ಕಾರಿನ ಮೇಲೆ ಕಾಗೆ ಕುಳಿತರೆ ಅದರಿಂದ ರಾಜ್ಯದ ಜನತೆಗೆ ಏನಾಗಬೇಕು?

ಕಾರಿನ ಮೇಲೆ ಕಾಗೆ ಕುಳಿತರೆ ರಾಜ್ಯದ ಜನತೆಗೆ ಏನಾಗಬೇಕು? ಈ ಬಗ್ಗೆ ಜ್ಯೋತಿಷಿಗಳನ್ನು ಕರೆಸಿ ಚಾನೆಲ್‌ನಲ್ಲಿ ಚರ್ಚೆ ನಡೆಸಿದರು. ಜ್ಯೋತಿಷಿಗಳು ಅಧಿಕಾರ ಕಳ್ಕೊತೀನಿ ಅಂತಾ ಹೇಳಿದ್ದರು. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳ್ಕೊತೀನಿ ಅಂತಾನೂ ಜ್ಯೋತಿಷಿಗಳು ಹೇಳಿದ್ದರು. ಆದರೆ ನಾನು ಅಧಿಕಾರ ಪೂರ್ಣಗೊಳಿಸಿ 2ನೇ ಬಾರಿ ಸಿಎಂ ಆದೆ. ಕಾಗೆ ಕೂತಾಗ ಮಾತಾಡಿದ್ದ ಜ್ಯೋತಿಷಿಗಳ ಮಾತಿಗೆ ಏನು ಬೆಲೆ ಬಂತು? ಎಂದು ಸಿಎಂ ಸಿದ್ದರಾಮಯ್ಯ ಇಂದು ವಾಗ್ದಾಳಿ ನಡೆಸಿ, ಪ್ರಶ್ನೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಶ್ರೀಕ್ಷೇತ್ರ ಆದಿಚುಂಚನಗಿರಿ ಮಠ & ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಅಂತರ ಜಿಲ್ಲಾ ಪತ್ರಕರ್ತರ ಸಮ್ಮೇಳನವನ್ನ ಉದ್ಘಾಟಿಸಿ ಮಾತನಾಡುವಾಗ ಈ ವಿಚಾರ ಪ್ರಸ್ತಾಪ ಮಾಡಿದರು. ವಸ್ತು ಸ್ಥಿತಿಯನ್ನ ಜನರಿಗೆ ತಲುಪಿಸಿ. ಊಹೆ ಮಾಡಿಕೊಂಡು, ಕಲ್ಪಿಸಿಕೊಂಡು ಸುದ್ದಿ ಬರೆದು ಹಾಸ್ಯಾಸ್ಪದ ಆಗಬೇಡಿ. ತಿರುಚಿ ಸುದ್ದಿ ಮಾಡುವುದನ್ನು ಬಿಡಿ. ನನ್ನ ಮಾತುಗಳ ಸಾಂದರ್ಭಿಕತೆಯನ್ನೇ ಮರೆ ಮಾಚಿ ಸುದ್ದಿ ಮಾಡ್ತಾರೆ, ಆದರೆ ಇದು ತಪ್ಪು ಎಂದಿದ್ದಾರೆ ಸಿಎಂ ಸಿದ್ದರಾಮಯ್ಯ.

Discover What Karnataka CM Siddaramaiah Told About Eletronic Media

ಮಾಧ್ಯಮಗಳ ಬಗ್ಗೆ ಸಿಎಂ ಹೇಳಿದ್ದೇನು?

ನನ್ನ ಸರ್ಕಾರದ ತಪ್ಪುಗಳಿದ್ರೆ ಮುಲಾಜಿಲ್ಲದೆ ಬರೆಯಿರಿ ಸರ್ಕಾರ ಕೊಟ್ಟ ಮಾತು ತಪ್ಪಿದೆಯಾ? ಜನಪರವಾಗಿ ಕೆಲಸ ಮಾಡ್ತಾ ಇದೆಯೋ? ಇಲ್ಲವೋ? ಎಂಬುದನ್ನ ಕೂಡ ಪ್ರಾಮಾಣಿಕವಾಗಿ ಜನರಿಗೆ ತಲುಪಿಸಬೇಕು. ನನ್ನ ಬಗ್ಗೆ ಸುಳ್ಳು ಬರೆದಾಗ ಸತ್ಯ ತಿರುಚಿ ಸುದ್ದಿ ಪ್ರಸಾರ ಮಾಡಿದಾಗ ನಾನು ಯಾವತ್ತೂ ಯಾವ ಮಾಧ್ಯಮದವರಿಗೂ ಯಾಕೆ ಸುಳ್ಳು ಹೇಳ್ತೀರ? ಅಂತ ಕಾಲ್ ಮಾಡಿ ಕೇಳಿಲ್ಲ, ಸರ್ಕಾರ ಒಳ್ಳೆಯ ಕೆಲಸ ಮಾಡಿದಾಗ ಅದನ್ನೂ ಜನರಿಗೆ ತಲುಪಿಸಿ. ನಿಮಗೆ ವಾಕ್ ಸ್ವಾತಂತ್ರ್ಯ ಇದೆ. ಅದನ್ನು ಘನತೆಯಿಂದ ಬಳಸಿಕೊಳ್ಳಬೇಕು ಎಂದು ಸುದ್ದಿ ವಾಹಿನಿಗಳಿಗೆ ಸಲಹೆ ನೀಡಿದರು ಸಿಎಂ ಸಿದ್ದರಾಮಯ್ಯ.

ಇನ್ನು ಶ್ರೀಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದ ಮಹಾ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಕೃಷಿಸಚಿವ ಚಲಯವರಾಯಸ್ವಾಮಿ ಸೇರಿದಂತೆ ಶಾಸಕರಾದ ರವಿ ಗಣಿಗ, ದಿನೇಶ್ ಗೂಳಿಗೌಡ, ರಮೇಶ್ ಬಂಡಿ ಸಿದ್ದೇಗೌಡ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ, ಮೈಸೂರು, ಮಡಿಕೇರಿ, ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ರು. ಒಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾರಿನ ಮೇಲೆ ಕಾಗೆ ಕುಳಿತ ಘಟನೆಯನ್ನು ಮೆಲುಕು ಹಾಕಿದ್ದಾರೆ. ಹಾಗೇ ಮಾಧ್ಯಮ ಅದರಲ್ಲೂ ಸುದ್ದಿ ವಾಹಿನಿಗಳು ಜನಪರ ಸುದ್ದಿ ಪ್ರಕಟಿಸಲಿ ಎಂಬ ಸಲಹೆಯನ್ನು ಕೂಡ ಸಿಎಂ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+