• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮತ್ತೆ ಅತಿಥಿ ನಟನ ಪಾತ್ರವಹಿಸಿದ ಪ್ರಧಾನಿ ನರೇಂದ್ರ ಮೋದಿ!

|

ಬೆಂಗಳೂರು, ಅ. 20: ಕೊರೊನಾ ಸರಣಿಯ ಮುಂದುವರೆದ ಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತೆ ಅತಿಥಿ ನಟನ ಪಾತ್ರವನ್ನು ನಿರ್ವಹಿಸಿ ಹೋಗಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಾಲು ಸಾಲು ಹಬ್ಬಗಳ ಹಿನ್ನೆಲೆಯಲ್ಲಿ ಕೊರೊನಾ ವೈರಸ್‌ನ್ನು ಜನರು ನಿರ್ಲಕ್ಷಿಸುತ್ತಿದ್ದಾರೆ ಎಂದು ಭಾಷಣದಲ್ಲಿ ಹೇಳಿದ್ದರು. ಜೊತೆಗೆ ಜನರು ನಿಲಕ್ಷಕ್ಕೆ ಬೆಲೆ ತೆರಬೇಕಾಗುತ್ತದೆ ಎಂದೂ ಎಚ್ಚರಿಸಿದ್ದರು. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ಬಗ್ಗೆ ದಿನೇಶ್ ಗುಂಡೂರಾವ್ ಟೀಕೆ ಮಾಡಿದ್ದಾರೆ.

   ಪರಿಹಾರ ಕೊಡ್ತಾರಾ?? ನೋಡ್ಕೊಂಡು ಸುಮ್ನೆ ಹೋಗ್ತಾರಾ?? | Oneindia Kannada

   ಕೊರೊನಾ ವೈರಸ್ ವ್ಯಾಪಕವಾಗಿ ಹರಡಲು ಕೇಂದ್ರ ಸರ್ಕಾರದ ತೀವ್ರ ನಿರ್ಲಕ್ಷ ಧೋರಣೆ ಕಾರಣ. ಕೇಂದ್ರ ಸರ್ಕಾರದ ವೈಫಲ್ಯದಿಂದ ಕೊರೊನಾ ತೀವ್ರವಾಗಿದೆ. ಆದರೆ ಆ ಬಗ್ಗೆ ಪ್ರಧಾನಿ ಮೋದಿ ಅವರು ಅಪ್ಪಿತಪ್ಪಿಯೂ ಬಾಯಿ ಬಿಟ್ಟಿಲ್ಲ. ಬದಲಿಗೆ ಜನರು ಕರ್ತವ್ಯ ಪಾಲನೆ ಮಾಡಬೇಕು ಎಂದು ಬೋಧನೆ ಮಾಡುವ ಮೂಲಕ ತಮ್ಮ ಜವಾಬ್ದಾರಿಯಿಂದ ಪ್ರಧಾನಿ ಜಾರಿಕೊಂಡಿದ್ದಾರೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಲೇವಡಿ ಮಾಡಿದ್ದಾರೆ.

   English summary
   KPCC Former President Dinesh Gundu Rao has vehemently opposed Prime Minister Modi address to the nation. Dinesh Gundu Rao said that Prime Minister Modi has again played a guest role. Know more,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X