Modi VS Siddaramaiah: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಕೇಳಿದ ಪ್ರಶ್ನೆ ಏನು?

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ದಾಖಲಿಸಿ, ಕರ್ನಾಟಕದ ವಿಧಾನಸಭೆಯಲ್ಲಿ ಸರ್ಕಾರ ರಚಿಸಿದೆ. ಆದರೆ ಈ ಸಮಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮಧ್ಯೆ ತಿಕ್ಕಾಟ ಜೋರಾಗಿದೆ. ಗ್ಯಾರಂಟಿ ವಿಚಾರದಲ್ಲಿ ಬಿಜೆಪಿ ನಾಯಕರು ಸಿದ್ದರಾಮಯ್ಯ & ಅವರ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡುತ್ತಿದ್ದಾರೆ. ಆದರೆ ಈ ವೇಳೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ!

ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಾ, ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುವಂತೆಯೆ. ಸಿಎಂ ಸಿದ್ದರಾಮಯ್ಯ ಕೂಡ ಪ್ರಧಾನಿ ಮೋದಿ ವಿರುದ್ಧ ಅಚ್ಚೇದಿನ್ ಪ್ರಸ್ತಾಪ ಮಾಡಿ ವಾಗ್ದಾಳಿ ನಡೆಸುತ್ತಿದ್ದರು. ಆದರೆ ಈಗ ಬೇರೆಯದ್ದೇ ಅಸ್ತ್ರವನ್ನು ಸಿಎಂ ಸಿದ್ದರಾಮಯ್ಯ ಪ್ರಯೋಗ ಮಾಡಿದಂತೆ ಕಾಣುತ್ತಿದೆ. ಹಾಗಾದರೆ ಕರ್ನಾಟಕದ ಸಿಎಂ ಈಗ ಪ್ರಧಾನಿ ಮೋದಿ ಬಗ್ಗೆ ಹೇಳಿದ ಮಾತು ಏನು?

Discover Why CM Siddaramaiah Questioned NDA Government And PM Modi

'ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ?'

ಪ್ರಧಾನಿ ಮೋದಿ ಅವರ ವಿರುದ್ಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, 'ಪ್ರಧಾನಿ
@narendramodi ಅವರೇ, 2019ರಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ರಾಜ್ಯ ಸಾವು ನೋವಿನಲ್ಲಿ ಮುಳುಗಿತು, ಲಕ್ಷಾಂತರ ಕುಟುಂಬಗಳು ಮನೆ, ಆಸ್ತಿಪಾಸ್ತಿ ಕಳೆದುಕೊಂಡು ಬೀದಿಪಾಲಾದವು, ಆದರೂ ನೀವು ಕರ್ನಾಟಕಕ್ಕೆ ಬರಲಿಲ್ಲ. ರಾಜ್ಯದ ಜನರಿಗಾದ ಅಪಾರ ನಷ್ಟಕ್ಕೆ ಕೇಂದ್ರದ ನೆರವಿನ ಮೊರೆ ಹೋದರೆ ಮತ್ತೆ ಕನ್ನಡಿಗರಿಗೆ ಸಿಕ್ಕಿದ್ದು ಬಿಡಿಗಾಸು ಮಾತ್ರ. ನಿಮ್ಮ ನೇತೃತ್ವದ @BJP4India ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ #AnswerMadiModi' ಎಂದಿದ್ದಾರೆ.

'ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ?'

ಹಾಗೇ ಮತ್ತೊಂದು ಟ್ವೀಟ್ ಮೂಲಕ, '2017ರಲ್ಲಿ ಬರದಿಂದ ತತ್ತರಿಸಿಹೋದ ಕರ್ನಾಟಕದ ಜನತೆ ಕೇಂದ್ರದ ನೆರವಿಗಾಗಿ ನಿಮ್ಮತ್ತ ನೋಡುತ್ತಿದ್ದರು. ಆದರೆ ನಿಮ್ಮಿಂದ ನಮಗೆ ಸಿಕ್ಕಿದ್ದು ಬಿಡಿಗಾಸು ಪರಿಹಾರ. ಪ್ರಧಾನಿ @narendramodi ಅವರೇ, ಕನ್ನಡಿಗರ ಮೇಲೇಕೆ ಈ ಮಲತಾಯಿ ಧೋರಣೆ? ನಿಮ್ಮ ನೇತೃತ್ವದ @BJP4India ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ #AnswerMadiModi' ಎಂದು ಪ್ರಶ್ನೆ ಮಾಡಿದ್ದಾರೆ ಸಿಎಂ.

ಒಟ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದರ ಜೊತೆಗೆ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಅದರೆ ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪಗಳಿಗೆ ರಾಜ್ಯದ ಬಿಜೆಪಿ ನಾಯಕರು ಯಾವ ರೀತಿ ಉತ್ತರ ಕೊಡುತ್ತಾರೆ? ಅಲ್ದೆ ಸಿಎಂ ವಿರುದ್ಧ ಯಾವ ಅಸ್ತ್ರವನ್ನು ಕಮಲ ಪಾಳಯದ ನಾಯಕರು ಪ್ರಯೋಗ ಮಾಡ್ತಾರೆ? ಅನ್ನೋದನ್ನ ಕಾದು ನೋಡ್ಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+