ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾದ ಕಾಂಗ್ರೆಸ್

Posted By:
Subscribe to Oneindia Kannada

ಬೆಂಗಳೂರು, ಜೂನ್ 23 : ಕರ್ನಾಟಕ ಕಾಂಗ್ರೆಸ್‌ನಲ್ಲಿನ ಅಸಮಾಧಾನವನ್ನು ಶಮನಗೊಳಿಸುವ ಕಾರ್ಯಕ್ಕೆ ಹಿರಿಯ ನಾಯಕರು ಕೈ ಹಾಕಿದ್ದಾರೆ. ಅತೃಪ್ತ ಶಾಸಕರ ಜೊತೆ ಮಾತುಕತೆ ನಡೆಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಸೂಚನೆ ನೀಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ದಿನೇಶ್ ಗುಂಡೂರಾವ್ ಅವರಿಗೆ ಸೂಚನೆ ಕೊಟ್ಟಿದ್ದಾರೆ. ಮೊದಲ ಹಂತದಲ್ಲಿ ಮಂಡ್ಯ ಶಾಸಕ ಅಂಬರೀಶ್ ಅವರನ್ನು ಭೇಟಿ ಮಾಡಲು ದಿನೇಶ್ ಗುಂಡೂರಾವ್ ಅವರ ನಿವಾಸಕ್ಕೆ ತೆರಳಿದರು. ['ಸಿಎಂ ಏನು ದೊಡ್ಡ ಬೆಟ್ಟನಾ?, ಅವನಿನ್ನೂ ಹುಡುಗ']

dinesh gundu rao

ಗುರುವಾರ ಬೆಳಗ್ಗೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪಕ್ಷದಲ್ಲಿನ ಅಸಮಾಧಾನದ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರ ಮನವೊಲಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದ್ದು, ಈ ಕುರಿತು ದಿನೇಶ್ ಗುಂಡೂರಾವ್ ಅವರಿಗೆ ಸೂಚನೆ ನೀಡಲಾಗಿದೆ. [ಕಾಂಗ್ರೆಸ್ ಬಿಕ್ಕಟ್ಟು, ಬುಧವಾರದ ಬೆಳವಣಿಗೆಗಳು]

ಅತೃಪ್ತ ಶಾಸಕರ ಸಭೆ : ಅಫ್ಜಲ್‌ಪುರ ಶಾಸಕ ಮಾಲೀಕಯ್ಯ ಗುತ್ತೇದಾರ್, ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ್, ಯಾದಗಿರಿ ಶಾಸಕ ಡಾ. ಎ.ಬಿ. ಮಾಲಕರೆಡ್ಡಿ ಮುಂತಾದ ಶಾಸಕರ ವಿಕಾಸಸೌಧದಲ್ಲಿ ಸಭೆ ನಡೆಸುತ್ತಿದ್ದಾರೆ. ಸಭೆಯ ಬಳಿಕ ಎಲ್ಲಾ ಶಾಸಕರು ಅಂಬರೀಶ್ ಮತ್ತು ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Crisis in Karnataka Congress after cabinet reshuffle. KPCC's working president Dinesh Gundu Rao to meet rebel MLA's.
Please Wait while comments are loading...