B Saroja Devi: ಮಲ್ಲೇಶ್ವರಂ ರಸ್ತೆಗೆ ಬಿ.ಸರೋಜಾದೇವಿ ಹೆಸರು: ಮಹತ್ವದ ನಿರ್ಧಾರ ತಿಳಿಸಿದ ಸಿದ್ದರಾಮಯ್ಯ
ಬೆಂಗಳೂರು, ಜುಲೈ 15: ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದಿದ್ದ ಬಹುಭಾಷಾ ಹಿರಿಯ ನಟಿ ಬಿ ಸರೋಜಾ ದೇವಿ ಅವರು ಮಂಗಳವಾರ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಡೀ ಕನ್ನಡ ಚಿತ್ರರಂಗದ ಎಲ್ಲಾ ಕಲಾವಿದರು ಸರೋಜಾ ದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯಾತಿ ಗಣ್ಯರು ಇದೀಗ ಬಿ.ಸರೋಜಾದೇವಿಯವರ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಸರೋಜಾ ದೇವಿಯವರ ಅಂತಿಮ ದರ್ಶನ ಪಡೆಯದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳೊಂದಿಗೆ ಮಾತನಾಡಿ, ಮಲ್ಲೇಶ್ವರಂ ನಲ್ಲಿರುವ ನಿವಾಸದ ರಸ್ತೆಯ ಹೆಸರಿಡುವ ಬಗ್ಗೆ ಚರ್ಚಿಸುತ್ತೇನೆ. ಮಲ್ಲೇಶ್ವರಂ ರಸ್ತೆಗೆ ಸರೋಜಾದೇವಿ ಹೆಸರಿಡುವ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಮಲ್ಲೇಶ್ವರಂ 11ನೇ ಕ್ರಾಸಿಗೆ ಬಿ ಸರೋಜಾ ದೇವಿ ಅವರ ಹೆಸರಿಡುವ ಬಗ್ಗೆ ಚರ್ಚೆ ಮಾಡಲಾಗುತ್ತದೆ ಈ ಕುರಿತು ಬಿಬಿಎಂಪಿಯೊಂದಿಗೆ ಚರ್ಚೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಹುಭಾಷಾ ನಟಿ ಬಿ.ಸರೋಜಾದೇವಿ ಅವರ ನಿಧನ ಇಡೀ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಚಿಕ್ಕವಯಸ್ಸಿನಲ್ಲಿಯೇ ಸಿನಿಮಾರಂಗವನ್ನು ಪ್ರವೇಶಿ ಏಳು ದಶಕಗಳ ಕಾಲ ಕಲಾವಿದೆಯಾಗಿದ್ದವರು. ಅಭಿನವ ಸರಸ್ವತಿ ಎಂಬ ಬಿರುದು ಚಿಕ್ಕವಯಸ್ಸಿಗೆ ದೊರೆತಿತ್ತು. ಎಲ್ಲಾ ಭಾಷೆಯ ಹೆಸರಾಂತ ನಟರೊಂದಿಗೆ ನಟಿಸಿದ್ದರು.ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ದೇವ್ ಆನಂದ್, ಎಂ.ಜಿ.ಆರ್, ಎನ್.ಟಿ.ಆರ್, ಶಿವಾಜಿ ಗಣೇಶನ್, ರಾಜ್ ಕುಮಾರ್ ಅವರೊಂದಿಗೂ ಅನೇಕ ಚಿತ್ರಗಳಲ್ಲಿ ನಟಿಸಿದ್ದರು ಎಂದರು.
ಯಾವುದೇ ಪಾತ್ರಕ್ಕೂ ಜೀವ ತುಂಬುತ್ತಿದ್ದರು. ಖಾಸಗಿ ಜೀವನದಲ್ಲಿಯೂ ಶಿಸ್ತುಬದ್ಧ ಜೀವನವನ್ನು ನಡೆಸಿದವರು. ಕನ್ನಡ ಚಿತ್ರರಂಗ ಬೆಳೆಯಲು ಅಪಾರ ಕೊಡುಗೆಯನ್ನು ಕೊಟ್ಟಿದ್ದಾರೆ. ಅವರ ಸಾವಿನಿಂದ ಚಿತ್ರರಂಗಕ್ಕೆ ಅಪಾರವಾದ ನಷ್ಟವಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ಅವರ ಸಾವಿನಿಂದಾದ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು. ಬಿ.ಸರೋಜಾದೇವಿ ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು. ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದರು.
ಬಹಳ ಚಿಕ್ಕ ವಯಸ್ಸಿನಲ್ಲಿ ಸರೋಜಾ ದೇವಿಯವರು ಸಿನಿಮಾರಂಗ ಪ್ರವೇಶಿಸಿದ್ದರು. ಕನ್ನಡ ಚಲನಚಿತ್ರರಂಗ ಬೆಳೆಯಲು ಸರೋಜಾ ದೇವಿ ಅವರ ಕೊಡುಗೆ ಅಪಾರ. ಹಿರಿಯ ನಟಿ ಬಿ ಸರೋಜಾ ದೇವಿ ನಿಧನದಿಂದ ಅಪಾರ ನಷ್ಟವಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ನಟಿ ಸರೋಜಾದೇವಿ ಅವರಿಗೆ ಚಿರಶಾಂತಿ ಸಿಗಲಿ ನಾನು ಈ ಹಿಂದೆ ಹಲವು ಸಲ ಸರೋಜಾ ದೇವಿ ಅವರನ್ನು ಭೇಟಿಯಾಗಿದ್ದೆ. ಎಲ್ಲರ ಜೊತೆಗೂ ಬಹಳ ಆತ್ಮೀಯವಾಗಿ ಪ್ರೀತಿಯಿಂದ ಮಾತನಾಡುತ್ತಾರೆ ಹಲವು ಭಾಷೆಗಳಲ್ಲಿ ಹೆಸರಾಂತ ನಟರ ಜೊತೆಗೆ ನಟಿಸಿದ್ದರು ಎಂದರು. ಅನೇಕ ಬಾರಿ ಸರೋಜಾದೇವಿಯವರನ್ನು ಭೇಟಿ ಮಾಡಿದ್ದೇನೆ. ಎಲ್ಲರೊಂದಿಗೆ ಆತ್ಮೀಯವಾಗಿ, ಪ್ರೀತಿಯಿಂದ ಮಾತನಾಡುತ್ತಿದ್ದರು. ದೊಡ್ಡ ವ್ಯಕ್ತಿತ್ವವಿದ್ದ ನಟಿ ಅವರು. ಅವರ ಸಿನಿಮಾಗಳಲ್ಲಿ ಮಲ್ಲಮ್ಮನ ಪವಾಡ, ಕಿತ್ತೂರು ಚೆನ್ನಮ್ಮ, ಭಾಗ್ಯವಂತರು, ಬಬ್ರುವಾಹನ, ನ್ಯಾಯವೇ ದೇವರು ಸೇರಿದಂತೆ ಅನೇಕ ಚಿತ್ರಗಳನ್ನು ನೋಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.












Click it and Unblock the Notifications