ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಸ್‌ಆರ್‌ಟಿಸಿಯ ನಾಲ್ಕೂ ನಿಗಮಗಳ ನೌಕರರಿಗೆ ಸರ್ಕಾರದ ಶಾಕ್!

|
Google Oneindia Kannada News

ಬೆಂಗಳೂರು, ನ. 15: ಕೆಎಸ್‌ಆರ್‌ಟಿಸಿಯ ನಾಲ್ಕೂ ನಿಗಮಗಳ ನೌಕರರಿಗೆ ರಾಜ್ಯ ಬಿಜೆಪಿ ಸರ್ಕಾರ ದೀಪಾವಳಿ ಶಾಕ್ ಕೊಟ್ಟಿದೆ. ಸಾರಿಗೆ ಇಲಾಖೆ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಸರ್ಕಾರದ ಆಡಳಿತ ವೈಫಲ್ಯದ ಕೈಗನ್ನಡಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಸ್ವತಃ ಡಿಸಿಎಂ ಲಕ್ಷ್ಮಣ ಸವದಿ ಅವರ ಕೈಯಲ್ಲೇ ಸಾರಿಗೆ ಇಲಾಖೆಯಿದೆ. ಆದರೂ ಸುಮಾರು 1.35 ಲಕ್ಷ ಸಾರಿಗೆ ನೌಕರರಿಗೆ ಸಂಬಳವೇ ಆಗಿಲ್ಲ ಎಂದು ಟ್ವಿಟರ್‌ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಳ ಇಲ್ಲದೆ ದೀಪಾವಳಿಯಂತಹ ಸಡಗರದ ಹಬ್ಬವನ್ನೂ ಸಾರಿಗೆ ನೌಕರರು ಕತ್ತಲಿನಲ್ಲಿ ಆಚರಿಸದಂತಾಗಿದೆ. ಬಿಜೆಪಿ ಸರ್ಕಾರ ಈ ಕೂಡಲೇ ಗಮನ ಹರಿಸಬೇಕು ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ. ಸಾರಿಗೆ ನೌಕರರ ಸಂಬಳ ಆಗದಿರುವದಕ್ಕೆ ಸಚಿವ ಸವದಿ ಕೋವಿಡ್ ನೆಪ ಹೇಳಿದ್ದಾರೆ. ಕೋವಿಡ್ ಬಿಸಿ ಕೇವಲ ಸಾರಿಗೆ ಇಲಾಖೆಗೆ ಮಾತ್ರ ತಟ್ಟಿಲ್ಲ.

 Dinesh Gundu Rao has accused government of failing to pay salaries of its KRSTC employees

ಕೋವಿಡ್ ನೆಪ ಹೇಳುವುದು ಬಿಟ್ಟು ಸಾರಿಗೆ ಇಲಾಖೆ, ಸಂಪನ್ಮೂಲ ಕ್ರೋಡೀಕರಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು. ಈಗ ಹಣಕಾಸು ಇಲಾಖೆ ಕಡೆ ಬೊಟ್ಟು ತೋರಿಸಿದರೆ ಸಾರಿಗೆ ನೌಕರರ ಜೀವನ ನಡೆಯುವುದು ಹೇಗೆ? ಎಂದು ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ದಿನೇಶ್ ಗುಂಡೂರಾವ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

English summary
Former KPCC president Dinesh Gundu Rao has accused the transport department and the government of failing to pay salaries of its KRSTC employees. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X