ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅನರ್ಹಗೊಂಡ ಶಾಸಕರಿಂದ ಸುಪ್ರೀಂಕೋರ್ಟ್‌ಗೆ ಮೊರೆ

|
Google Oneindia Kannada News

ಬೆಂಗಳೂರು, ಜುಲೈ 25 : ಕರ್ನಾಟಕ ರಾಜಕೀಯದಲ್ಲಿ ಗುರುವಾರ ಮಹತ್ವದ ಬೆಳವಣಿಗೆಯಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದರು.

ಗುರುವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ರಮೇಶ್ ಕುಮಾರ್ ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ ಕಮಟಳ್ಳಿ (ಅಥಣಿ) ಮತ್ತು ಆರ್. ಶಂಕರ್ (ರಾಣೆಬೆನ್ನೂರು) ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದರು.

BREAKING: 2023ರ ತನಕ ಶಾಸಕ ಸ್ಥಾನದಿಂದ ಆರ್ ಶಂಕರ್ ಅನರ್ಹBREAKING: 2023ರ ತನಕ ಶಾಸಕ ಸ್ಥಾನದಿಂದ ಆರ್ ಶಂಕರ್ ಅನರ್ಹ

ಈ ಮೂವರು ಶಾಸಕರು 15ನೇ ವಿಧಾನಸಭೆ ಅವಧಿ ಮುಗಿಯುವ ತನಕ ಚುನಾವಣಾ ಕಣಕ್ಕಿಳಿಯುವಂತಿಲ್ಲ. ಮೂವರು ಶಾಸಕರು ಸ್ಪೀಕರ್ ಆದೇಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ತೀರ್ಮಾನವನ್ನು ಕೈಗೊಂಡಿದ್ದಾರೆ.

ಬಿಜೆಪಿ ಸರ್ಕಾರ : ರಮೇಶ್ ಕುಮಾರ್ ನಡೆ ಮೇಲೆ ಪಕ್ಷದ ತೀರ್ಮಾನಬಿಜೆಪಿ ಸರ್ಕಾರ : ರಮೇಶ್ ಕುಮಾರ್ ನಡೆ ಮೇಲೆ ಪಕ್ಷದ ತೀರ್ಮಾನ

Disqualification MLAs to move Supreme Court

ಸ್ಪೀಕರ್ ರಮೇಶ್ ಕುಮಾರ್ ನೀಡಿದ ಆದೇಶವನ್ನು ಪ್ರಶ್ನಿಸಿ ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ ಕಮಟಳ್ಳಿ (ಅಥಣಿ) ಮತ್ತು ಆರ್. ಶಂಕರ್ (ರಾಣೆಬೆನ್ನೂರು) ಶುಕ್ರವಾರವೇ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ.

ಜುಲೈ 30 ರ ಒಳಗೆ ಬಿಜೆಪಿ ಸರ್ಕಾರ ರಚಿಸದಿದ್ದರೆ ಮಧ್ಯಂತರ ಚುನಾವಣೆ: ಸಿದ್ದರಾಮಯ್ಯಜುಲೈ 30 ರ ಒಳಗೆ ಬಿಜೆಪಿ ಸರ್ಕಾರ ರಚಿಸದಿದ್ದರೆ ಮಧ್ಯಂತರ ಚುನಾವಣೆ: ಸಿದ್ದರಾಮಯ್ಯ

ಈಗಾಗಲೇ ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಶಾಸಕರು ಮತ್ತೆ ಅರ್ಜಿ ಸಲ್ಲಿಸಿದರೆ ಅದರ ವಿಚಾರಣೆಯೂ ಆ ಅರ್ಜಿಗಳ ಜೊತೆಗೆ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, "13 ಅತೃಪ್ತ ಶಾಸಕರ ‌ರಾಜೀನಾಮೆ‌ ವಿಚಾರವನ್ನು ಶೀಘ್ರವಾಗಿ ಇತ್ಯರ್ಥ ‌ಮಾಡಲಾಗುವುದು" ಎಂದು ಹೇಳಿದರು.

English summary
Ramesh Jarakiholi, Mahesh Kumathalli and R.Shankar decided to move supreme court. Karnataka assembly speaker K.R. Ramesh Kumar disqualified all three members.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X