ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗೈರು ಹಾಜರಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ

By Gururaj
|
Google Oneindia Kannada News

ಬೆಂಗಳೂರು, ಜುಲೈ 09 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ದಿನೇಶ್ ಗುಂಡೂರಾವ್ ಜುಲೈ 11ರಂದು ಅಧಿಕಾರ ಸ್ವೀಕರಿಸಲಿದ್ದಾರೆ. ಅಂದು ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ.

ಗಾಂಧಿನಗರ ಕ್ಷೇತ್ರದ ಶಾಸಕ, ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮಾಜಿ ಸಚಿವ ಈಶ್ವರ ಖಂಡ್ರೆ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇಬ್ಬರು ನಾಯಕರು ಬುಧವಾರ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಅಧಿಕೃತ ಪ್ರಕಟಣೆಕೆಪಿಸಿಸಿ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್, ಅಧಿಕೃತ ಪ್ರಕಟಣೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಜುಲೈ 11ರ ಬುಧವಾರ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಇಬ್ಬರು ನಾಯಕರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಆದರೆ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿಲ್ಲ.

Dinesh Gundu Rao to take charge on July 11

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಂದಿರುವ ಸವಾಲುಗಳು!ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮುಂದಿರುವ ಸವಾಲುಗಳು!

ಕಾಂಗ್ರೆಸ್ ಪಕ್ಷದ ಕರ್ನಾಟಕ ಉಸ್ತುವಾರಿ ದಿನೇಶ್ ಗುಂಡೂರಾವ್, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮುಂತಾದ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜುಲೈ 10ರಂದು ದಿನೇಶ್ ಗುಂಡೂರಾವ್ ಮತ್ತು ಈಶ್ವರ ಖಂಡ್ರೆ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಜೂನ್ 11ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಸಮನ್ವಯ ಸಮಿತಿಯಲ್ಲಿ ಸ್ಥಾನ? : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಸಮನ್ವಯ ಸಮಿತಿಗೆ ಸೇರಿಸಿಕೊಳ್ಳುವ ಬಗ್ಗೆ ಕೆ.ಸಿ.ವೇಣುಗೋಪಾಲ್ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಸಮಿತಿಯಲ್ಲಿ ಈಗಾಗಲೇ ಕಾಂಗ್ರೆಸ್‌ನ 3, ಜೆಡಿಎಸ್‌ನ ಇಬ್ಬರು ಸದಸ್ಯರಿದ್ದಾರೆ.

English summary
Congress leader and Former minister Dinesh Gundu Rao who has been appointed as the president of Karnataka Pradesh Congress Committee (KPCC) will take charge on Wednesday, July 11, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X