ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ: ಮಹತ್ವದ ಮಾಹಿತಿ ನೀಡಿದ ಪ್ರಿಯಾಂಕ್ ಖರ್ಗೆ
ಬೆಳಗಾವಿ,ಡಿಸೆಂಬರ್ 14: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಶುಕ್ರವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಅವರು, ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕೇರಳ ರಾಜ್ಯದಲ್ಲಿರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ.ಆದರೆ ಹೆಚ್ಚಳ ಮಾಡುವ ಕುರಿತ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗುವುದು ಎಂದರು.

ಗ್ರಾಮ ಪಂಚಾಯತ್ ಸದಸ್ಯ ರಿಗೆ ಪಿಂಚಣಿ,ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರಿಶೀಲಿಸಲಾಗಿರುತ್ತದೆ ಎಂದು ಹೇಳಿದರು.
ಅಧಿಕಾರಿ/ ಕೆಲವು ಸಿಬ್ಬಂದಿಗಳ ಸೇವಾ ವಿಷಯ/ ಬೇಡಿಕೆಗಳನ್ನು ಪರಿಶೀಲಿಸಲು ಆಯುಕ್ತರು, ಪಂಚಾಯತ್ ರಾಜ್ ಆಯುಕ್ತಾಲಯ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸದರಿ ಸಮಿತಿಗೆ ಪರಿಶೀಲಿಸಿ ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರಿಶೀಲಿಸಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಗ್ರಾಮ ಪಂಚಾಯತ್ ಆಸ್ತಿಗಳ ಸಮೀಕ್ಷೆ
ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯೂಯಲ್ ಸಮೀಕ್ಷೆ ನಡೆಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ವಂಚತಂತ್ರ 2.0 ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇಲ್ಲಿಯವರೆಗೆ ಮ್ಯಾನ್ಯೂಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿ ಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್ ನಲ್ಲಿ ನಮೂದಿಸಲಾಗಿದೆ ಎಂದರು.
ರಾಜ್ಯದ ಗ್ರಾಮ ಪಂಚಾಯತ್ ಗಳು ಏಪ್ರಿಲ್ 2015 ರಿಂದ ಮಾರ್ಚ್ 2023 ರ ವರೆಗೆ ವಿದ್ಯುತ್ ಸರಬರಾಜು ಕಂಪೆನಿಗಳಿಗೆ ಪಾವತಿಸಬೇಕಾಗಿರುವ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಥಾವರಗಳ ಬಾಕಿ ವಿದ್ಯುತ್ ಶುಲ್ಕದ ಒಟ್ಟು ಮೊ ತ್ತ ರೂ.6,509,90 ಕೋಟಿಗಳಲ್ಲಿ ಅಸಲು ಮೊತ್ತ ರೂ.5,257.70 ಕೋಟಿಗಳನ್ನು ಸರ್ಕಾರದ ಖಾತರೀಕರಣ ಮೂಲಕ ತೀರುವಳಿ ಮಾಡಿ ಹಾಗೂ ಬಡ್ಡಿ ಮೊತ್ತ ರೂ.1,252.20 ಕೋಟಿಗಳನ್ನು ಮನ್ನಾ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಎಪ್ರಿಲ್ 2023 ರಿಂದ ಸೆಪ್ಟೆಂಬರ್ 2024 ರ ವರೆಗೆ ಗ್ರಾಮ ಪಂಚಾಯತಿಗಳ ಕುಡಿಯುವ ನೀರು ಮತ್ತು ಬೀದಿ ದೀಪ ಸ್ಯಾವರಗಳ ವಿದ್ಯುತ್ ಶುಲ್ಕದ ಒಟ್ಟು ಮೊತ್ತ ರೂ.3,719.20 ಕೋಟಿಗಳು ಬಾಕಿ ಇರುತ್ತದೆ. ಈ ಮೊತ್ತದಲ್ಲಿ ಅಸಲು ಮೊತ್ತ ರೂ.2,749.54 ಕೋಟಿಗಳು ಮತ್ತು ಬಡ್ಡಿ ಮೊತ್ತ ರೂ.969.66 ಕೋಟಿಗಳು ಒಳಗೊಂಡಿದ್ದು, ಸದರಿ ಮೊತ್ತವನ್ನು ಸಂಬಂಧಿಸಿದ ವಿದ್ಯುತ್ ಸರಬರಾಜು ಕಂಪನಿಗಳಿಗೆ ಪಾವತಿಸಬೇಕಾಗಿರುತ್ತದೆ.
ಗ್ರಾಮ ಪಂಚಾಯತಿಗಳಿಗೆ ರಾಜ್ಯ ಹಣಕಾಸು ಆಯೋಗದ ಅಭಿವೃದ್ಧಿ ಅನುದಾನ / ಗ್ರಾಮ ಪಂಚಾಯತಿಗಳಿಗೆ ಸಹಾಯ ಹೆಸರಿನಲ್ಲಿ ಒಟ್ಟು 1202.18 ಕೋಟಿಗಳ ಅನುದಾನವನ್ನು 2024-25 ನೇ ಸಾಲಿನಲ್ಲಿ ಒದಗಿಸಿದ್ದು, ಈ ಪೈಕಿ ರೂ. 391.79 ಕೋಟಿಗಳ ಅನುದಾನವನ್ನು ಗ್ರಾಮ ಪಂಚಾಯತಿಗಳ ವಿದ್ಯುತ್ ಶುಲ್ಕದ ಮೊತ್ತ ಭರಿಸಲು ಬಿಡುಗಡೆ ಮಾಡಲಾಗುತ್ತಿದೆ. ಅಲ್ಲದೆ, గామే ಪಂಚಾಯತಿಗಳು ಸ್ವಂತ ಸಂಪನ್ಮೂಲದಿಂದ ವಿದ್ಯುತ್ ಶುಲ್ಕದ ಮೊತ್ತವನ್ನು ಭರಿಸಬಹುದಾಗಿದೆ ಎಂದರು.
2024-25ನೇ ಸಾಲಿನ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಗೌರವ ಧನಕ್ಕಾಗಿ 273.78 ಕೋಟಿಗಳ ಅನುದಾನ ಒದಗಿಸಲಾಗಿದ್ದು, ಡಿಸೆಂಬರ್ 2024 ರವರೆಗಿನ ಗೌರವಧನವನ್ನು ಬಿಡುಗಡೆ ಮಾಡಲಾಗಿದೆ . ಗ್ರಾಮಾಂತರದಲ್ಲಿರುವ ಪಂಚಾಯತ್ ಗಳಿಗೆ ಅನುದಾನ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿರುವುದಿಲ್ಲ ಎಂದರು.












Click it and Unblock the Notifications