ಕೈ ಪಾಳೆಯದಲ್ಲಿ ಅಸಮಾಧಾನದ ಕಿಚ್ಚು: ಸಿಎಂ ಪಾಲಿಗೆ ತಲೆನೋವಾದ ಶಾಸಕರ ಮುನಿಸು!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸರಿಯಾಗಿ ಐದು ತಿಂಗಳಾಗಿಲ್ಲ. ಅದಾಗಲೆ ಕೈ ಪಾಳೆಯದಲ್ಲಿ ಅಸಮಾಧಾನದ ಕಿಚ್ಚು ಬೂದಿ ಮುಚ್ಚಿದ ಕೆಂಡದಂತೆ ಸ್ಪೋಟಗೊಳ್ಳಲು ಕಾಯುತ್ತಿದೆ.
ಹೌದು ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನದ ಕಿಚ್ಚು ಹೊತ್ತಿಕೊಂಡಿದೆ. ವರ್ಗಾವಣೆ ವಿಚಾರದಲ್ಲಿ ಸಚಿವರು ತಮ್ಮ ಮಾತಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಶಾಸಕರು ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಇದೇ 27ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ (ಸಿಎಲ್‌ಪಿ) ಈ ವಿಷಯ ಪ್ರಸ್ತಾಪಿಸಲು ಮುಂದಾಗಿದ್ದಾರೆ. 20ಕ್ಕೂ ಹೆಚ್ಚು ಸಚಿವರ ವಿರುದ್ಧ ಶಾಸಕರು ದೂರು ನೀಡಿದ್ದಾರೆ. 30 ಕ್ಕೂ ಹೆಚ್ಚು ಶಾಸಕರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜುಲೈ 27ರಂದು ಸಂಜೆ 6.30ಕ್ಕೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಹೋಟೆಲ್ ರ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಅಸಮಧಾನಗೊಂಡ ಶಾಸಕರೆಲ್ಲರೂ ಸೇರಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಕೂಡ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.
'ಸರ್ಕಾರ ಅಸ್ತಿತ್ವಕ್ಕೆ ಬಂದ ಎರಡು ತಿಂಗಳ ಕಳೆದಿದ್ದು, ಸಚಿವರ ಕಾರ್ಯವೈಖರಿಯ ಬಗ್ಗೆ ಸಭೆಯಲ್ಲಿ ಪರಿಶೀಲನೆ ನಡೆಯಲಿದೆ. ಆದರೆ, ಸಚಿವರು ತಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿದೆ ಸ್ಪಂದಿಸುತ್ತಿಲ್ಲವೆಂದು ಕೆಲವು ಶಾಸಕರು ಈಗಾಗಲೇ ಪಕ್ಷದ ನಾಯಕರಲ್ಲಿ ಅಸಮಧಾನ ತೋಡಿಕೊಮಡಿದ್ದಾರೆ. ಮುಖ್ಯವಾಗಿ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅಧಿಕಾರಿ, ನೌಕರರ ವರ್ಗಾವಣೆಗೆ ಮಾಡಿದ ಶಿಫಾರಸುಗಳಿಗೆ ಬೆಲೆ ನೀಡುತ್ತಿಲ್ಲ. ಈ ವಿಚಾರವನ್ನು ಸಭೆಯಲ್ಲಿ ಪ್ರಸ್ತಾಪಿಸಲು ಕೆಲವರು ನಿರ್ಧರಸಿದ್ದಾರೆ ಎಂದು ಶಾಸಕರೊಬ್ಬರು ಹೇಳಿದರು.
ಚುನಾವಣೆಯಲ್ಲಿ ಘೋಷಿಸಿದ್ದ 'ಗ್ಯಾರಂಟಿಗಳ ಪೈಕಿ, ಶಕ್ತಿ, ಅನ್ನ ಭಾಗ್ಯ(ಐದು ಕೆಜಿ ಹೆಚ್ಚುವರಿ ಅಕ್ಕ್ಕಿ ಬದಲು 170ನಗರು) ಗೃಹ ಜ್ಯೋತಿ, ಗೃಹ ಲಕ್ಷ್ಮಿ ಯೋಜನೆಗಳು ಈಗಾಗಲೇ ಜಾರಿಗೆ ಬಂದಿವೆ. 'ಯುವ ನಿಧಿ'ಗೆ ಇನ್ನಷ್ಟೇ ಚಾಲನೆ ಸಿಗಬೇಕಿದೆ. ಈ ಗ್ಯಾರಂಟಿಗಳ ಜಾರಿಗೆ ಕಾರಣಕ್ಕೆ ಈ ಬಾರಿ ಶಾಕಸರ ವಿಶೇಷ ಅನುದಾನಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ. ಇದು ಕೂಡಾ ಕೆಲವು ಶಾಸಕರ ಕೋಪಕ್ಕೆ ಕಾರಣವಾಗಿದೆ.

ವಿಶೇಷ ಅನುಧಾನ ನೀಡದೇ ಇದ್ದರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾದರೂ ಹೇಗೆ ಎಂದು ಪ್ರಶ್ನೆಇಸಲು ಕೆಲವರು ತೀರ್ಮಾನಿಸಿದ್ದಾರೆ ಎಂದೂ ಗೊತ್ತಾಗಿದೆ. ವಿಧಾನ ಮಂಡಲ ಅಧಿವೇಶನ ಈಗಷ್ಟೆ ಮುಗಿದಿದೆ. ಬಜೆಟ್ ಘೋಷಣೆಗಳು ಅನುಷ್ಠಾನಗೊಳ್ಳಬೇಕಿವೆ.
ಆ ಬೆನ್ನಲ್ಲೇ, ಜಂಟಿ ಹೋರಾಟಕ್ಕೆ ಬೀಜೆಪಿ-ಜೆಡಿಎಸ್ ಮುಂಗಾಗಿವೆ. ವಿರೋಧ ಪಕ್ಷಗಳ ಸಂಘಟಿತ ಹೋರಾಟವನ್ನು ಒಗ್ಗಟ್ಟಿನಿಂದ ಎದುರಿಸಲು ರೂಪಿಸಬೇಕಾದ ಕಾರ್ಯತಂತ್ರ, 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಿನಿಂದಲೇ ಸಿದ್ದತೆ ಆರಂಭಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.












Click it and Unblock the Notifications