ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ನಿರ್ಧಾರ?

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಬದಲಾವಣೆ ಮಾಡಲು ಇದೀಗ ದೆಹಲಿಯಿಂದ ಕಾಂಗ್ರೆಸ್ ಹೈಕಮಾಂಡ್ ವರಿಷ್ಠರು ಪ್ಲಾನ್ ಮಾಡಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ 'ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ' ಸೈಟುಗಳ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಈ ಆರೋಪದ ಬೆನ್ನಲ್ಲೇ ಕಾಂಗ್ರೆಸ್ ಕೇಂದ್ರ ನಾಯಕರು ಎಂತಹ ನಿರ್ಧಾರ ಕೈಗೊಂಡಿದ್ದಾರೆ ಗೊತ್ತೆ? ಹಾಗಾದರೆ ಸಿಎಂ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಈಗ ಕಂಟಕ ಎದುರಾಗಿದೆಯಾ? ಬನ್ನಿ ತಿಳಿಯೋಣ.

ಹೌದು, ಲೋಕಸಭಾ ಚುನಾವಣೆಯ ಸೋಲು ಕಾಂಗ್ರೆಸ್ ಕೇಂದ್ರ ನಾಯಕರನ್ನು ಸಿಕ್ಕಾಪಟ್ಟೆ ರೊಚ್ಚಿಗೆಬ್ಬಿಸಿದೆ. ಇದೇ ಕಾರಣಕ್ಕೆ, ಕಾಂಗ್ರೆಸ್ ಕರ್ನಾಟಕದ ಒಳಗೊಳಗೆ ಫೈಟಿಂಗ್ ಜೋರು ಜೊರಾಗುತ್ತಿದೆ. ಹಾಗೇ ಮುಖ್ಯಮಂತ್ರಿ ಸ್ಥಾನ ಬದಲಾವಣೆಗೆ ಕೂಡ ಸಿದ್ದರಾಮಯ್ಯ ಅವರ ವಿರೋಧಿ ಬಣ ಪ್ರಯತ್ನ ಮಾಡುತ್ತಿದೆ ಎಂಬ ಆರೋಪ ಇದೆ. ಇಷ್ಟೆಲ್ಲದರ ನಡುವೆ ಇದೀಗ ದೂರದ ದೆಹಲಿಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟದ ಸುದ್ದಿಯೊಂದು ಬಂದಿದ್ದು, ಭಾರಿ ಸಂಚಲನ ಸೃಷ್ಟಿಯಾಗಿದೆ. ಹಾಗಾದರೆ, ಸಿಎಂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಲು ಕಾಂಗ್ರೆಸ್ ವರಿಷ್ಠರು ನಿರ್ಧಾರ ಮಾಡಿದ್ದಾರಾ? ಮುಂದೆ ಓದಿ.

Discover How Congress High Command Is Planning To Make Changes In Karnataka Government

ಸಿಎಂ ಸಿದ್ದರಾಮಯ್ಯ ಸ್ಥಾನ ಬದಲಾವಣೆ?

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಸಂಚಲನ ಸೃಷ್ಠಿಯಾಗಿದೆ. ಯಾಕಂದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೂಡಾ ಸೈಟ್ ಹಗರಣ ಆರೋಪ ಗಂಭೀರವಾಗುತ್ತಿದೆ. ಈ ಸಮಯದಲ್ಲೇ ಕರ್ನಾಟಕ ಕಾಂಗ್ರೆಸ್‌ನ ಸಚಿವ ಸ್ಥಾನದ ಆಕಾಂಕ್ಷಿಗಳು ಅಲರ್ಟ್ ಆಗಿದ್ದಾರೆ. ಈ ವಿಚಾರವನ್ನು ನೇರವಾಗಿ ಕಾಂಗ್ರೆಸ್‌ನ ದೆಹಲಿ ನಾಯಕರಿಗೆ ಮುಟ್ಟಿಸಿ ಬಂದಿದ್ದಾರೆ. ಹೀಗೆ ಕರ್ನಾಟಕ ಕಾಂಗ್ರೆಸ್ ಒಳಗೆ ಕಿಚ್ಚು ಹೊತ್ತಿಕೊಂಡಿದೆ ಎಂಬುದನ್ನ ಗಮನಿಸಿರುವ ಕಾಂಗ್ರೆಸ್‌ನ ಕೇಂದ್ರ ನಾಯಕರು, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಭರ್ಜರಿ ಸರ್ಜರಿ ಮಾಡಲು ಇದೀಗ ಮುಂದೆ ಬಂದಿದ್ದಾರೆ.

ಈಗಿರುವ ಮಾಹಿತಿ ಪ್ರಕಾರ ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದ ಬದಲಾವಣೆ ಗ್ಯಾರಂಟಿ ಎನ್ನಲಾಗಿದೆ. ಅದ್ರಲ್ಲೂ ಸಿಎಂ ಸಿದ್ದರಾಮಯ್ಯ ಅವರ ಸ್ಥಾನದ ಮೇಲೆ ತೂಗುಗತ್ತಿ ನೇತಾಡುತ್ತಿದೆ. ಈ ಎಲ್ಲಾ ಕಾರಣಗಳಿಂದ ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ತಯಾರಿಗಳು ಆರಂಭ ಆಗಿವೆ ಎನ್ನಲಾಗುತ್ತಿದೆ. ಆದರೆ ಅಸಲಿ ಮ್ಯಾಟರ್ ಇದಲ್ಲ, ಮೊದಲಿಗೆ ಕರ್ನಾಟಕ ಸರ್ಕಾರದ ಸಂಪುಟ ಪುನರ್ ರಚನೆ ಆಗಲಿದೆ.

ಮಂತ್ರಿ ಪಟ್ಟಕ್ಕೆ ಪೈಪೋಟಿ ಶುರು?

ಈ ಮೂಲಕ ಹೊಸಬರಿಗೆ ಮಂತ್ರಿಗಿರಿ ಸಿಗುವುದು ಗ್ಯಾರಂಟಿ ಎನ್ನಲಾಗಿದೆ. ಅದರ ಜೊತೆಗೆ ಹಾಲಿ ಇರುವ ಸಚಿವರಿಗೆ ಗೇಟ್ ಪಾಸ್ ಕೊಟ್ಟು, ಸಚಿವ ಸ್ಥಾನ ಬೇಕು ಅಂತಾ ಕಾಯುತ್ತಿದ್ದ ಹಲವರಿಗೆ ಪಟ್ಟ ಕಟ್ಟಲು ಸಿದ್ಧತೆ ಸಾಗಿದೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಈಗಿನ ಸ್ಥಿತಿ ನೋಡಿದರೆ ಸಿಎಂ ಸಿದ್ದರಾಮಯ್ಯ ಅವರನ್ನ ಬದಲಾವಣೆ ಮಾಡುವುದು ಅನುಮಾನ. ಆದರೆ ಮೊದಲಿಗೆ ಸಚಿವ ಸಂಪುಟ ಪುನರ್ ರಚನೆ ಮಾಡಿ, ಆ ನಂತರ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+