• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಯಡಿಯೂರಪ್ಪ ಸಂಪುಟ ವಿಸ್ತರಣೆ; ಮತ್ತೆ ಚರ್ಚೆ ಆರಂಭ!

|

ಬೆಂಗಳೂರು, ಜೂನ್ 21 : ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲಾ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ, ಇವರಲ್ಲಿ ನಾಲ್ವರು ಬಿಜೆಪಿಯವರು. ಈಗ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆರಂಭವಾಗಿದೆ.

   ಕಳೆದ 2 ವಾರಗಳಲ್ಲಿ ಪೆಟ್ರೋಲ್ ಬೆಲೆಯಲ್ಲಿ 7 ₹ ಹೆಚ್ಚಳ | Petrol Price Hiked | Oneindia Kannada

   ವಿಧಾನ ಪರಿಷತ್ ಸದಸ್ಯರಾಗಲಿವರುವ ಎಂಟಿಬಿ ನಾಗರಾಜ್, ಆರ್. ಶಂಕರ್ ಯಡಿಯೂರಪ್ಪ ಸಂಪುಟ ಸೇರಲಿದ್ದಾರೆಯೇ? ಎಂಬುದು ಪ್ರಶ್ನೆ. ಸಂಪುಟದಲ್ಲಿ ಸದ್ಯ 5 ಸಚಿವ ಸ್ಥಾನಗಳು ಖಾಲಿ ಇವೆ. ಬಿಜೆಪಿಯ ಕೆಲವು ಶಾಸಕರು ಆಕಾಂಕ್ಷಿಗಳು ಎಂಬುದು ಗುಟ್ಟಾಗಿ ಉಳಿದಿಲ್ಲ.

   ನಾಮ ನಿರ್ದೇಶನದ ಮೂಲಕ ಪರಿಷತ್ ಸ್ಥಾನ; ಎಚ್ ವಿಶ್ವನಾಥ್ ಭರವಸೆ

   ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಚಿವ ಸ್ಥಾನವನ್ನು ಬಿಟ್ಟು ಬಂದ ಇಬ್ಬರೂ ನಾಯಕರಿಗೆ ಈಗ ಸಚಿವ ಸ್ಥಾನ ನೀಡಬೇಕು ಎಂಬ ಮಾತಿದೆ. ಆದರೆ, ಕುರುಬ ಸಮುದಾಯಕ್ಕೆ ಸೇರಿದ ಇಬ್ಬರು ಈಗಾಗಲೇ ಯಡಿಯೂರಪ್ಪ ಸಂಪುಟದಲ್ಲಿದ್ದಾರೆ.

   ವಿಧಾನ ಪರಿಷತ್ ಚುನಾವಣೆ: ಎಲ್ಲ ಅಭ್ಯರ್ಥಿಗಳು ಅವಿರೋಧ ಆಯ್ಕೆ

   ಸರ್ಕಾರ ಬಂದು ವರ್ಷವಾದಾಗ ಸಚಿವರ ಕಾರ್ಯ ವೈಖರಿ ಆಧಾರದಲ್ಲಿ ಕೆಲವರನ್ನು ಕೈ ಬಿಟ್ಟು, ಹೊಸಬರಿಗೆ ಅವಕಾಶ ನೀಡುವ ಬಗ್ಗೆಯೂ ಪಕ್ಷದ ವಲಯದಲ್ಲಿ ಚರ್ಚೆ ನಡೆದಿತ್ತು. ಈಗ ಈ ಚರ್ಚೆ ಮತ್ತೆ ಆರಂಭವಾಗುವ ಸಾಧ್ಯತೆ ಇದೆ.

   ಪರಿಷತ್ ಟಿಕೆಟ್ ಘೋಷಣೆ; ಸಿದ್ದರಾಮಯ್ಯ ಮನೆಗೆ ನಾಯಕರ ದಂಡು!

   4 ಸ್ಥಾನಗಳು ಭರ್ತಿ

   4 ಸ್ಥಾನಗಳು ಭರ್ತಿ

   ವಿಧಾನ ಪರಿಷತ್ ಸದಸ್ಯರಾಗು ಆರ್. ಶಂಕರ್, ಎಂಟಿಬಿ ನಾಗರಾಜ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ. ಇನ್ನೂ ಎರಡು ಸ್ಥಾನಕ್ಕೆ ಮೂಲ ಬಿಜೆಪಿ ಶಾಸಕರನ್ನು ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಉಮೇಶ್ ಕತ್ತಿ ಈ ಬಾರಿ ಸಚಿವರಾಗುವುದು ಖಚಿತ ಎಂಬುದು ಅವರ ಆಪ್ತ ವಲಯದ ಮಾತು.

   ಆರ್. ಆರ್. ನಗರ, ಮಸ್ಕಿ

   ಆರ್. ಆರ್. ನಗರ, ಮಸ್ಕಿ

   ರಾಜರಾಜೇಶ್ವರಿ ನಗರ ಮತ್ತು ಮಸ್ಕಿ ಕ್ಷೇತ್ರದ ಉಪ ಚುನಾವಣೆ ಇನ್ನೂ ನಡೆದಿಲ್ಲ. ಈ ಎರಡೂ ಕ್ಷೇತ್ರಗಳಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗುತ್ತದೆ. ಅದಕ್ಕಾಗಿ ಒಂದು ಸ್ಥಾನವನ್ನು ಹಾಗೆಯೇ ಉಳಿಸಿಕೊಳ್ಳಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

   ಮೂಲ ಬಿಜೆಪಿ ಶಾಸಕರು

   ಮೂಲ ಬಿಜೆಪಿ ಶಾಸಕರು

   ಸರ್ಕಾರ ಬರಲು ಕಾರಣರಾದ ಶಾಸಕರು ಒಂದು ಕಡೆಯಾದರೆ ಮೂಲ ಬಿಜೆಪಿ ಶಾಸಕರು ಮತ್ತೊಂದು ಕಡೆ. ಸಂಪುಟ ವಿಸ್ತರಣೆಯ ಚರ್ಚೆ ಆರಂಭವಾದರೆ ಮೂಲ ಬಿಜೆಪಿ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದು ಖಚಿತವಾಗಿದೆ. ಸಂಪುಟ ವಿಸ್ತರಣೆ ಅಂದುಕೊಂಡಷ್ಟು ಸುಲಭವಿಲ್ಲ ಎಂಬುದು ಬಿಜೆಪಿ ನಾಯಕರಿಗೂ ತಿಳಿದಿದೆ.

   ಸದ್ಯಕ್ಕೆ ಇಲ್ಲ ವಿಸ್ತರಣೆ

   ಸದ್ಯಕ್ಕೆ ಇಲ್ಲ ವಿಸ್ತರಣೆ

   ಸಚಿವ ಸಂಪುಟ ಸೇರುವ ಆಸೆ ಇರುವವರು ಕಾಯಬೇಕಾದ ಸಾಧ್ಯತೆ ಇದೆ. ಬಿಜೆಪಿ ಹೈಕಮಾಂಡ್ ಡಿಸೆಂಬರ್ ತನಕ ಸಂಪುಟ ವಿಸ್ತರಣೆ ಮಾಡಲು ಅವಕಾಶ ನೀಡುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

   English summary
   4 BJP candidates will elect for legislative council. Discussion on Chief Minister B. S. Yediyurappa cabinet expansion start again.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X