Rain Alert: ಮಳೆ.. ಮಳೆ.. ಕರ್ನಾಟಕದಲ್ಲಿ ಭರ್ಜರಿ ಮಳೆ ಅಲರ್ಟ್!

ಮನುಷ್ಯನ ಬದುಕಿಗೆ ಮೂಲ ಆಧಾರವೇ ನೀರು, ನೀರು ಇಲ್ಲದೆ ಮನುಷ್ಯನ ಜೀವನ ಊಹೆಗೂ ನಿಲುಕುವುದಿಲ್ಲ. ಹೀಗಾಗಿ ಜೀವಜಲ ಅಂತಾ ಕರೆಯುವ ನೀರನ್ನು ಮನುಷ್ಯ ಸೂಕ್ತ ರೀತಿಯಲ್ಲಿ ಸಂಗ್ರಹ ಮಾಡಿಕೊಳ್ಳಬೇಕು. ಹೀಗಿದ್ದರೂ ಮನುಷ್ಯರು ನೀರಿನ ಸದ್ಬಳಕೆ ಮಾಡಿಕೊಳ್ತಿಲ್ಲ. ಇದೇ ಕಾರಣಕ್ಕೆ ಮನುಷ್ಯ ಈಗ ಹನಿ ಹನಿ ನೀರಿಗೂ ಪರದಾಡುತ್ತಿದ್ದಾನೆ. ಹೀಗಿದ್ದಾಗ ತಕ್ಷಣ ಮಳೆಯ ಆರ್ಭಟ ಶುರುವಾಗದೇ ಇದ್ದರೆ ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ದೊಡ್ಡ ಅನಾಹುತವೇ ಸಂಭವಿಸಲಿದ್ದು, ಇದೇ ಸಮಯದಲ್ಲಿ ಮಳೆ ಬರುವ ಬಗ್ಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ!

ನೀರು ಇಲ್ಲ.. ಎಲ್ಲಾ ಕಡೆಯೂ ಒಣ ಭೂಮಿ ಕಾಣುತ್ತಿದೆ. ಮಳೆ ಇಲ್ಲದೆ ಭೂಮಿ ಸಂಪೂರ್ಣ ಒಣಗಿ ಹೋಗಿದ್ದು, ಜನ ಪರದಾಡುತ್ತಿದ್ದಾರೆ. ಇದೆಲ್ಲವೂ ಮನುಷ್ಯ ಮಾಡುತ್ತಿರುವ ಎಡವಟ್ಟು & ಅಹಂಕಾರದ ಫಲಿತಾಂಶ ಎನ್ನಬಹುದು. ಭೂಮಿ ಮೇಲೆ ಹೇಗೆ ಬದುಕಬೇಕು ಅಂತಾ ನಮ್ಮ ಹಿರಿಯರು ಕಲಿಸಿಕೊಟ್ಟು ಹೋಗಿದ್ದಾರೆ. ಆದರೂ ಮನುಷ್ಯ ಸಾಕಷ್ಟು ಎಡವಟ್ಟು ಮಾಡುತ್ತಾ ಸಮಸ್ಯೆ ಸುಳಿಗೆ ಸಿಲುಕುತ್ತಿದ್ದಾನೆ. ಇದೇ ಸಮಯದಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಜಿಲ್ಲೆ ಜಿಲ್ಲೆಗಳಲ್ಲೂ ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಇಂತಹ ಸಮಯದಲ್ಲೇ ಮಳೆಯ ಬಗ್ಗೆ ಭರ್ಜರಿ ಮುನ್ಸೂಚನೆ ಸಿಕ್ಕಿದೆ. ಹಾಗಾದ್ರೆ ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ? ಬನ್ನಿ ತಿಳಿಯೋಣ.

Discover The Karnataka Rain Forecast On 08 April 2024

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ!

ಏಪ್ರಿಲ್ 12 & ಏಪ್ರಿಲ್ 13 ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ ಇದರ ಜೊತೆಗೆ ಏಪ್ರಿಲ್​ 9ಕ್ಕೆ ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ & ಮೈಸೂರು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಯುಗಾದಿ ಹಬ್ಬದ ಬಳಿಕ ಅಂದ್ರೆ, ಏಪ್ರಿಲ್ 13 ಹಾಗೂ 14 ಕ್ಕೆ ಭರ್ಜರಿ ಮಳೆ ಬೀಳುವ ನಿರೀಕ್ಷೆ ಇದೆ.

ಕಾವೇರಿ ನದಿ ತುಂಬುತ್ತಾ?

ಈಗಾಗಲೇ ಕೊಡಗು ಜಿಲ್ಲೆಯಲ್ಲಿ ಒಂದೆರಡು ಭರ್ಜರಿ ಬೇಸಿಗೆ ಮಳೆ ಬಿದ್ದಿದೆ. ಹೀಗಾಗಿ ಅಲ್ಲಿ ಜನ ಒಂದಷ್ಟು ನಿರೀಕ್ಷೆಯಲ್ಲಿ ಇದ್ದು, ಭರ್ಜರಿ ಮಳೆ ಬೀಳಲಿ ದೇವರೇ ಅಂತಾ ಬೇಡಿದ್ದಾರೆ. ಮತ್ತೊಂದು ಕಡೆ ಮಲೆನಾಡು ಭಾಗದಲ್ಲೂ ಮಳೆಯ ಅಬ್ಬರ ಜೋರಾಗಿದೆ. ಈ ಕಾರಣಕ್ಕೆ ಉತ್ತಮವಾಗಿ ಬೇಸಿಗೆ ಮಳೆ ಬಿದ್ದರೆ ಬಚಾವ್ ಆಗಬಹುದು ಅಂತಿದ್ದಾರೆ ಸ್ಥಳೀಯ ಜನರು.

Discover The Karnataka Rain Forecast On 08 April 2024

ಮೋಡ ಬಿತ್ತನೆ ಮಾಡುತ್ತಾ ಸರ್ಕಾರ?

ಈಗಿನ ಸ್ಥಿತಿ ನೋಡುತ್ತಿದ್ದರೆ ಅಕಸ್ಮಾತ್ ಮಳೆಯ ಕೊರತೆ ಹೀಗೆಯೇ ಮುಂದುವರಿದಿದ್ದೇ ಆದರೆ, ಪರಿಸ್ಥಿತಿ ಕೈಮೀರಿ ಹೋಗಲಿದೆ. ಹೀಗಾಗಿ ರಾಜ್ಯ ಸರ್ಕಾರ ಮೋಡ ಬಿತ್ತನೆ ಮಾಡಿ ಮಳೆ ಬರಿಸಲು ವ್ಯವಸ್ಥೆ ಮಾಡುತ್ತಾ? ಅನ್ನೋ ಕುತೂಹಲ ಕೂಡ ಕಾಡುತ್ತಿದೆ. ಕುತೂಹಲ ಮತ್ತು ಪ್ರಶ್ನೆಗಳಿಗೆ ಉತ್ತರ ಸಿಗಲು ಇನ್ನಷ್ಟು ದಿನ ಕಾದು ನೋಡಬೇಕಿದೆ. ಮತ್ತೊಂದು ಕಡೆ, ಹವಾಮಾನ ಇಲಾಖೆ ನೀಡಿದ ಮಾಹಿತಿ ಪ್ರಕಾರ ಈ ಬಾರಿ ಕರ್ನಾಟಕದಲ್ಲಿ ಉತ್ತಮವಾಗಿ ಮುಂಗಾರು ಮಳೆ ಬೀಳಲಿದೆ ಎನ್ನಲಾಗಿದೆ. ಇದು ಕನ್ನಡಿಗರಿಗೆ ಒಂದಷ್ಟು ಹರ್ಷ ನೀಡಿದ್ದು, ಬೇಸಿಗೆ ಕಾಲದಲ್ಲೂ ಒಂದಷ್ಟು ಮಳೆ ಬಿದ್ದರೆ ಅದೇ ಲಾಟರಿ ಎಂಬಂತಾಗಿದೆ.

ಕರ್ನಾಟಕದ ಪರಿಸ್ಥಿತಿ ಈಗ ಹೇಗಿದೆ?

ಮಳೆ ಬರಬೇಕಿದೆ, ಮಳೆ ಬರದೇ ಇದ್ದರೆ ಪರಿಸ್ಥಿತಿ ಕಷ್ಟವಾಗಲಿದೆ. ಅದರಲ್ಲೂ ಕರ್ನಾಟಕದ ಜನರಿಗೆ ಮಳೆ ಬರದೇ ಇದ್ದರೆ ಪರಿಸ್ಥಿತಿ ಕುತ್ತಿಗೆಗೆ ಬಂದು ಕೂರಲಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ದೊಡ್ಡ ದೊಡ್ಡ ನಗರಗಳಲ್ಲಿ ಕುಡಿವ ನೀರಿಗೆ ಸಮಸ್ಯೆ ಈಗ ಕಾಡತೊಡಗಿದೆ. ಮಳೆ ಬರದೇ ಇದ್ದರೆ ಕನ್ನಡಿಗರ ಪರಿಸ್ಥಿತಿ ವ್ಯತಿರಿಕ್ತ ಆಗಲಿದೆ. ಯಾಕಂದ್ರೆ ಇದೀಗ ಕರ್ನಾಟಕದ ಬಹುತೇಕ ನದಿ & ಕೆರೆ ಸೇರಿದಂತೆ ಜಲ ಮೂಲಗಳು ಬತ್ತಿ ಹೋಗಿವೆ. ಹೀಗಾಗಿ ಮಳೆ ಬರಲೇಬೇಕು ದೇವರೆ ಅಂತಾ ಕಾಯುತ್ತಿದ್ದಾರೆ ಕನ್ನಡಿಗರು. ಹೀಗಿದ್ದಾಗಲೇ, ಭರ್ಜರಿ ಸುದ್ದಿಯನ್ನ ಹವಾಮಾನ ಇಲಾಖೆ ಕೊಟ್ಟಿದೆ. ಕೊಡಗು, ಚಿಕ್ಕಮಗಳೂರು ಸೇರಿ ಶಿವಮೊಗ್ಗ, ದಾವಣಗೆರೆ, ಬೆಳಗಾವಿ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬಿದ್ದಿದೆ. ಈಗ ಇಡೀ ಕರ್ನಾಟಕದಲ್ಲಿ ಮಳೆ ಅಬ್ಬರಿಸುತ್ತೆ ಎನ್ನಲಾಗುತ್ತಿದೆ.

ನೀರು ಬೇಕೆಂದು ತಮಿಳುನಾಡು ಕಿರಿಕ್!

ಒಂದ್ಕಡೆ ಕಳೆದ ವರ್ಷ, ಅಂದ್ರೆ 2023ರಲ್ಲಿ ಕರ್ನಾಟಕದಲ್ಲಿ ಸರಿಯಾಗಿ ಮಳೆಯೇ ಬಂದಿಲ್ಲ ಎಂಬ ಕೊರಗು ಕಾಡುತ್ತಿತ್ತು. ಈ ನಡುವೆಯು ತಮಿಳುನಾಡು ಬೇರೆ ನೀರಿಗಾಗಿ ಭಾರಿ ಕಿರಿ, ಕಿರಿ ಮಾಡಿತ್ತು. ಹೀಗಾಗಿ ಕರ್ನಾಟಕ ಕೂಡ ಸಾಕಷ್ಟು ಪ್ರಮಾಣದ ನೀರನ್ನು ತಮಿಳುನಾಡು ರಾಜ್ಯಕ್ಕೆ ಹರಿಸಿತ್ತು. ಇಷ್ಟೆಲ್ಲದರ ಪರಿಣಾಮ ಇದೀಗ ಬೆಂಗಳೂರಿಗೂ ಮುಂದಿನ ದಿನಗಳಲ್ಲಿ, ಕುಡಿಯುವ ನೀರಿಗೆ ಸಂಕಷ್ಟ ಎದುರಾಗುತ್ತಾ? ಎಂಬ ಪ್ರಶ್ನೆ ಕಾಡುತ್ತಿದೆ. ಆದ್ರೆ ಕರ್ನಾಟಕದ ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ 3 ತಿಂಗಳಿಗೆ ಆಗುವಷ್ಟು ನೀರು ಇದೆ ಎಂದು ಸರ್ಕಾರದಿಂದ ಮಾಹಿತಿ ಸಿಗುತ್ತಿದೆ. ಹೀಗಾಗಿ ಬೆಂಗಳೂರಿಗರು ಸೇರಿದಂತೆ ಹಳೇ ಮೈಸೂರು ಭಾಗದ ಜನರು ಇದರಿಂದ ಒಂದಷ್ಟು ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+