Anganwadi workers: ಅಂಗನವಾಡಿ ಕಾರ್ಯಕರ್ತರಿಗೆ ಶೀಘ್ರದಲ್ಲೇ ಗುಡ್‌ ನ್ಯೂಸ್

ಬೆಂಗಳೂರು, ಜುಲೈ 15: ಶೀಘ್ರದಲ್ಲೇ ಅಂಗನವಾಡಿ ಕಾರ್ಯಕರ್ತರಿಗೆ ಶುಭ ಸುದ್ದಿ ಸಿಗಲಿದೆ. ಅಂಗನವಾಡಿ ಕಾರ್ಯಕರ್ತರಿಗೆ ಇನ್ಯುರೆನ್ಸ್ ನೀಡುವ ಕುರಿತು ಶೀಘ್ರವೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಈ ಕುರಿತು ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಅಂಗನವಾಡಿ ಕಾರ್ಯಕರ್ತರಿಗೆ ಗೌರವ ಧನ ಹೆಚ್ಚಳದ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿದ್ದು, ಶೀಘ್ರವೇ ಕಾರ್ಯರೂಪಕ್ಕೆ ತರುವ ಕೆಲಸ ಆಗಲಿದೆ ಎಂದು ತಿಳಿಸಿದರು.

Discussion with Siddaramaiah soon about giving insurance to Anganwadi workers

ಇನ್ನೂ ಮಂಗಳೂರು ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ) ಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ ಉದ್ಯೋಗನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು.

ಪುಷ್ಟಿ ನ್ಯೂಟ್ರಿಮಿಕ್ಸ್, ಹಾಲಿನ ಪುಡಿ ಮತ್ತಿತರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರಲ್ಲದೇ, ಉತ್ಪಾದನಾ ಆಹಾರ ಸಾಮಗ್ರಿಗಳ ಬಗ್ಗೆ ಸ್ಥಳದಲ್ಲೇ ಇದ್ದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಯಿಂದ ಮಾಹಿತಿ ಪಡೆದರು. ಆಹಾರ ಸಮಗ್ರಗಳ ಪ್ಯಾಕ್ ಮಾಡುವ ತೂಕವನ್ನು ಕೂಡ ಗಮನಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಎಲ್ಲ ಆಹಾರ ಸಾಮಗ್ರಿಗಳಲ್ಲಿ, ಅದರಲ್ಲೂ ಉತ್ಪಾದನೆಯಲ್ಲೂ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಆಹಾರ ಸಾಮಗ್ರಿಗಳು ಕಳಪೆ ಇದ್ದಲ್ಲಿ ಅಥವಾ ಯಾವುದೇ ಲೋಪದೋಷ ಇದ್ದಲ್ಲಿ ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತರಬೇಕು. ಇಲ್ಲವಾದರೆ ನೇರವಾಗಿ ತಮಗೆ ಪತ್ರ ಬರೆಯಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದರು.

ಸಹಾಯವಾಣಿಯಲ್ಲಿ ಕರೆ ಸ್ವೀಕರಿಸಿದ ಸಚಿವರು

ಒಳ್ಳೆ ಬುದ್ದಿ ಕಲಿತು, ಚೆನ್ನಾಗಿ ಓದಿ ಅಪ್ಪ ಅಮ್ಮನಿಗೆ ಒಳ್ಳೆ ಹೆಸರು ತನ್ನಿ. ಇನ್ಮೇಲೆ ಯಾವುದೇ ಕೆಟ್ಟ ಕೆಲಸ ಮಾಡದೇ, ಒಳ್ಳೆ ಪ್ರಜೆಯಾಗಿ ಬಾಳಿ. ಇದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸರ್ಕಾರಿ ವೀಕ್ಷಣಾಲಯಕ್ಕೆ ಭೇಟಿ ನೀಡಿದ ವೇಳೆ ಮಕ್ಕಳಿಗೆ ಹೇಳಿದ ಬುದ್ದಿ ಮಾತು. ಮಡಿವಾಳದ ಸ್ತ್ರೀ ಭವನದ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರಿ ವೀಕ್ಷಣಾಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವರು, ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಭೇಟಿಯಾದರು. ಸನ್ನಡತೆ ಬೆಳೆಸಿಕೊಂಡು, ಉತ್ತಮ ಪ್ರಜೆಯಾಗಿ ಬಾಳಿ ಎಂದು ಮಾರ್ಗದರ್ಶನ ನೀಡಿದರು.

ಇದಕ್ಕೂ ಮುನ್ನ ಸ್ತ್ರೀ ಶಕ್ತಿ ಭವನದ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿದರು. ಈ ವೇಳೆ ಕೇಂದ್ರದ ಸಿಬ್ಬಂದಿ ಜೊತೆಗೆ ಸಹಾಯವಾಣಿಯ ಕಾರ್ಯ ನಿರ್ವಹಣೆ ಕುರಿತಂತೆ ಮಾಹಿತಿ ಸಂಗ್ರಹಿಸಿದರು. ಜೊತೆಗೆ ಕರೆಯೊಂದನ್ನು ಸ್ವೀಕರಿಸಿ, ಸಮಸ್ಯೆಯನ್ನು ಅಲಿಸಿದರು. ರಾತ್ರಿ ವೇಳೆ ಕೇಂದ್ರಕ್ಕೆ ಮತ್ತೊಮ್ಮೆ ಭೇಟಿ ನೀಡುವುದಾಗಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+