GruhaLakshmi Scheme: ಗೃಹ ಲಕ್ಷ್ಮಿ ಹಣ ಯಾಕೆ ಬರುತ್ತಿಲ್ಲ; ಸಿದ್ದರಾಮಯ್ಯ ಮುಂದೆ ಕಾರಣ ಬಿಚ್ಚಿಟ್ಟ ಅಧಿಕಾರಿಗಳು!
ಮೈಸೂರು, ನವೆಂಬರ್11: ಇದುವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಬಂದೇ ಇಲ್ಲ ಎನ್ನುವ ಮಹಿಳೆಯರಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು 2000 ರೂಪಾಯಿ ಹಣವನ್ನ ಸರ್ಕಾರ ಜಮಾ ಮಾಡುತ್ತಿದ್ದು, ಇದುವರೆಗೂ ಸರ್ಕಾರ ಮಹಿಳೆಯರ ಖಾತೆಗೆ 22 ತಿಂಗಳ ಹಣ ಜಮಾವಾಗಿದೆ. ಸಾಕಷ್ಟು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ನೂ ಕೂಡ ಹಲವು ಕಂತಿನ ಹಣವೇ ಬಂದಿಲ್ಲ. ಹೀಗಾಗಿ ಮಹಿಳಾ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು, ಮೈಸೂರು ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಂಖ್ಯೆ 673050 ಇದ್ದು ಜುಲೈ ಅಂತ್ಯದವರೆಗೆ ಶೇ 100 ರಷ್ಟು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಹಣ ಪಾವತಿಯಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಯತೀಂದ್ರ ಅವರು, ನಾವು ಜನರೊಂದಿಗಿನ ಸಭೆಗಳನ್ನು ಮಾಡಿದಾಗ ಹಣ ಬರುತ್ತಿಲ್ಲ ಎನ್ನುವ ದೂರು ಕೆಲವರಿಂದ ಬರುತ್ತಿದೆ ಏಕೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿಗಳು ಸದ್ಯ ಖಚಿತಗೊಂಡಿರುವ ಫಲಾನುಭವಿಗಳಲ್ಲಿ ಅಷ್ಟೂ ಮಂದಿಗೆ ಹಣ ಪಾವತಿಯಾಗಿದೆ. ಕೆಲವರು ಅರ್ಹರಾಗಿದ್ದು, ದಾಖಲಾತಿ ಸರಿ ಇಲ್ಲದ ಕಾರಣದಿಂದ ನೋಂದಣಿ ಆಗದಿದ್ದರೆ ಅವರಿಗೆ ಸಂದಾಯವಾಗಿಲ್ಲ ಎಂದು ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಬರುವ ಪ್ರತೀ ಹಾಸ್ಟೆಲ್‌ಗಳಿಗೆ ಒಬ್ಬ ನೋಡೆಲ್ ಅಧಿಕಾರಿಯನ್ನು ನೇಮಿಸಬೇಕು. ಆಹಾರದ ಗುಣಮಟ್ಟ, ಶೈಕ್ಷಣಿಕ ವಾತಾವರಣ, ಕಟ್ಟಡಗಳ ಸ್ಥಿತಿ ಗತಿಯನ್ನು ಅವಲೋಕಿಸಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ನೋಡಲ್ ಅಧಿಕಾರಿಗಳ ಮೇಲೆ ನಿಗಾ ಇಡಬೇಕು. ಹೆಚ್.ಡಿ.ಕೋಟೆ ವ್ಯಾಪ್ತಿಯ ಹಾಡಿಗಳಲ್ಲಿನ ೧೬ ಹಾಡಿಗಳಿಗೆ ವಿದ್ಯುತ್ ಸಂರ‍್ಕ ಕಲ್ಪಿಸಲಾಗಿದೆ. ಆದರೆ ವಿದ್ಯುತ್ ಮಾತ್ರ ಬರುತ್ತಿಲ್ಲ. ಹಾಡಿಗಳ ಕುಡಿಯುವ ನೀರು, ಹಕ್ಕು ಪತ್ರ, ಅಂಗನವಾಡಿ, ಮನೆ, ಆಹಾರ ವಿತರಣೆ, ಆರೋಗ್ಯ ಕಿಟ್ ವಿತರಣೆಯಲ್ಲಿ ಆಗುತ್ತಿರುವ ಲೋಪಗಳನ್ನು ಶಾಸಕರಾದ ಅನಿಲ್ ಚಿಕ್ಕಮಾದು ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅಧಿಕಾರಿಗಳ ಲೋಪವನ್ನು ಪ್ರಶ್ನಿಸಿದರು.
ಹಾಡಿ ನಿವಾಸಿಗಳ ಜೊತೆ ಅಂತ:ಕರಣದಿಂದ ರ‍್ತಿಸಿ ಎನ್ನುವ ಸೂಚನೆ ನೀಡಿದರು. ಹಾಡಿ ನಿವಾಸಿಗಳ ಅರಣ್ಯ ಉತ್ಪನ್ನ ಸಂಗ್ರಹ, ಮಾರಾಟದ ವಿಚಾರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದರ‍್ಜನ್ಯ ಮತ್ತು ಅಸಹಾಕಾರದ ಬಗ್ಗೆ ಸಭೆಯಲ್ಲಿ ವ್ಯಾಪಕ ರ‍್ಚೆ ಆಯಿತು. ಈ ಬಗ್ಗೆ ಅರಣ್ಯಾಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಂಥಾ ರ‍್ತನೆಯನ್ನು ಸಹಿಸಲು ಸಾಧ್ಯವಿಲ್ಲ. ಕಣ್ಣಿಗೆ ಪಟ್ಟಿ ಕಟ್ಟಿಕೊಂಡವರ ರೀತಿ ರ‍್ತಿಸಬೇಡಿ. ಸ್ವಲ್ಪ ಉದಾರವಾಗಿ ರ‍್ತಿಸಿ, ಮಾನವೀಯವಾಗಿ ನಡೆದುಕೊಳ್ಳಿ ಎಂದು ಶಾಸಕ ಅನಿಲ್ ಚಿಕ್ಕ ಮಾದು ಅವರ ಮಾತಿಗೆ ಧ್ವನಿಗೂಡಿಸಿ ಅರಣ್ಯಾಧಿಕಾರಿಗಳು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಆಹಾರ ಇಲಾಖೆ, ಅಪ್ತ ಸಂಖ್ಯಾತ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಭೆಯನ್ನು ಪ್ರತ್ಯೇಕವಾಗಿ ನಡೆಸಿ ಹಾಸ್ಟೆಲ್‌ಗಳ ಗುಣಮಟ್ಟ ಮತ್ತು ಆಹಾರ ಗುಣಮಟ್ಟದ ಬಗ್ಗೆ ಸ್ಪಷ್ಟ ನಿದರ್ಶಶನಗಳನ್ನು ನೀಡಲಾಗಿದೆ. ಇದನ್ನು ಪಾಲಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆ ಎಚ್ಚರಿಸಿತು. ಹೊಸದಾಗಿ ಆರಂಭಿಸಿರುವ ಹಿಂದುಳಿದ ವರ್ಗಗಳ ಹಾಸ್ಟೆಲ್‌ಗಳನ್ನು ತಕ್ಷಣ ಆರಂಭಿಸಲಾಗಿದೆಯೇ ? ಸ್ವಂತ ಕಟ್ಟಡ ಇಲ್ಲದ ಕಡೆ ಬಾಡಿಗೆ ಕಟ್ಟಡಗಳಲ್ಲಿ ಆರಂಭಿಸುವ ಸೂಚನೆ ನೀಡಲಾಗಿತ್ತು. ಈ ಸೂಚನೆ ಎಷ್ಟರ ಮಟ್ಟಿಗೆ ಪಾಲನೆ ಆಗಿದೆ ಎಂದು ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಅವರು ಸಭೆಯಲ್ಲಿ ಪ್ರಶ್ನಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.












Click it and Unblock the Notifications