HD Kumaraswamy: ಡಿ.ಕೆ.ಶಿವಕುಮಾರ್ & ಎಚ್‌ಡಿಕೆ ತಿಕ್ಕಾಟ ಜೋರು!

ಮಾಜಿ ಸಿಎಂ ಕುಮಾರಸ್ವಾಮಿ ಮತ್ತೊಮ್ಮೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಮೂಲಕ ಗಂಭೀರ ಆರೋಪ ಒಂದನ್ನ ಮಾಡಿರುವ ಎಚ್‌ಡಿಕೆ, ಕಸದ ವಿಚಾರದಲ್ಲೂ ಲಂಚಾವತಾರ ನಡೆಯುತ್ತಿದೆ ಎಂದಿದ್ದಾರೆ. ಹಾಗಾದರೆ ಕುಮಾರಸ್ವಾಮಿ ಅವರು ಹೇಳಿದ್ದೇನು? ಎಚ್‌ಡಿಕೆ ಆರೋಪಕ್ಕೆ ಕಾರಣ ಏನು?

ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಎಚ್‌ಡಿಕೆ, 'ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ 'ಪರ್ಸಂಟೇಜ್ ಪಟಾಲಂ' ಈಗ ಕಸಕ್ಕೂ ಬಾಯಿ ಹಾಕಿದೆ! ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ!! ಅದರ ಒಳಗುಟ್ಟು ರಟ್ಟಾಗಿದೆ!! 'ಬ್ರ್ಯಾಂಡ್' ಹೆಸರಿನಲ್ಲಿ ಕೊಳ್ಳೆ ಹೊಡೆಯಲು, ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್ʼಗಳನ್ನು ಸೃಷ್ಟಿ ಮಾಡುತ್ತಿರುವುದು ದಿಟ. ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು?'ಎಂದು ಪ್ರಶ್ನೆಯನ್ನ ಮಾಡಿದ್ದಾರೆ.

Discover what HD Kumaraswamy said about Brand Bengaluru

ಮಂಡೂರು ಬಳಿಕ ರಾಮನಗರ?

ಅಲ್ಲದೆ, ಮಂಡೂರು ಜನ ಎದುರಿಸಿದ ಕಷ್ಟ ಅಷ್ಟಿಷ್ಟಲ್ಲ. ಯಶವಂತಪುರ ಕ್ಷೇತ್ರದ ಜನರು ಈ ನರಕದಲ್ಲೇ ಬೇಯುತ್ತಿದ್ದಾರೆ. ದೊಡ್ಡಬಳ್ಳಾಪುರದ ಜನರೂ ಕಸದ ಕಷ್ಟಕ್ಕೆ ಸಿಲುಕಿದ್ದಾರೆ. ಈಗ ರಾಮನಗರದ ಸರದಿ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ʼಕಸದ ತೊಟ್ಟಿʼಗಳನ್ನಾಗಿ ಮಾಡಿ ʼಸಾವಿನ ದಿಬ್ಬʼಗಳನ್ನು ನಿರ್ಮಿಸಲು ʼಬ್ರ್ಯಾಂಡ್ ಬೆಂಗಳೂರುʼ ಹೆಸರಿನಲ್ಲಿ ಹುನ್ನಾರ ಹೂಡಲಾಗಿದೆ. ಇದು ಘೊರ ಅಕ್ಷಮ್ಯ ಹಾಗೂ ರಾಜಧಾನಿಯ ಆಸುಪಾಸಿನಲ್ಲಿ ಈಗಾಗಲೇ ಕೆಟ್ಟಿರುವ ಪರಿಸರವನ್ನು ಮತ್ತಷ್ಟು ಹಾಳು ಮಾಡುವ ದುಷ್ಟ ತಂತ್ರವಷ್ಟೇ ಅಂತಾ ಆರೋಪ ಮಾಡಿದ್ದಾರೆ.

ಕೋಟಿಗಟ್ಟಲೇ ಹಣ ಜೇಬಿಗೆ ಡಂಪ್!

ತಮ್ಮ ಆರೋಪ ಮುಂದುವರಿಸಿರುವ ಮಾಜಿ ಸಿಎಂ ಎಚ್‌ಡಿಕೆ, ಬೆಂಗಳೂರು ಅಕ್ಕಪಕ್ಕದ ಜಿಲ್ಲೆಗಳು ಕೃಷಿ, ತೋಟಗಾರಿಕೆ, ಹೈನುಗಾರಿಕೆಯಲ್ಲಿ ಸಮೃದ್ಧವಾಗಿವೆ. ಅಲ್ಲಿನ ಪರಿಸರ, ಜೀವ ವೈವಿಧ್ಯಕ್ಕೆ ಹಾನಿ ಮಾಡಿ, ಜನಜೀವನ ಸರ್ವನಾಶ ಮಾಡುವುದು ಒಂದೆಡೆಯಾದರೆ; ಹೊಸ ಡಂಪಿಂಗ್ ಯಾರ್ಡ್ʼಗಳ ಮೂಲಕ ಕೋಟಿಗಟ್ಟಲೇ ಹಣವನ್ನು ಜೇಬಿಗೆ ಡಂಪ್ ಮಾಡಿಕೊಳ್ಳುವ ಖತರ್ನಾಕ್ ಐಡಿಯಾ ಇನ್ನೊಂದೆಡೆ ಅಡಗಿದೆ! ಎಂದಿದ್ದಾರೆ.

ಹಾಗೇ, ಜಗತ್ತಿನಲ್ಲಿಯೇ ಉತ್ಕೃಷ್ಟ ಮಾವು, ರೇಷ್ಮೆ, ಹಣ್ಣು, ತರಕಾರಿ ಬೆಳೆಯುತ್ತಿರುವ ರಾಮನಗರ, ಬಿಡದಿ ಬಳಿ ನೂರು ಎಕರೆ ಪ್ರದೇಶದಲ್ಲಿ ಕಸ ಸುರಿಯಲು ಉಪ ಮುಖ್ಯಮಂತ್ರಿಗಳ ದೊಡ್ಡ ಹುನ್ನಾರದ ಒಳ ಉದ್ದೇಶ ಸ್ಪಷ್ಟ. ಈಗಾಗಲೇ ವೃಷಭಾವತಿ ಸೇರಿ ರಾಮನಗರ ಜಿಲ್ಲೆಯ ಜಲಮೂಲಗಳು ಪೂರ್ಣ ಹಾಳಾಗಿ ಅಂತರ್ಜಲ ಕಲುಷಿತವಾಗಿದೆ ಎಂದು ಗರಂ ಆಗಿದ್ದಾರೆ.

Discover what HD Kumaraswamy said about Brand Bengaluru

ಡಿಸಿಎಂ ವಿರುದ್ಧ ಎಚ್‌ಡಿಕೆ ಸಿಟ್ಟು?

ನೂರು ಎಕರೆ ಸರಕಾರಿ ಭೂಮಿಯನ್ನು ಅನಾಮತ್ತಾಗಿ ಎಗರಿಸಿಬಿಡುವ ರಿಯಲ್ ಎಸ್ಟೇಟ್ ಬ್ರ್ಯಾಂಡೆಡ್ ಪರಿಕಲ್ಪನೆ ಇದಲ್ಲದೆ ಮತ್ತೇನು? ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರವು ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಬೀದಿಗಿಳಿದಾರು.. ಹುಷಾರು ಅಂತಾ ಎಚ್ಚರಿಕೆ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ, #ಪರ್ಸಂಟೇಜ್_ಪಟಾಲಂ ಹಾಗೂ #ಬ್ರ್ಯಾಂಡ್_ಬೆಂಗಳೂರು ಹ್ಯಾಷ್ ಟ್ಯಾಗ್ ಬಳಸಿ ಪರೋಕ್ಷವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಗರಂ ಆಗಿದ್ದಾರೆ.

ಒಟ್ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾತುಕತೆ ನಡೆಯುತ್ತಿರುವ ಸಮಯಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ಜೋರಾಗಿದೆ. ಇನ್ನು ಬ್ರ್ಯಾಂಡ್ ಬೆಂಗಳೂರು ಬಗ್ಗೆ ಪ್ರಸ್ತಾಪ ಮಾಡಿ, ಡಿಸಿಎಂ ವಿರುದ್ಧ ಎಚ್‌ಡಿಕೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಕಾಂಗ್ರೆಸ್‌ನ ನಾಯಕರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ? ಅನ್ನೋದನ್ನು ಕಾದು ನೋಡಬೇಕಿದೆ. ಈ ಮೂಲಕ ಬಿಜೆಪಿ & ಜೆಡಿಎಸ್ ಈಗ ಕಾಂಗ್ರೆಸ್ ವಿರುದ್ಧ ಮತ್ತೊಂದು ಸುತ್ತಿನ ಹಣಾಹಣಿ ನಡೆಸಲು ಸಜ್ಜಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+