ಕಾವೇರಿ ಹೋರಾಟದ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಬೆಂಗಳೂರಿನಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ಪ್ರತಿಭಟನೆ ತೀವ್ರವಾಗಿದೆ. ರೈತರು ಹಾಗೂ ಕನ್ನಡಪರ ಸಂಘಟನೆಗಳ ಹೋರಾಟಗಾರರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲೇ ಸಿನಿಮಾ ನಟರು ಕೂಡ ಅಖಾಡ ಪ್ರವೇಶ ಮಾಡಿದ್ದು, ಕಾವೇರಿ ವಿವಾದದ ಬಗ್ಗೆ ಮಾತನಾಡಿದ್ದಾರೆ. ಅದೇ ರೀತಿ ನಟ ಕಿಚ್ಚ ಸುದೀಪ್ ಕೂಡ ಕಾವೇರಿ ಹೋರಾಟದ ಕುರಿತು ಕನ್ನಡಿಗರಿಗೆ ಸಂದೇಶ ಕಳುಹಿಸಿದ್ದಾರೆ.

ಕಾವೇರಿ ನದಿ ಭಾಗದಲ್ಲಿ ಈ ಬಾರಿ ತೀವ್ರ ಮಳೆ ಕೊರತೆ ಉಂಟಾಗಿದ್ದು ಕುಡಿಯುವ ನೀರು ಕೂಡ ಸಿಗದ ಪರಿಸ್ಥಿತಿ ಎದುರಾಗಿದೆ. ಮುಂದಿನ ಬೇಸಿಗೆ ಹೊತ್ತಿಗೆ ರಾಜ್ಯದಲ್ಲಿ ನೀರಿಗಾಗಿ ಭಾರಿ ಕೊರತೆ ಎದುರಾಗಲಿದೆ. ಇದೇ ಸಂದರ್ಭದಲ್ಲಿ ತಮಿಳುನಾಡು ನೀರಿನ ವಿಚಾರ ಮುಂದಿಟ್ಟುಕೊಂಡು, ನೀರು ಬಿಡಿ ಅಂತಾ ಟಾರ್ಚರ್ ಮಾಡುತ್ತಿದೆ. ಈ ಕುರಿತು ಕನ್ನಡಿಗರು ಸಿಡಿದೆದ್ದು, ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಇನ್ನು ಈ ವಿಚಾರವಾಗಿ ನಟ ಕಿಚ್ಚ ಸುದೀಪ್ ಕೂಡ ಮಾತನಾಡಿದ್ದಾರೆ.

Discover how Actor Kiccha Sudeep responds for Cauvery Protest

ಕಿಚ್ಚ ಸುದೀಪ್ ಹೇಳಿದ್ದು ಏನು?

'ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ, ಕನ್ನಡ ಪರ ಸಂಘಟನೆಗಳು ರೈತರು ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ನೆಲ ಜಲ ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ' ಎಂದಿದ್ದಾರೆ ಕಿಚ್ಚ ಸುದೀಪ್.

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿ

ಹಾಗೇ ತಮ್ಮ ಮಾತು ಮುಂದುವರಿಸಿ, 'ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿ ತಂತ್ರಜ್ಞರು ಕೂಡಲೇ ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕ ದ ಬರ ಪರಿಸ್ಥಿತಿ ಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ. ಹಿಂದಿನ ಕೆಲವು ಮುಖ್ಯಮಂತ್ರಿ ಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರು ತಮಿಳುನಾಡಿನ ಮುಖ್ಯ ಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆ ಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕ ವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ.'

Discover how Actor Kiccha Sudeep responds for Cauvery Protest

ಉತ್ತರ ಕರ್ನಾಟಕದ ನೀರಿನ ಸಮಸ್ಯೆ...

'ಸದ್ಯದ ಬರ -ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ ದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿ. ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ -ಮಹದಾಯಿ ನದಿ ಮತ್ತು ಕಳ ಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕು' ಎಂದು ಕನ್ನಡಿಗರಿಗೆ ಕಿಚ್ಚ ಸಂದೇಶ ಕಳುಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+