ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕುತ್ತಿರುವ ಬಿಜೆಪಿ ಸರ್ಕಾರ!

|
Google Oneindia Kannada News

ಬೆಂಗಳೂರು, ಅ. 10: ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ರಾಜ್ಯ ಬಿಜೆಪಿ ಸರ್ಕಾರ ಆಡಳಿತ ಮಾಡುತ್ತಿದೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಕೊರೊನಾ ವೈರಸ್ ನಿರ್ವಹಣೆ ಕುರಿತಂತೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಪ್ರತಿದಿನ ಸರಾಸರಿ 11 ಸಾವಿರ ಕೋವಿಡ್ ಸೋಂಕಿತರು ಪತ್ತೆಯಾಗುತ್ತಿದ್ದಾರೆ.

ರಾಜ್ಯ ಸರ್ಕಾರ ಪ್ರಾರಂಭದಲ್ಲೇ ಕೋವಿಡ್ ಪರೀಕ್ಷೆ ಹೆಚ್ಚಿಸಿ, ಸೋಂಕಿತರನ್ನು ಪತ್ತೆ ಮಾಡುವ ಮೂಲಕ ಸೋಂಕನ್ನು ನಿಯಂತ್ರಣಕ್ಕೆ ತರಬಹುದಿತ್ತು. ಆದರೆ ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ಸೋಂಕು ವ್ಯಾಪಕವಾದ ಮೇಲೆ ಕೋವಿಡ್ ಟೆಸ್ಟ್‌ ಪ್ರಮಾಣ ಹೆಚ್ಚಿಸಲಾಗಿದೆ. ಇದರಿಂದಾಗಿ ಸೋಂಕು ನಿಯಂತ್ರಣಕ್ಕೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಹೊರ ರಾಜ್ಯಗಳಲ್ಲಿ ಸಕ್ರಿಯ ಸೋಂಕಿತರ ಪ್ರಮಾಣ ಇಳಿಕೆಯಾಗುತ್ತಿದೆ. ಆದರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ ಎಂದಿದ್ದಾರೆ.

Dinesh Gundurao Has Accused State Bjp Government Of Failing To Prevent Spread Of Covid

ರಾಜ್ಯದಲ್ಲಿ ನಿನ್ನೆ ಒಟ್ಟು 10,913 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ, ಮೊನ್ನೆ 10,704 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್‌ನಲ್ಲಿ ಸರ್ಕಾರವನ್ನು ಎಚ್ಚರಿಸಿದ್ದಾರೆ.

English summary
Former KPCC president Dinesh Gundurao has accused the state BJP government of failing to prevent the spread of coronavirus infection.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X