ಸಮನ್ವಯ ಸಮಿತಿ ಸೇರಲಿದ್ದಾರೆ ದಿನೇಶ್ ಗುಂಡೂರಾವ್?

ಬೆಂಗಳೂರು, ಜುಲೈ 08 : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಸಮನ್ವಯ ಸಮಿತಿ ಸೇರುವ ಸಾಧ್ಯತೆ ಇದೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯಲು ಸಮನ್ವಯ ಸಮಿತಿಯನ್ನು ರಚನೆ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಐವರು ಸದಸ್ಯರ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಕಾಂಗ್ರೆಸ್‌ನಿಂದ ಮೂವರು, ಜೆಡಿಎಸ್‌ನಿಂದ ಇಬ್ಬರು ಸದಸ್ಯರು ಸಮಿತಿಯಲ್ಲಿದ್ದು, ಎರಡು ಸಭೆಗಳು ನಡೆದಿವೆ.

ಡಾ.ಜಿ.ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ಕಾರಣಕ್ಕೆ ಅವರನ್ನು ಸಮಿತಿಗೆ ಸೇರಿಸಿಕೊಳ್ಳಲಾಗಿತ್ತು. ಆದರೆ, ಈಗ ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾಗಿದ್ದಾರೆ. ಆದ್ದರಿಂದ, ಅವರು ಸಮನ್ವಯ ಸಮಿತಿಗೆ ಸೇರುವ ಸಾಧ್ಯತೆ ಇದೆ.

Dinesh Gundu Rao may join Coordination panel

ಕಾಂಗ್ರೆಸ್‌ನಿಂದ ಕರ್ನಾಟಕ ಕಾಂಗ್ರೆಸ್ ಉಸ್ತುವಾಗಿ ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸಮನ್ವಯ ಸಮಿತಿಯಲ್ಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮಿತಿ ಸೇರಿದರೆ ಕಾಂಗ್ರೆಸ್‌ನಿಂದ ನಾಲ್ವರು ಸದಸ್ಯರು ಸೇರಿದಂತಾಗುತ್ತದೆ.

ದಿನೇಶ್ ಗುಂಡೂರಾವ್ ಸಮನ್ವಯ ಸಮಿತಿ ಸೇರಬೇಕೆ? ಎಂಬ ಬಗ್ಗೆ ಕೆ.ಸಿ.ವೇಣುಗೋಪಾಲ್ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಜೆಡಿಎಸ್‌ನಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಸಮಿತಿಯಲ್ಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+