ಹಾಸನ : ಅ.31ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಹಾಸನ, ಅ.30 : ಹಾಸನ ಹಾಗೂ ಬೆಂಗಳೂರಿನ ಹೆಸರಾಂತ ಕಂಪನಿಗಳು ವಿವಿಧ ಹುದ್ದೆಗಳ ಭರ್ತಿಗಾಗಿ ಅ.31ರ ಶುಕ್ರವಾರ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುತ್ತಿವೆ. ಆಸಕ್ತರು ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಶುಕ್ರವಾರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ. ಆಸಕ್ತರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Job

ಎಸ್ಎಸ್ಎಲ್‌ಸಿ/ಪಿಯುಸಿ/ಪದವಿ/ ಐಟಿಐ (ಫಿಟ್ಟರ್, ಎಲೆಕ್ಟ್ರೀಕಲ್) ಹಾಗೂ ಡಿಪ್ಲೋಮೋ (ಎಲೆಕ್ಟ್ರೀಕಲ್, ಎಲೆಕ್ಟ್ರಾನಿಕ್ಸ್ ,ಮೆಕಾನಿಕಲ್ )ನಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನಿರುದ್ಯೋಗಿ ಯುವಕ/ಯುವತಿಯರು ತಮ್ಮ ಮೂಲ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಮನವಿ ಮಾಡಲಾಗಿದೆ. [ಒನ್ಇಂಡಿಯಾದಿಂದ ಉದ್ಯೋಗ ಹುಡುಕಾಟ ಸೇವೆ]

ಹೆಚ್ಚಿನ ಮಾಹಿತಿಗಾಗಿ : ಸಂದರ್ಶನದ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಜೆ.ಬಿ.ವಿಜಯಲಕ್ಷ್ಮೀ ಅವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 268374 ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನ.1ರಂದು ಪುಸ್ತಕ ಪ್ರದರ್ಶನ : ಹಾಸನ ನಗರ ಕೇಂದ್ರ ಗ್ರಂಥಾಲಯದ ಪರಾಮರ್ಶನ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ನವೆಂಬರ್ 1ರಂದು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿದೆ. ಸಾರ್ವಜನಿಕ ಓದುಗರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+