ಸಿದ್ದರಾಮಯ್ಯ ವಿರುದ್ಧ ಅಮಿತ್ ಶಾಗೆ ಪತ್ರ ಬರೆದ ಯತ್ನಾಳ್!

ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಹೊತ್ತಿರುವ ಬೆಂಕಿ ತಣ್ಣಗಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಅದರಲ್ಲೂ ಸಿಎಂ ಸಿದ್ದರಾಮಯ್ಯ ವಿರುದ್ಧ ಸಮರ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಈಗ ಇನ್ನೂ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸಿದ್ದರಾಮಯ್ಯ ವಿರುದ್ಧ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಪತ್ರ ಬರೆದಿದ್ದಾರೆ ಯತ್ನಾಳ್. ಯಾಕೆ ಗೊತ್ತಾ? ಪಿನ್ ಟು ಪಿನ್ ಮಾಹಿತಿ ಇಲ್ಲಿದೆ ಮುಂದೆ ಓದಿ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪದ ಬಾಂಬ್‌ನ ಸಿಡಿಸಿದ್ದಾರೆ. 'ಸಿಎಂ ಸಿದ್ದರಾಮಯ್ಯ ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ' ಅಂತಾ ಹೇಳಿದ್ದರು ಬಸನಗೌಡ ಪಾಟೀಲ್ ಯತ್ನಾಳ್. ತಮ್ಮ ಆರೋಪಕ್ಕೆ ಸಾಕ್ಷಿ ನೀಡುತ್ತಿದ್ದೇನೆ ಎನ್ನುವಂತೆಯೇ ಕೆಲವು ಫೋಟೋಗಳನ್ನ ಕೂಡ ಇಂದು ಟ್ವೀಟ್ ಮಾಡಿದ್ದರು. ಇಷ್ಟೆಲ್ಲಾ ಫೈಟಿಂಗ್ ಮಧ್ಯೆ ಇದೀಗ ಇನ್ನೊಂದು ಸ್ಫೋಟಕ ವಿಚಾರ ಹಂಚಿಕೊಂಡಿದ್ದಾರೆ. ನೇರವಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧವೇ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗು ಪತ್ರ ಬರೆದಿದ್ದಾರೆ ಯತ್ನಾಳ್.

Discover Why Basanagouda Patil Yatnal Wrote Letter To Union Home Minister Amit Shah

ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪವೇನು?

ಅಷ್ಟಕ್ಕೂ ಮೊದಲೇ ಹೇಳಿದಂತೆ, 'ಸಿಎಂ ಸಿದ್ದರಾಮಯ್ಯ ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ' ಅಂತಾ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರವಾದ ಆರೋಪ ಮಾಡಿದ್ದರು. ಇದಾದ ನಂತರ ಅದಕ್ಕೆ ಸಂಬಂಧಿಸಿದ ಕೆಲವು ಫೋಟೋ ಟ್ವೀಟ್ ಮಾಡಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಇದೀಗ ನೇರವಾಗಿ ಕೇಂದ್ರ ಗೃಹ ಸಚಿವರಿಗೂ ಪತ್ರ ಬರೆದಿದ್ದಾರೆ. ಈ ಘಟನೆಯ ಬಗ್ಗೆ ಎನ್‌ಐಎ (NIA) ತನಿಖೆ ನಡೆಸುವಂತೆ ಮನವಿಯ ಮಾಡಿ ಪತ್ರವನ್ನು ಬರೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಪೋಸ್ಟ್ ಹಂಚಿಕೊಂಡಿದ್ದಾರೆ ಬಸನಗೌಡ ಪಾಟೀಲ್ ಯತ್ನಾಳ್.

ಶಾಸಕ ಯತ್ನಾಳ್ ಟ್ವೀಟ್ ವಾರ್!

ಇದಕ್ಕೂ ಮೊದಲು ಈ ಬಗ್ಗೆ ಟ್ವೀಟ್ ಮಾಡಿದ್ದ ಬಸನಗೌಡ ಪಾಟೀಲ್ ಯತ್ನಾಳ್, 'ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗು ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ.' ಎಂದು ಒಂದು ಟ್ವೀಟ್ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು.

Discover Why Basanagouda Patil Yatnal Wrote Letter To Union Home Minister Amit Shah

ಸಿಎಂ ವಿರುದ್ಧ ಯತ್ನಾಳ್ 'ಉಗ್ರ' ಅಸ್ತ್ರ?

ತಮ್ಮ ಆರೋಪವನ್ನು ಮುಂದುವರಿಸಿದ್ದ ಯತ್ನಾಳ್ ಅವರು, 'ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ.' ಎಂದು ಸ್ಫೋಟಕ ಆರೋಪ ಮಾಡಿದ್ದರು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್.

ಕೇಂದ್ರಿಯ ತನಿಖೆಗೂ ಭಾರಿ ಒತ್ತಾಯ!

ಹಾಗೇ ಮತ್ತೊಂದು ಟ್ವೀಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂ ಸಿದ್ದರಾಮಯ್ಯ ಕುರಿತು ಆರೋಪ ಮಾಡುತ್ತಾ, 'ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ.' ಎಂದಿದ್ದರು. ಇದೀಗ ನೇರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ರಾಜಕೀಯ ಕದನ ಕುತೂಹಲ ಕೆರಳಿಸಿದೆ.

ಹಾಗೇ ಮತ್ತೊಂದು ಕಡೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಈ ನಡೆ ಬಗ್ಗೆ ಖುದ್ದು ಬಿಜೆಪಿ ರಾಜ್ಯ ಘಟಕದ ಪ್ರಮುಖ ನಾಯಕರು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿಯೇ ಬಿಜೆಪಿ ಒಳಗೆ ಯತ್ನಾಳ್ ಅವರಿಗೆ ಸಪೋರ್ಟ್ ಸಿಗುತ್ತಿಲ್ವಾ? ಅನ್ನೋ ಡೌಟ್ ಕೂಡ ಚರ್ಚೆಗೆ ಗ್ರಾಸವಾಗಿದೆ. ಇದೆಲ್ಲಾ ಎಲ್ಲಿಗೆ ಬಂದು ನಿಲ್ಲುತ್ತೆ? ಹಾಗೇ, ಕಾಂಗ್ರೆಸ್ ಈ ಬಗ್ಗೆ ಯಾವ ರೀತಿ ರಿಯಾಕ್ಷನ್ ಕೊಡಬಹುದು? ಅನ್ನೋದನ್ನೂ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+