ಅಕ್ರಮ ಆಸ್ತಿಗಳಿಕೆ ಪ್ರಕರಣ; ಯಡಿಯೂರಪ್ಪಗೆ ನೆಮ್ಮದಿ!

ಬೆಂಗಳೂರು, ನವೆಂಬರ್ 04 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ನೆಮ್ಮದಿ ಸಿಕ್ಕಿದೆ. ಮುಖ್ಯಮಂತ್ರಿಗಳ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ.

ಶಿವಮೊಗ್ಗ ಮೂಲದ ವಕೀಲ ಬಿ. ವಿನೋದ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಪ್ರಕರಣಗಳನ್ನು ದಾಖಲು ಮಾಡಿದ್ದರು. ಬುಧವಾರ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯಬೇಕಿತ್ತು.

 Disproportionate Assets Case Against BS Yediyurappa Withdrawn

ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಪೀಠದ ಮುಂದೆ ಮನವಿ ಸಲ್ಲಿಸಿದ ವಕೀಲ ವಿನೋದ್ ಅವರು ಮೂರು ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಹೇಳಿದರು. ನ್ಯಾಯಾಲಯ ಸಹ ಇದಕ್ಕೆ ಒಪ್ಪಿಗೆ ನೀಡಿತು.

ಯಡಿಯೂರಪ್ಪ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಹುಣಸೇಕಟ್ಟೆ, ಕೋಟೆಗಂಗೂರು ಮತ್ತು ಕೆಹೆಚ್‌ಬಿ ಕಾಲೋನಿಗಳಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ವಕೀಲ ವಿನೋದ್ ಸಚಿವ ಕೆ. ಎಸ್. ಈಶ್ವರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಹ ಅಕ್ರಮ ಆಸ್ತಿಗಳಿಕೆ ಪ್ರಕರಣ ದಾಖಲು ಮಾಡಿದ್ದರು. ಆದರೆ ಅದನ್ನು ವಾಪಸ್ ಪಡೆದಿಲ್ಲ. ಹೈಕೋರ್ಟ್‌ನಲ್ಲಿ ವಿಚಾರಣೆ ಮುಂದುವರೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+