• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪ್ರವಾಹದಿಂದ ಉತ್ತರ ತತ್ತರ: ಉಸ್ತುವಾರಿಗಳು ತರಾಟೆಗೆ!

|

ಬೆಂಗಳೂರು, ಅ. 19: ಉತ್ತರ ಕರ್ನಾಟಕದಲ್ಲಿ ಪ್ರವಾಹ ಸಂಕಷ್ಟದ ಹೊರತಾಗಿಯೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡುತ್ತಿಲ್ಲ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಉತ್ತರ ಕರ್ನಾಟಕದ ಜನ ಪ್ರವಾಹದಿಂದ ಕಣ್ಣೀರು ಹಾಕುತ್ತಿದ್ದಾರೆ. ಆದರೆ ಅನೇಕ ಜಿಲ್ಲೆಗಳ ಉಸ್ತುವಾರಿ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿಯನ್ನು ಕೊಡುತ್ತಿಲ್ಲ.

ಅಧಿಕಾರಿಗಳೊಂದಿಗೆ ಸಭೆ ಮಾಡಿರುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಕೇವಲ ಅಧಿಕಾರಿಗಳೊಂದಿಗೆ ಸಭೆ ಮಾಡಿದ ಮಾತ್ರಕ್ಕೆ ಪ್ರವಾಹ ಪೀಡಿತರ ಸಂಕಷ್ಟ ನಿವಾರಣೆಯಾಗುವುದು ಸಾಧ್ಯವಾ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.

ಸಂತ್ರಸ್ತರ ಗೋಳು ಕೇಳದ ಮೇಲೆ ಉಸ್ತುವಾರಿಯಾದರೂ ಇವರಿಗ್ಯಾಕೆ? ಎಂದು ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಚೂರು, ಬೆಳಗಾವಿ, ಕಲಬುರಗಿ ಹಾಗೂ ಬೀದರ್‌ ಜಿಲ್ಲೆಗಳಲ್ಲಿ ಕಳೆದ ಹತ್ತು ದಿನಗಳಿಂದ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಆದರೆ ಯಾವುದೇ ಸಚಿವರು ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

   Corona ರೋಗದ ಮೊದಲನೇ ಲಕ್ಷಣ ನೆಗಡಿ | Oneindia Kannada

   English summary
   Former KPCC president Dinesh Gundurao has twitted saying that the ministers in charge of the district were not visiting flood-affected areas in North Karnataka despite floods. Know more,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X