆ ಪ್ರತಿಪಕ್ಷ ನಾಯಕರು ನೀಡಿದ ಹೇಳಿಕೆಯಿಂದಾಗಿ ದಿನೇಶ್ ಗುಂಡೂರಾವ್ ಅವರ ಗೋವಾ ಪರವಾಗಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. "ಕರ್ನಾಟಕ ಜೊತೆಗಿನ ಮಹದಾಯಿ ವಿಚಾರದಲ್ಲಿ ಗೋವಾ ಪ್ರದೇಶ ಕಾಂಗ್ರೆಸ್ ಘಟಕವು ಯಾವ ನಿರ್ಣಯ ಕೈಗೊಳ್ಳುತ್ತದೆಯೋ ಆ ನಿರ್ಣಯವನ್ನು ತಾವು ಬೆಂಬಿಸುವುದಾಗಿ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ" ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆಗಳು ಗೋವಾದ ಸ್ಥಳೀಯ ಚಾನೆಲ್‌ಗಳಲ್ಲಿ ಪ್ರಸಾರವಾಗಿತ್ತು. ಕರ್ನಾಟಕ-ಗೋವಾ ನಡುವಿನ ಜಟಾಪಟಿ ಸಮಯದಲ್ಲಿ ದಿನೇಶ್ ಗುಂಡೂರಾವ್ ಇಂತಹ ಹೇಳಿಕೆ ನೀಡಿದ್ದಾರೆಯೇ? ಎಂಬುದು ಚರ್ಚೆಗೆ ಕಾರಣವಾಗಿತ್ತು.

English summary
Goa Congress in-charge Dinesh Gundu Rao clarification on his statement on Mahadayi water dispute between Karnataka and Goa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X