ಕೋವಿಡ್ ಸೋಂಕು ತಡೆಯಲು ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆಯಲ್ಲಿ ಜೈವಿಕ ಸುರಂಗ
ಬೆಂಗಳೂರು, ಏ. 10: ಕೊರೊನಾ ವೈರಸ್ ಹರಡದಂತೆ ತಡೆಯಲು ಸರ್ಕಾರ ಲಾಕ್‌ಡೌನ್ ಜಾರಿಗೆ ತಂದಿದೆ. ಆದರೆ ರೇಷ್ಮೆ ಬೆಳೆಯುವ ರೈತರು ರೇಷ್ಮೆ ಮಾರಾಟ ಮಾಡಲು ಮಾರುಕಟ್ಟೆಗೆ ಬರಲೇಬೇಕಾದ ಅನಿವಾರ್ಯತೆ ಇರುತ್ತದೆ. ಕೊರೊನಾ ವೈರಸ್ ಆತಂಕದಲ್ಲಿ ಮಾರುಕಟ್ಟೆಗೆ ಬರುವ ರೈತರ ಸಹಾಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಬಂದಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹಾಗೂ ಬೆಂಗಳೂರಿನ ಮಲ್ಟಿಫ್ಲೆಕ್ಸ್ ಬಯೋಟೆಕ್ ಪ್ರೈವೇಟ್ ಲಿಮಿಟೆಡ್ ಸಹಾಯದಿಂದ ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಿಸಿರುವ ಜೈವಿಕ ಸೋಂಕು ನಿವಾರಣಾ ಸುರಂಗವನ್ನು ಸಚಿವ ಡಾ. ಸುಧಾಕರ್ ಉದ್ಘಾಟನೆ ಮಾಡಿದ್ದಾರೆ.
ರಾಜ್ಯದ ಹಲವೆಡೆಡ ಇಂತಹ ಸೋಂಕು ನಿವಾರಣಾ ಸುರಂಗಗಳನ್ನು ನಿರ್ಮಿಸಲಾಗಿದೆ. ಆದರೆ ಶಿಡ್ಲಘಟ್ಟದಲ್ಲಿ ನಿರ್ಮಾಣ ಮಾಡಿರುವ ಸುರಂಗ ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಮುನುಷ್ಯರ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ.

ಸಂಪೂರ್ಣ ಜೈವಿಕ ಉತ್ಪನ್ನಗಳನ್ನ ಬಳಸಿ ಫಾಗಿಂಗ್: ಸಾಮಾನ್ಯವಾಗಿ ಸೋಂಕು ನಿವಾರಣಾ ಸುರಂಗಗಳಲ್ಲಿ ರಾಸಾಯನಿಕ ವಸ್ತುಗಳನ್ನು ಬಳಸಿ ಫಾಗಿಂಗ್ ಮಾಡಲಾಗುತ್ತದೆ. ಇದರಿಂದ ಅಡ್ಡಪರಿಣಾಮಗಳು ಆಗುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಹೀಗಾಗಿ ಶಿಡ್ಲಘಟ್ಟ ರೇಷ್ಮೆ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗಿರುವ ಸೋಂಕು ನಿವಾರಣಾ ಸುರಂಗದಲ್ಲಿ ಸಂಪೂರ್ಣ ಜೈವಿಕ ಉತ್ಪನ್ನಗಳನ್ನು ಬಳಿಸಿ ಫಾಗಿಂಗ್ ಮಾಡುಲಾಗುತ್ತದೆ. ಇದರಿಂದ ಮನುಷ್ಯರ ದೇಹದ ಮೇಲೆ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ. ಜೈವಿಕ ಉತ್ಪನ್ನಗಳನ್ನು ಬಳಸಿ ಸುರಂಗದಲ್ಲಿ ಫಾಗಿಂಗ್ ಮಾಡುವುದರಿಂದ ರೋಗಕಾರಕ ಸೂಕ್ಷ್ಮಾಣುಗಳನ್ನು ನಿವಾರಣೆ ಮಾಡಬಹುದು, ಇದರಿಂದ ಪರಿಸರದ ಮೇಲೆಯೂ ಹಾನಿಯಾಗುವುದಿಲ್ಲ.

ಇನ್ನು ರಾಸಾಯನಿಕ ವಸ್ತುಗಳನ್ನು ಉಪಯೋಗಿಸಿ ಜನರ ಮೇಲೆ ಫಾಗಿಂಗ್ ಮಾಡುವುದರಿಂದ ತಲೆ ಸುತ್ತುವುದು, ಚರ್ಮದ ತುರಿಕೆ ಜೊತೆಗೆ ಕೋವಿಡ್ 19 ಸೋಂಕಿನ ಲಕ್ಷಣಗಳಾದ ಗಂಟಲು ಕೆರೆತ ಮತ್ತು ಕೆಮ್ಮು ಬರುವ ಸಾಧ್ಯತೆಗಳಿರುತ್ತವೆ. ಆದರೆ ಇಲ್ಲಿ ಜೈವಿಕ ವಸ್ತುಗಳ ಬಳಕೆ ಮಾಡುತ್ತಿರುವುದರಿಂದ ಅಂತಹ ಅಡ್ಡಪರಿಣಾಮಗಳು ಆಗುವುದಿಲ್ಲ. ಸಚಿವ ಡಾ. ಸುಧಾಕರ್ ಸ್ವತಃ ವೈದ್ಯರಾಗಿರುವುದರಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಜೈವಿಕ ಉತ್ಪನ್ನ ಬಳಸುವ ಸುರಂಗ ನಿರ್ಮಾಣಕ್ಕೆ ಸೂಚಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications