ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ದಿನೇಶ್ ಗುಂಡೂರಾವ್
ಚಿಕ್ಕಮಗಳೂರು, ಜುಲೈ 04 : ಮಾಜಿ ಸಚಿವ ದಿನೇಶ್ ಗುಂಡೂರಾವ್ ಇಂದು ಕುಟುಂಬ ಸಮೇತ ಶೃಂಗೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಎಐಸಿಸಿ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.
ಜುಲೈ 4ರ ಬುಧವಾರ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರ ಹುಟ್ಟು ಹಬ್ಬ. ಆದ್ದರಿಂದ ದಿನೇಶ್ ಗುಂಡೂರಾವ್ ಅವರು ಕುಟುಂಬ ಸಮೇತ ಶೃಂಗೇರಿಗೆ ಭೇಟಿ ನೀಡಿದರು. ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು.

ದಿನೇಶ್ ಗುಂಡೂರಾವ್, ಟಬು ರಾವ್, ಮಕ್ಕಳಾದ ಅನನ್ಯ, ಅಮೀರಾ ಅವರು ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಮಧ್ಯಾಹ್ನ ಎಐಸಿಸಿ ದಿನೇಶ್ ಗುಂಡೂರಾವ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಿದೆ. ಶೃಂಗೇರಿಯಲ್ಲಿದ್ದ ಅವರು ತಕ್ಷಣ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ರಾತ್ರಿ ಅವರು ದೆಹಲಿಗೆ ಪ್ರಯಾಣ ಮಾಡಲಿದ್ದು, ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ.












Click it and Unblock the Notifications