ಮಾಜಿ ಯೋಧರ ಅವಲಂಬಿತರಲ್ಲಿ ಗಂಡು, ಹೆಣ್ಣು ತಾರತಮ್ಯ; ಹೈಕೋರ್ಟ್ ಕಿಡಿ
ಬೆಂಗಳೂರು, ಜನವರಿ 04; ಮಾಜಿ ಯೋಧರ ಅವಲಂಬಿತರಿಗೆ ನೀಡುವ ಗುರುತಿನ ಚೀಟಿಯಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳ ನಡುವೆ ತಾರತಮ್ಯ ಮಾಡುತ್ತಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಕಿಡಿ ಕಾರಿದೆ.
ಅಲ್ಲದೇ, ಆ ಕುರಿತು ನಿಯಮ ಸಂವಿಧಾನಬಾಹಿರೆವೆಂದು ಆದೇಶ ನೀಡಿರುವುದಲ್ಲದೆ, ಆ ನಿಯಮವನ್ನು ತಿದ್ದುಪಡಿ ಮಾಡಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಮೈಸೂರಿನ ಮಾಜಿ ಯೋಧರ ಪುತ್ರಿ ಪ್ರಿಯಾಂಕ ಆರ್. ಪಾಟೀಲ್ ತಮಗೆ ಗುರುತಿನ ಚೀಟಿ ನೀಡಲು ನಿರಾಕರಿಸಿದ್ದ ಸೈನಿಕ ಕಲ್ಯಾಣ ಇಲಾಖೆಯ ಕ್ರಮ ಪ್ರಶ್ನಿಸಿದ್ದರು. ಆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

ಜತೆಗೆ ಅರ್ಜಿದಾರರಿಗೆ ಗುರುತಿನ ಚೀಟಿ ವಿತರಿಸುವಂತೆ ನಿರ್ದೇಶನ ನೀಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆ ಚೀಟಿ ಆಧರಿಸಿ ಸಹಾಯಕ ಪ್ರಾಧ್ಯಾಪರ ಹುದ್ದೆಗೆ 2021ರ ಆ.26ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಅರ್ಜಿದಾರರನ್ನು ನಿವೃತ್ತ ಯೋಧರ ಕೋಟಾ ಪರಿಗಣಿಸಬೇಕು ಎಂದು ಆದೇಶಿಸಿದೆ.
ಮಹಿಳೆಯರು ಅತ್ಯುನ್ನತ ಸ್ಥಾನಗಳನ್ನು ಗಳಿಸುತ್ತಿದ್ದಾರೆ, ಅವರು ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆಗಳಲ್ಲಿ ಅಧಿಕಾರಿಗಳ ಹಂತದಲ್ಲಿ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಶತಮಾನಗಳಷ್ಟು ಹಳತಾದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿದ್ದ ಲಿಂಗ ತಾರತಮ್ಯ ತೊಲಗಬೇಕು ಮತ್ತು ನೀತಿ ನಿರೂಪಕರು ಈ ಬಗ್ಗೆ ಚಿಂತನೆ ನಡೆಸಿ ನಿಯಮಗಳಿಗೆ ಸೂಕ್ತ ತಿದ್ದುಪಡಿಯನ್ನು ಮಾಡಬೇಕು, ಅದಕ್ಕಾಗಿ ಹಾಲಿ ಇರುವ ನಿಯಮದಲ್ಲಿ ಪುರುಷರು ಎಂದು ಇರುವೆಡೆ ಸಿಬ್ಬಂದಿ ಎಂದು ಬದಲಾಯಿಸಬೇಕು. ಎಂದು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ.
ಸಾಂವಿಧಾನಿಕ ಉಲ್ಲಂಘನೆ: "ಇದು ತಾರತಮ್ಯಕ್ಕೆ ಎಡೆಮಾಡಿಕೊಡುತ್ತದೆ, ಲಿಂಗದ ಆಧಾರದ ಮೇಲೆ ಪ್ರಯೋಜನ ನೀಡುವುದು ಸರಿಯಲ್ಲ, ಇದು ಅಸಮಾನತೆಯಾಗುತ್ತದೆ. ಪುತ್ರಿ ಮದುವೆಯಾದಾಕ್ಷಣ ಆಕೆಯ ಹಕ್ಕು ಮೊಟಕುಗೊಳಿಸುವುದು ಸರಿಯಲ್ಲ. ಪುತ್ರ ಪುತ್ರನಾಗಿಯೇ ಇದ್ದಾಗ, ಪುತ್ರಿಯನ್ನೂ ಸಹ ಅದೇ ರೀತಿ ಪರಿಗಣಿಸಬೇಕಾಗುತ್ತದೆ. ಮದುವೆ ಆಗುವುದರಿಂದ ಪುತ್ರನ ಸ್ಥಿತಿಗತಿ ಬದಲಾಗಲಿಲ್ಲವೆಂದರೆ, ಪುತ್ರಿಯ ಸ್ಥಾನ ಏಕೆ ಬದಲಾಗಬೇಕು" ಎಂದೂ ನ್ಯಾಯಪೀಠ ಕೇಳಿದೆ.
"ಮಾಜಿ ಯೋಧರ ಪುತ್ರ ಅಥವಾ ಪುತ್ರಿ ಯಾರೇ ಆದರೂ 25 ವರ್ಷದ ನಂತರ ಅವರಿಗೆ ಒಂದೇ ಮಾರ್ಗಸೂಚಿ ಇರುತ್ತದೆ. 25 ವರ್ಷದ ಕೆಳಗಿನ ಪುತ್ರಿ ಮದುವೆ ಆಗಿದ್ದಾರೆ ಎನ್ನುವ ಕಾರಣಕ್ಕೆ ಅವರು ಐಡಿ ಕಾರ್ಡ್ ಪಡೆಯುವ ಹಕ್ಕಿನಿಂತ ವಂಚಿತರನ್ನಾಗಿ ಮಾಡುವುದು ಸರಿಯಲ್ಲ. ಇದು ಸಂವಿಧಾನದ ಕಲಂ 14 ಮತ್ತು 15ರ ಉಲ್ಲಂಘನೆಯಾಗುತ್ತದೆ. ಪುತ್ರ ಮದುವೆ ಆಗಲಿ ಅಥವಾ ಆಗದೇ ಇದ್ದರೂ ಪ್ರಯೋಜನ ಪಡೆಯುತ್ತಾರೆ, ಆದರೆ ಪುತ್ರಿ ಅವಿವಾಹಿತರಾಗಿ ಉಳಿದರೆ ಮಾತ್ರ ಪ್ರಯೋಜನ ಪಡೆಯುತ್ತಾರೆಂಬ ನಿಯಮ ಸರಿಯಲ್ಲ" ಎಂದು ಕೋರ್ಟ್ ಹೇಳಿದೆ.
ಪ್ರಕರಣದ ಹಿನ್ನೆಲೆ: ಅರ್ಜಿದಾರರು ಕೆಇಎ ನಡೆಸುವ ಸಹಾಯಕ ಪ್ರಾಧ್ಯಾಪಕರ ನೇಮಕಕ್ಕೆ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಮಾಜಿ ಯೋಧರ ಕೋಟಾದಡಿ ಅವಕಾಶ ಬಯಸಿದ್ದ ಅವರು, ಅದಕ್ಕಾಗಿ ತಮ್ಮ ತಂದೆ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಅವಲಂಬಿತರ ಗುರುತಿನ ಚೀಟಿಗೆ ಸೈನಿಕ ಇಲಾಖೆಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿದಾರರು ವಿವಾಹವಾಗಿರುವುದರಿಂದ ನಿಯಮದಂತೆ ಅವರಿಗೆ ಐಡಿ ಕಾರ್ಡ್ ನೀಡಲಾಗದೆಂದು ಇಲಾಖೆ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications