Breaking: ಡಿಕೆಶಿ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಲಿದ್ದಾರೆ ಯತ್ನಾಳ್!

ಬೆಂಗಳೂರು, ಆಗಸ್ಟ್‌ 29: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸುಪ್ರೀಂಕೋರ್ಟ್‌ ಮೆಟ್ಟಿಲೇರಲಿದ್ದಾರೆ. ಕರ್ನಾಟಕ ಹೈಕೋರ್ಟ್ ಗುರುವಾರ ನೀಡಿರುವ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿದ್ದು, ಡಿ. ಕೆ. ಶಿವಕುಮಾರ್ ಕಾನೂನು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ.

ಡಿ. ಕೆ. ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದ ಕರ್ನಾಟಕದ ಹಿಂದಿನ ಬಿಜೆಪಿ ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಾಪಸ್ ಪಡೆಯಲಾಗಿತ್ತು.

Disproportionate Assets Case Basanagouda Patil Yatnal To Move Supreme Court Against DK Shivkaumar

ಸಚಿವ ಸಂಪುಟದ ಈ ತೀರ್ಮಾನವನ್ನು ಪ್ರಶ್ನಿಸಿ ಸಿಬಿಐ ಮತ್ತು ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ್ದ ಕೋರ್ಟ್ ಗುರುವಾರ ತೀರ್ಪು ಪ್ರಕಟಸಿದ್ದು, ಅರ್ಜಿಗಳನ್ನು ವಜಾ ಮಾಡಿದ ಆದೇಶ ನೀಡಿದೆ. ಬಸನಗೌಡ ಪಾಟೀಲ್ ಯತ್ನಾಳ್ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ.

ಬಸನಗೌಡ ಪಾಟೀಲ್‌ ಯತ್ನಾಳ್‌ ಪೋಸ್ಟ್: ಗುರುವಾರ ಕರ್ನಾಟಕ ಹೈಕೋರ್ಟ್ ಆದೇಶದ ಬಳಿಕ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದಾರೆ. 'ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಡಿಸಿಎಂ ಡಿ. ಕೆ. ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆ ನಡೆಸಲು ನೀಡಿದ್ದ ಸಮ್ಮತಿ ಹಿಂಪಡೆದಿದ್ದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ನಾವು ಹಾಕಿದ್ದ ದಾವೆಯನ್ನು ಘನ ನ್ಯಾಯಾಲಯವು ಇದರಲ್ಲಿ ಸಾಂವಿಧಾನಿಕ ಪ್ರಶ್ನೆಗಳು ಉದ್ಭವಿಸುವ ಕಾರಣ ನಮ್ಮ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಪೀಠವು ತಿರಸ್ಕರಿಸಿದೆ. ಘನ ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತಾ, ಸರ್ವೋಚ್ಚ ನ್ಯಾಯಾಲಯದಲ್ಲಿ ನಾವು ಇದನ್ನು ಪ್ರಶ್ನಿಸುತ್ತೇವೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ನಾವು ಕೊಂಡೊಯ್ಯುತ್ತೇವೆ' ಎಂದು ಹೇಳಿದ್ದಾರೆ.

ಸಿಬಿಐ ಮತ್ತು ಬಸನಗೌಡ ಪಾಟೀಲ್‌ ಯತ್ನಾಳ್‌ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್, ಇದು ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ವಿವಾದವಾಗಿದೆ. ಆದ್ದರಿಂದ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿತು. ಈ ವಿವಾದವನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸುವುದು ಸೂಕ್ತ ಎಂದು ಹೇಳಿ ಅರ್ಜಿಗಳನ್ನು ವಜಾಗೊಳಿಸಿತು.

ಕರ್ನಾಟಕ ಹೈಕೋರ್ಟ್‌ ತನ್ನ ಆದೇಶದ ಮೂಲಕ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ ಮಾಡುವ ಆಯ್ಕೆಯನ್ನು ನೀಡಿದೆ. ಆದ್ದರಿಂದ ಸಿಬಿಐ ಅಥವ ಬಸನಗೌಡ ಪಾಟೀಲ್‌ ಯತ್ನಾಳ್‌ ಮೇಲ್ಮವಿನ ಸಲ್ಲಿಸುವ ತನಕ ಡಿ. ಕೆ. ಶಿವಕುಮಾರ್‌ಗೆ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಒಪ್ಪಿಗೆ ಬಳಿಕ ಸಿಬಿಐ ಡಿ. ಕೆ. ಶಿವಕುಮಾರ್ ವಿರುದ್ಧ ಆರ್‌ಸಿ ನಂಬರ್ 10 (ಎ) 2020 ಅಡಿ ಎಫ್‌ಐಆರ್ ದಾಖಲು ಮಾಡಿದೆ. ಪ್ರಕರಣದಲ್ಲಿ ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. 2013 ರಿಂದ 2018ರ ಅವಧಿಯಲ್ಲಿ ಡಿ. ಕೆ. ಶಿವಕುಮಾರ್ ಗಳಿಸಿದ ಆದಾಯ ಹಾಗೂ ವೆಚ್ಚದ ಮಾಹಿತಿ ಆಧರಿಸಿ 74.93 ಕೋಟಿ ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದಾರೆ ಎಂದು ಎಫ್‌ಐಆರ್ ದಾಖಲು ಮಾಡಿದೆ.

ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿ ಡಿ. ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+