• search

ಚಿತ್ರಗಳು : ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅಧಿಕಾರ ಸ್ವೀಕಾರ

By Gururaj
Subscribe to Oneindia Kannada
For Quick Alerts
ALLOW NOTIFICATIONS
For Daily Alerts
    ಲೋಕಸಭಾ ಚುನಾವಣೆ 2019ರಲ್ಲಿ ಬಿಜೆಪಿಯನ್ನ ಸೋಲಿಸುವುದು ದಿನೇಶ್ ಗುಂಡೂರಾವ್ ಗುರಿ

    ಬೆಂಗಳೂರು, ಜುಲೈ 11 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಇಂದು ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕಾರ ಸಮಾರಂಭ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಆಯಿತು.

    ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಬುಧವಾರ ಡಾ.ಜಿ.ಪರಮೇಶ್ವರ ಅವರು ದಿನೇಶ್ ಗುಂಡೂರಾವ್ ಅವರಿಗೆ ಬಾವುಟ ನೀಡುವ ಮೂಲಕ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರ ಮಾಡಿದರು.

    ದಿನೇಶ್ ಗುಂಡೂರಾವ್ ಪದಗ್ರಹಣಕ್ಕೆ ಅತೃಪ್ತರು ಗೈರಾದರೆ..?

    ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಡಾ.ಜಿ.ಪರಮೇಶ್ವರ ಕೊನೆ ಭಾಷಣ ಮಾಡಿದರು. 2010ರಿಂದ 7 ವರ್ಷ 8 ತಿಂಗಳ ಕಾಲ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಸುಧೀರ್ಘ ಅವಧಿಯ ಕಾಲ ಅಧ್ಯಕ್ಷರಾಗಿದ್ದ ದಾಖಲೆಯನ್ನೂ ಅವರು ಬರೆದಿದ್ದಾರೆ.

    ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಂದಿರುವ ಸವಾಲುಗಳು!

    'ರಾಹುಲ್ ಗಾಂಧಿ ಅವರು ನನ್ನ ಮತ್ತು ಪರಮೇಶ್ವರ ಅವರ ಮೇಲೆ ಅಪಾರವಾದ ವಿಶ್ವಾಸವನ್ನು ಇಟ್ಟಿದ್ದರು. ಆದರೆ, ಅದನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ' ಎಂದು ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು.

    ಅಧಿಕಾರ ಸ್ವೀಕಾರ

    ಅಧಿಕಾರ ಸ್ವೀಕಾರ

    ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಮತ್ತು ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿದರು.

    ಕೆ.ಸಿ.ವೇಣುಗೋಪಾಲ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ, ಸಚಿವ ಡಿ.ಕೆ.ಶಿವಕುಮಾರ್, ಹಿರಿಯ ನಾಯಕರಾದ ಕೆ.ಎಚ್.ಮುನಿಯಪ್ಪ, ಎಚ್.ಕೆ.ಪಾಟೀಲ್ ಸೇರಿದಂತೆ ಹಲವು ನಾಯಕರು ನೂತನ ಅಧ್ಯಕ್ಷರ ಪದಗ್ರಹಣಕ್ಕೆ ಸಾಕ್ಷಿಯಾದರು.

    ಅಧಿಕಾರ ಹಸ್ತಾಂತರ ಮಾಡಿದ ಪರಮೇಶ್ವರ

    ಅಧಿಕಾರ ಹಸ್ತಾಂತರ ಮಾಡಿದ ಪರಮೇಶ್ವರ

    ದಿನೇಶ್ ಗುಂಡೂರಾವ್ ಅವರಿಗೆ ಡಾ.ಜಿ.ಪರಮೇಶ್ವರ ಬಾವುಟ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. 'ರಾಜ್ಯದ ಎಲ್ಲಾ ಕಾರ್ಯಕರ್ತರ ಶಕ್ತಿಯನ್ನು ನಿಮಗೆ ನೀಡುತ್ತಿದ್ದೇವೆ. ನೀವು ಪಕ್ಷವನ್ನು ಮತ್ತಷ್ಟು ಬಲಪಡಿಸಿ' ಎಂದು ಪರಮೇಶ್ವರ ಸಲಹೆ ನೀಡಿದರು.

    '2010ರಲ್ಲಿ ಸೋನಿಯಾ ಗಾಂಧಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ನೀಡಿದರು. 7 ವರ್ಷ 8 ತಿಂಗಳ ಕಾಲ ನಾನು ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ಸಹಾಯ ಮಾಡಿದ್ದಾರೆ. ಹಲವು ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಾಗಲಿಲ್ಲ' ಎಂದು ಬೇಸರ ವ್ಯಕ್ತಪಡಿಸಿದರು.

    ಭಾರತ ದೇಶ ಆತಂಕದಲ್ಲಿದೆ

    ಭಾರತ ದೇಶ ಆತಂಕದಲ್ಲಿದೆ

    ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, 'ನರೇಂದ್ರ ಮೋದಿ ಅವರ ಅಧಿಕಾರದಲ್ಲಿ ಭಾರತ ದೇಶ ಆತಂಕದಲ್ಲಿದೆ. ನಮ್ಮ ಪ್ರಮುಖ ಗುರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು' ಎಂದು ಹೇಳಿದರು.

    'ಇಂದು ನನಗೆ ಸಂತಸವಾಗುತ್ತಿದೆ. ರಾಹುಲ್ ಗಾಂಧಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ಈ ಜವಾಬ್ದಾರಿಯನ್ನು ನೀಡಿದ್ದಾರೆ. ಪಕ್ಷದ ತತ್ವ, ಸಿದ್ದಾಂತಗಳು ಮತ್ತು ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು' ಎಂದು ಅವರು ಸೂಚನೆ ನೀಡಿದ್ದಾರೆ ಎಂದರು.

    ಸಿದ್ದರಾಮಯ್ಯ ಹೇಳಿದ್ದೇನು?

    ಸಿದ್ದರಾಮಯ್ಯ ಹೇಳಿದ್ದೇನು?

    ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ ಎಂಬ ವಿಶ್ವಾಸವನ್ನು ರಾಹುಲ್ ಗಾಂಧಿ ಅವರು ಇಟ್ಟುಕೊಂಡಿದ್ದರು. ಅವರು ಇಟ್ಟಿದ್ದ ನಂಬಿಕೆಯನ್ನು ಉಳಿಸಿಕೊಳ್ಳಲು ನಾನು ಮತ್ತು ಪರಮೇಶ್ವರ ಅವರು ವಿಫಲರಾಗಿದ್ದೇವೆ' ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

    'ಬಿಜೆಪಿ ನಾಯಕರ ಅಪಪ್ರಚಾರದಿಂದಾಗಿ ಕಾಂಗ್ರೆಸ್ ಪಕ್ಷ ನಿರೀಕ್ಷಿತ ಸ್ಥಾನಗಳಲ್ಲಿ ಜಯಗಳಿಸಲು ವಿಫಲವಾಯಿತು. ಕಾಂಗ್ರೆಸ್ ನೀಡಿದ ಜನಪ್ರಿಯ ಕಾರ್ಯಕ್ರಮ ಮತ್ತು ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಿಜೆಪಿಯವರು ಸುಳ್ಳು ಪ್ರಚಾರ ಮಾಡಿದರು' ಎಂದು ಸಿದ್ದರಾಮಯ್ಯ ಆರೋಪ ಮಾಡಿದರು.

    ಡಿ.ಕೆ.ಶಿವಕುಮಾರ್ ಹೇಳಿದ್ದೇನು?

    ಡಿ.ಕೆ.ಶಿವಕುಮಾರ್ ಹೇಳಿದ್ದೇನು?

    ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ದಿನೇಶ್ ಗುಂಡೂರಾವ್ ಮತ್ತು ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಅವರಿಗೆ ಸಚಿವ ಡಿ.ಕೆ.ಶಿವಕುಮಾರ್ ಅಭಿನಂದನೆ ಸಲ್ಲಿಸಿದರು.

    'ರಾಜ್ಯದ 224 ಕ್ಷೇತ್ರಗಳಲ್ಲಿಯೂ ಪಕ್ಷವನ್ನು ಬಲಪಡಿಸಬೇಕಾಗಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನಗಳನ್ನು ಗಳಿಸಲು ಎಲ್ಲರೂ ಒಟ್ಟಾಗಿ ಪ್ರಯತ್ನ ನಡೆಸಬೇಕು' ಎಂದು ಕರೆ ನೀಡಿದರು.

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    In a huge party rally Dinesh Gundu Rao took charge as president of Karnataka Pradesh Congress Committee (KPCC) on Wednesday, July 11, 2018.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more