North Karnataka Heavy Rains: ಕರ್ನಾಟಕದಲ್ಲಿ ವರುಣಾರ್ಭಟ: ಈ ಭಾಗದಲ್ಲಿ ಪ್ರವಾಹ ಪರಿಸ್ಥಿತಿ, ಭಾರೀ ಸಂಕಷ್ಟ!
ಕರ್ನಾಟಕದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳು ಹಾಗೂ ಕರಾವಳಿ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಘಟಪ್ರಭಾ ನದಿ ಪ್ರವಾಹಕ್ಕೆ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಭಾಗದಲ್ಲಿ ಸೊಂಟದ ವರೆಗೆ ನೀರು ನಿಂತಿದೆ. ಗೋಕಾಕ್ ನಗರದಲ್ಲಿ ಸಂಪೂರ್ಣ ಪ್ರವಾಹ ಸೃಷ್ಟಿಯಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು. ಬೆಳಗಾವಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ಮಹಾರಾಷ್ಟ್ರದ ಹಲವು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ಇದರಿಂದ ಉತ್ತರ ಕರ್ನಾಟಕದ ಹಲವು ಪ್ರದೇಶಗಳ ಮೇಲೆ ಪರಿಣಾಮ ಬೀರಿದೆ. ಅಪಾಯದ ಮಟ್ಟವನ್ನು ಮೀರಿ ಮಹಾರಾಷ್ಟ್ರದಲ್ಲಿ ಮಳೆ ಆಗಿದೆ. ಮಹಾರಾಷ್ಟ್ರದ ಮಿಠಿ ನದಿಯ ಪ್ರವಾಹದಿಂದಾಗಿ ಅಲ್ಲಿ ಜನ ಜೀವನ ಸಂಪೂರ್ಣವಾಗಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.

ಯಾದಗಿರಿ, ಕಲಬುರಗಿ, ಹುಬ್ಬಳ್ಳಿ - ಧಾರವಾಡ, ಹಾವೇರಿ, ಉತ್ತರ ಕನ್ನಡ ಹಾಗೂ ಬೆಳಗಾವಿಯಲ್ಲಿ ಭಾರೀ ಪ್ರವಾಹ ಸೃಷ್ಟಿಯಾಗಿದೆ. ಉತ್ತರದಲ್ಲಿ ಆಲಮಟ್ಟಿ ತುಂಬಿ ಹರಿಯುತ್ತಿದೆ. ಅಲ್ಲದೇ ಕೃಷ್ಣ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ಒಳಹರಿವು ಬಂದಿದೆ. ವಿವಿಧ ಜಿಲ್ಲೆಗಳಲ್ಲಿ ಕೆರೆಗಳು ಕೋಡಿ ಬಿದ್ದು ಅವಾಂತರ ನಿರ್ಮಾಣವಾಗಿದೆ. ಕಲಬುರಗಿಯಲ್ಲಿ ಧಾರಾಕಾರ ಮಳೆ ಆಗುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಘಟಪ್ರಭಾದಿಂದ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಮಹಾರಾಷ್ಟ್ರದಲ್ಲಿ ಮಹಾ ಪ್ರವಾಹ ಸೃಷ್ಟಿಯಾಗಿದೆ.
ದಾವಣಗೆರೆ, ಚಾಮರಾಜನಗರ ಹಾಗೂ ಬೆಳಗಾವಿ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು. ಮನೆಗಳ ಕುಸಿತ ಹಾಗೂ ಕೃಷಿಗೆ ಅಪಾರ ನಷ್ಟವಾಗಿದೆ.
ಗೋಕಾಕದಲ್ಲಿ ಭಾರೀ ಸಂಕಷ್ಟ: ಬೆಳಗಾವಿಯ ಗೋಕಾಕ ಪ್ರದೇಶದಲ್ಲಿ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಘಟಪ್ರಭಾ ನದಿಯ ಗೋಕಾಕ - ಶಿಂಗಳಾಪುರ ಸೇತುವೆಯು ನದಿ ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿದೆ. ಇನ್ನು ಮಹಾರಾಷ್ಟ್ರದಲ್ಲಿ ಭಾರೀ ಮಳೆ ಅವಾಂತರ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಬರೋಬ್ಬರಿ 53,000 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಒಂದೊಮ್ಮೆ ಮಹಾರಾಷ್ಟ್ರದಿಂದ ಮತ್ತೆ 2 ಕ್ಯೂಸೆಕ್ ನೀರು ಬಿಟ್ಟರೆ ಮಾತ್ರ ಜಿಲ್ಲೆಯಲ್ಲಿ ಇನ್ನಷ್ಟು ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಲಿದೆ ಎಂದು ಹೇಳಲಾಗಿದೆ.
ಮಳೆಗೆ ಮುಳುಗಿದ ಮುಂಬೈ: ಭಾರೀ ಹಾಗೂ ನಿರಂತರ ಮಳೆಯಿಂದಾಗಿ ನೆರೆಯ ಮಹಾರಾಷ್ಟ್ರದಲ್ಲಿ ಅಕ್ಷರಶಃ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಾರಾಷ್ಟ್ರದ ಹಲವು ಭಾಗದಲ್ಲಿ ಇಂದೂ ಸಹ ಆರೆಂಜ್ ಅಲರ್ಟ್ ಮುಂದುವರಿಸಲಾಗಿದೆ. ಅನಿವಾರ್ಯ ಕಾರಣಗಳನ್ನು ಹೊರತುಪಡಿಸಿ ಮನೆಗಳಿಂದ ಹೊರಗೆ ಬರದಂತೆ ಮಹಾರಾಷ್ಟ್ರ ಸರ್ಕಾರವು ಎಚ್ಚರಿಕೆ ಕೊಟ್ಟಿದೆ. ಈ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮುಂಬೈನ ಹಲವು ಪ್ರಮುಖ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ ರಸ್ತೆಗಳಲ್ಲಿ ಮೂರರಿಂದ ನಾಲ್ಕು ಅಡಿಗಳಷ್ಟು ನೀರು ನಿಲ್ಲುತ್ತಿದೆ.












Click it and Unblock the Notifications