ಕರ್ನಾಟಕ; ಕೋವಿಡ್ ಪರೀಕ್ಷೆಗಳ ಸಂಖ್ಯೆಯಲ್ಲಿ ಇಳಿಮುಖ

ಬೆಂಗಳೂರು, ಡಿಸೆಂಬರ್ 02 : ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಸಹ ಒಂದು ಲಕ್ಷದಿಂದ ಇಳಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,86,227.

ಡಿಸೆಂಬರ್ 1ರಂದು ರಾಜ್ಯದಲ್ಲಿ 1,330 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಮಂಗಳವಾರ 94 ಸಾವಿರ ಪರೀಕ್ಷೆಗಳನ್ನು ಮಾಡಲಾಗಿದೆ. ಇವುಗಳಲ್ಲಿ 20,629 ಆಂಟಿಜೆನ್ ಮತ್ತು 74,256 ಆರ್‌ಟಿಪಿಸಿಆರ್ ಪರೀಕ್ಷೆಗಳು ಸೇರಿವೆ.

ಕಳೆದ ಕೆಲವು ದಿನಗಳಿಂದ 1 ಲಕ್ಷಕ್ಕೂ ಅಧಿಕ ಪರೀಕ್ಷೆಗಳನ್ನು ಪ್ರತಿದಿನ ನಡೆಸಲಾಗುತ್ತಿತ್ತು. ಡಿಸೆಂಬರ್ ಆರಂಭದಲ್ಲಿಯೇ ಪರೀಕ್ಷೆಗಳನ್ನು ಕಡಿಮೆ ಮಾಡಲಾಗಿದೆ. ನವೆಂಬರ್ ತಿಂಗಳಿನಲ್ಲಿ ರಾಜ್ಯದಲ್ಲಿ 62,815 ಕೋವಿಡ್ ಪ್ರಕರಣಗಳು ವರದಿಯಾಗಿವೆ.

COVID news

ರಾಜ್ಯದಲ್ಲಿ ಕೋವಿಡ್ ಕಾರಣದಿಂದಾಗಿ ಐಸಿಯುಗೆ ದಾಖಲಾಗುವವರ ಸಂಖ್ಯೆಯೂ ಕಡಿಮೆಯಾಗಿದೆ. 23,709 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. 336 ಜನರು ಐಸಿಯುನಲ್ಲಿದ್ದಾರೆ.

ಬೆಂಗಳೂರು ನಗರದಲ್ಲಿಯೂ ಹೊಸ ಕೋವಿಡ್ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಮಂಗಳವಾರ 758 ಹೊಸ ಪ್ರಕರಣ ದಾಖಲಾಗಿದ್ದು, ಒಟ್ಟು ಪ್ರಕರಣಗಳು 3,70,492.

ಹಾಸನ 50, ತುಮಕೂರು 49, ಮಂಡ್ಯದಲ್ಲಿ 40 ಜಿಲ್ಲೆಗಳಲ್ಲಿ ದಾಖಲಾದ ಅತಿ ಹೆಚ್ಚಿನ ಪ್ರಕರಣಗಳಾಗಿವೆ. ಕರ್ನಾಟಕದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 23,709. ಇವುಗಳಲ್ಲಿ ಬೆಂಗಳೂರು ನಗರದಲ್ಲಿ 17,866 ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+