ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆಶಿ ವಿರುದ್ಧ ಆದಾಯಕ್ಕೂ ಮೀರಿದ ಆಕ್ರಮ ಆಸ್ತಿ ಪ್ರಕರಣ: ಸಿಬಿಐಗೆ ನೋಟಿಸ್ ಜಾರಿ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು,ಆ.1. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ ಸೋಮವಾರ ಸಿಬಿಐಗೆ ನೋಟಿಸ್ ಜಾರಿಗೊಳಿಸಿದೆ.

ಸಿಬಿಐ ತಮ್ಮ ವಿರುದ್ಧ ಹೂಡಿರುವ ಪ್ರಕರಣ ರದ್ದು ಕೋರಿ ಸಲ್ಲಿಸಿರುವ ಅರ್ಜಿ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದಿತು.

ಕೆಲ ಕಾಲ ವಿಚಾರಣೆ ನಡೆಸಿದ ಬಳಿಕ ಹೈಕೋರ್ಟ್ ಸಿಬಿಐ ವಕೀಲರಿಗೆ ನೋಟಿಸ್ ಜಾರಿಗೊಳಿಸಲು ಸೂಚನೆ ನೀಡಿತು. ಜೊತೆಗೆ ಆಕ್ಷೇಪಣೆ ಸಲ್ಲಿಸಲು ತಾಕೀತು ಮಾಡಿ ವಿಚಾರಣೆಯನ್ನು ಮುಂದೂಡಿತು.

 Disproposionate asset case against DK Shivakumar, HC ordered notice to CBI

ಅಸ್ಪಷ್ಟ ಆರೋಪ:

ಡಿಕೆಶಿ ಪರ ವಕೀಲರು ವಾದ ಮಂಡಿಸಿ, ಎಫ್ಐಆರ್ ನಲ್ಲಿ ಆರೋಪದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಜೊತೆಗೆ ಆದಾಯ ತೆರಿಗೆ ಇಲಾಖೆ ಇಡೀ ಕುಟುಂಬದ ಆದಾಯ ಗಣನೆಗೆ ತೆಗೆದುಕೊಂಡಿದೆ. ನಿಯಮದಂತೆ ಡಿ.ಕೆ.ಶಿವಕುಮಾರ್ ಅವರ ಆದಾಯವನ್ನು ಮಾತ್ರ ಪರಿಗಣಿಸಬೇಕಿತ್ತು. ಆದರೆ ಹಾಗೆ ಮಾಡದೆ ನಿಯಮ ಉಲ್ಲಂಘಿಸಿರುವುದರಿಂದ ಪ್ರಕರಣ ರದ್ದುಗೊಳಿಸಬೇಕು," ಎಂದು ನ್ಯಾಯಪೀಠವನ್ನು ಕೋರಿದರು.

ಬೆಂಗಳೂರು ಮತ್ತು ನವದೆಹಲಿಯ ವಿವಿಧೆಡೆ ನಡೆಸಲಾಗಿದ್ದ ಆದಾಯ ತೆರಿಗೆ (ಐ.ಟಿ) ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಮತ್ತು ಇತರ ನಾಲ್ವರು ಆರೋಪಿಗಳ ವಿರುದ್ಧ ಆದಾಯ ತೆರಿಗೆ ಇಲಾಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಇದೇ ಪ್ರಕರಣದ ಬಗ್ಗೆ ಸಿಬಿಐ ಕೂಡ ತನಿಖೆ ನಡೆಸುತ್ತಿದೆ.

ಪ್ರಕರಣದ ಹಿನ್ನೆಲೆ:

2017ರ ಆಗಸ್ಟ್‌ 2ರಂದು ಐ.ಟಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್‌ಗೆ ಸೇರಿದ ಬೆಂಗಳೂರು ಮತ್ತು ನವದೆಹಲಿಯ ಮನೆಗಳ ಮೇಲೆ ದಾಳಿ ಮಾಡಿ 8,59,69,100 ರೂ. ಮೊತ್ತವನ್ನು ಜಪ್ತಿ ಮಾಡಿದ್ದರು.

ಡಿ.ಕೆ.ಶಿವಕುಮಾರ್, ಸಚಿನ್‌ ನಾರಾಯಣ, ಸುನಿಲ್‌ ಕುಮಾರ್‌ ಶರ್ಮ, ಆಂಜನೇಯ ಹನುಮಂತಯ್ಯ ಮತ್ತು ರಾಜೇಂದ್ರ ವಿರುದ್ಧ ಆದಾಯ ತೆರಿಗೆ ಕಾಯ್ದೆ-1961ರ ಕಲಂ 277 ಮತ್ತು 278 ಹಾಗೂ ಭಾರತೀಯ ದಂಡ ಸಂಹಿತೆಯ ಕಲಂ 120 ಬಿ, 193 ಹಾಗೂ 199ರ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಸಿಬಿಐ ಕೂಡ ಪ್ರತ್ಯೇಕ ತನಿಖೆ ನಡೆಸುತ್ತಿದೆ.

'ನಮ್ಮನ್ನು ಪ್ರಕರಣದಿಂದ ಕೈಬಿಡಬೇಕು' ಎಂದು ಕೋರಿ ಆರೋಪಿಗಳಾದ ಡಿ.ಕೆ.ಶಿವಕುಮಾರ್, ಎನ್‌.ರಾಜೇಂದ್ರ ಮತ್ತು ಆಂಜನೇಯ ಹನುಮಂತಯ್ಯ ಸಲ್ಲಿಸಿರುವ ಅರ್ಜಿಗಳನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಕೋರ್ಟ್ ವಿಚಾರಣೆ ನಡೆಸಿತ್ತು.

Recommended Video

DK ಆಟಕ್ಕೆ ಸುಸ್ತಾದ ವೆಸ್ಟ್ ಇಂಡೀಸ್: ಮೊದಲ T20 ಯಲ್ಲಿ ಟೀಮ್ ಇಂಡಿಯಾ ಜಯಭೇರಿ | OneIndia Kannada

ಆಗ ಐ.ಟಿ ಪರ ವಕೀಲರು ವಾದ ಮಂಡಿಸಿ 'ಆರೋಪಿಗಳು, 2017-18ರ ಸಾಲಿನ ಆದಾಯ ತೆರಿಗೆ ತಪ್ಪಿಸುವಲ್ಲಿ ಸಂಚು ರೂಪಿಸಿದ್ದಾರೆ. ಬೇರೊಂದು ಪ್ರಕರಣದಲ್ಲಿ ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ. ಇವರೆಲ್ಲಾ ಆದಾಯ ತೆರಿಗೆ ಕಾಯ್ದೆ-1961ರ ವಿವಿಧ ಕಲಂಗಳಡಿ ದಂಡನೀಯ ಅಪರಾಧ ಎಸಗಿದ್ದಾರೆ. ಇಂತಹ ಆಪಾದಿತರನ್ನು ಪ್ರಾಸಿಕ್ಯೂಷನ್‌ಗೆ ಒಳಪಡಿಸುವುದು ಅಗತ್ಯ ಎಂದು ಸುಪ್ರೀಂ ಕೋರ್ಟ್‌ನ ವಿವಿಧ ತೀರ್ಪುಗಳು ಈಗಾಗಲೇ ಸ್ಪಷ್ಟಪಡಿಸಿವೆ' ಎಂದು ಹೇಳಿದ್ದರು.

English summary
The High Court on Monday issued a notice to the CBI in the case of disproportionate assets against KPCC President and former minister DK Shivakumar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X