Shakti Scheme: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸಿದ ‘ಶಕ್ತಿ ಯೋಜನೆ’ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾತು!

ಉಚಿತ ಬಸ್ ಯೋಜನೆ ಅಂದರೆ 'ಶಕ್ತಿ ಯೋಜನೆ' ಜಾರಿಯಾಗಿ 3 ವಾರವೇ ಕಳೆದಿದೆ. ಆದರೂ ಯೋಜನೆ ಸದ್ದು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಅದ್ರಲ್ಲೂ ದುಡಿವ ವರ್ಗದ ಮಹಿಳೆಯರ ಪಾಲಿಗೆ ಶಕ್ತಿ ಯೋಜನೆಯು ದೊಡ್ಡ ಶಕ್ತಿ ನೀಡಿದೆ. ಹೀಗೆ ದೊಡ್ಡ ಸಕ್ಸಸ್ ಕಂಡಿರುವ ಶಕ್ತಿ ಯೋಜನೆ ಕುರಿತು ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ಹೇಳಿಕೆ ನೀಡಿದ್ದಾರೆ.

ಹೌದು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಗೆ ಬರಲ್ಲ, ಜಾರಿಗೆ ಬಂದ್ರೆ ರಾಜ್ಯ ಆರ್ಥಿಕವಾಗಿ ದಿವಾಳಿ ಆಗುತ್ತೆ ಅಂತ ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಜೊತೆ ಸಮಾಜದ ಎಲ್ಲಾ ವರ್ಗದ ಬಡ & ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ನಾವು ಇಟ್ಟ ಹೆಜ್ಜೆ ಹಿಂದೆ ಇಡೋದಿಲ್ಲ ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

Discover What CM Siddaramaiah Said About Shakti Scheme Success

ದಾಖಲೆ ಇದ್ದರೂ ಸುಳ್ಳು ಹೇಳುತ್ತಾರೆ!

ದೇಶದ ಯಾವ ಸರ್ಕಾರಗಳು ಹಿಂದೆಂದೂ ಮಾಡದ ಸಾಧನೆಯನ್ನ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಸರ್ಕಾರದ ಸಾಧನೆಗಳ ದಾಖಲೆ ಕಣ್ಣ ಮುಂದಿದೆ. ವಿರೋಧ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಜೂನ್ 11 ಕ್ಕೆ ಶಕ್ತಿ ಯೋಜನೆ ಆರಂಭ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಎಲ್ಲಾ ದಾಖಲೆ ಕಣ್ಣ ಮುಂದಿದ್ದು, ಆದರೂ ವಿರೋಧ ಪಕ್ಷಗಳು ಸುಳ್ಳು ಹೇಳುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹರಿಹಾಯ್ದರು.

1 ಕೋಟಿ 10 ಲಕ್ಷ ಮಹಿಳೆಯರಿಗೆ...

ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. 1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು 1 ಕೋಟಿ 10 ಲಕ್ಷ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ ಎಂದರು ಮುಖ್ಯಮಂತ್ರಿ ಸಿದ್ದರಾಮಯ್ಯ.

ಕೆಲವರಿಗೆ ಹೊಟ್ಟೆಯುರಿ ಎಂದ ಸಿಎಂ!

ಹಾಗೇ ತಮ್ಮ ಮಾತು ಮುಂದುವರಿಸಿದ ಸಿಎಂ ಸಿದ್ದರಾಮಯ್ಯ. ಎಲ್ಲಾ ಜಾತಿ & ಧರ್ಮದ ಬಡವರು ಮತ್ತೆ ಮಧ್ಯಮ ವರ್ಗದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಸೌಲಭ್ಯ ತಲುಪುತ್ತಿದೆ ಎಂದು ತಿಳಿಸಿದ ಸಿಎಂ, ಕೋಟ್ಯಂತರ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಕೆಲವರಿಗೆ ಹೊಟ್ಟೆಯುರಿ ಎಂದು ಬಿಜೆಪಿ & ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು ಸಿಎಂ ಸಿದ್ದರಾಮಯ್ಯ.

Discover What CM Siddaramaiah Said About Shakti Scheme Success

ಬಡವರ ಕೈಯಲ್ಲಿ ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ ಆಗಿದೆ. ಹಣವಿದ್ರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಇದೇ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ. ಜನರಿಗೆ ನಾವು ಕೊಟ್ಟಿದ್ದ ಹಣ ವಾಪಾಸ್ ಸರ್ಕಾರಕ್ಕೆ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣ ಹಾಕುತ್ತೇವೆ. ಇದರಿಂದ ಜಿಡಿಪಿಯ ಜೊತೆಗೆ ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದರು. ಒಟ್ನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಗ್ಯಾರಂಟಿ ವಾರ್ ನಡುವೆ ಈಗ ಶಕ್ತಿ ಯೋಜನೆ ಶತಕೋಟಿ ಗರಿ ಪಡೆದಿದೆ. ಈ ವಿಚಾರ ಮುಂದಿಟ್ಟುಕೊಂಡು ವಿಪಕ್ಷಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಈಗ ವಾಗ್ದಾಳಿ ನಡೆಸಿದ್ದು, ಇದಕ್ಕೆ ವಿರೋಧ ಪಕ್ಷಗಳ ನಾಯಕರು ಹೇಗೆ ಉತ್ತರಿಸಬಹುದು?

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+