ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

17 ಅನರ್ಹ ಶಾಸಕರಿಗೆ ಸುಪ್ರೀಂನಲ್ಲಿ ಹಿನ್ನಡೆ; ಅರ್ಜಿ ಸಂವಿಧಾನಿಕ ಪೀಠಕ್ಕೆ?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 18 : ಕರ್ನಾಟಕದ 17 ಶಾಸಕರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ. ಈಗಾಗಲೇ ಚುನಾವಣಾ ಆಯೋಗ 15 ಕ್ಷೇತ್ರಗಳ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದು, ಚುನಾವಣೆ ನಡೆಯಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.

14 ಕಾಂಗ್ರೆಸ್ ಮತ್ತು 3 ಜೆಡಿಎಸ್ ಶಾಸಕರು ತಮ್ಮನ್ನು ಅನರ್ಹಗೊಳಿಸಿದ ಕರ್ನಾಟಕ ವಿಧಾನಸಭೆ ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿ ಎನ್‌. ವಿ. ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಈಗಾಗಲೇ ಅರ್ಜಿಯ ವಿಚಾರಣೆ ನಡೆಸಿದೆ.

ಯಡಿಯೂರಪ್ಪ ಸರ್ಕಾರಕ್ಕೆ ಕೈಕೊಡಲಿದ್ದಾರೆಯೇ ಅನರ್ಹ ಶಾಸಕರು?ಯಡಿಯೂರಪ್ಪ ಸರ್ಕಾರಕ್ಕೆ ಕೈಕೊಡಲಿದ್ದಾರೆಯೇ ಅನರ್ಹ ಶಾಸಕರು?

ಅಕ್ಟೋಬರ್ 22ರ ಬಳಿಕ ಪುನಃ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಲಿದೆ. ಆಗ ಅರ್ಜಿಗಳನ್ನು ಸಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಉಪ ಚುನಾವಣೆ ನಡೆಯಲಿದೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಇಲ್ಲ: ಉಮೇಶ್ ಕತ್ತಿಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಇಲ್ಲ: ಉಮೇಶ್ ಕತ್ತಿ

Disqualified MLAs

ಸಂವಿಧಾನದ 190 (3) ವಿಧಿಯ ಪ್ರಕಾರ ವಿಧಾನಸಭಾಧ್ಯಕ್ಷರ ಅಧಿಕಾರ, ವಿವೇಚನೆ ಪ್ರಶ್ನಿಸಿದ ಪ್ರಕರಣಗಳು ಸಂವಿಧಾನಿಕ ಪೀಠಕ್ಕೆ ವರ್ಗಾವಣೆಯಾಗಬೇಕು. 145 (3) ನೇ ವಿಧಿ ಪ್ರಕಾರ ಸಂವಿಧಾನಿಕ ಪೀಠಕ್ಕೆ ವರ್ಗಾವಣೆಗೊಂಡರೆ ಉಪ ಚುನಾವಣೆ ಮೇಲೆ ಪ್ರಭಾವ ಬೀರಲಿದೆ.

ಯಡಿಯೂರಪ್ಪ ನಿರಾಳ; ಅನರ್ಹ ಶಾಸಕರ ಕನಸು ನುಚ್ಚು ನೂರು! ಯಡಿಯೂರಪ್ಪ ನಿರಾಳ; ಅನರ್ಹ ಶಾಸಕರ ಕನಸು ನುಚ್ಚು ನೂರು!

ಒಂದು ವೇಳೆ ಅರ್ಜಿ ಸಂವಿಧಾನಿಕ ಪೀಠಕ್ಕೆ ವರ್ಗಾವಣೆಗೊಳ್ಳುವ ಸಾಧ್ಯತೆ ಇದ್ದರೆ ಅನರ್ಹ ಶಾಸಕರು ಅರ್ಜಿಯನ್ನು ವಾಪಸ್ ಪಡೆಯಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ. ಅರ್ಜಿ ವಾಪಸ್ ಪಡೆದು ಹೈಕೋರ್ಟ್‌ನಲ್ಲಿ ಸಲ್ಲಿಸಲು ಶಾಸಕರು ಚರ್ಚಿಸುತ್ತಿದ್ದಾರೆ.

ಈಗಾಗಲೇ 15 ಕ್ಷೇತ್ರದ ಉಪ ಚುನಾವಣೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅನರ್ಹ ಶಾಸಕರು ಸಹ ಹೈಕೋರ್ಟ್‌ಗೆ ಬಂದರೆ ಎಲ್ಲಾ ಅರ್ಜಿಗಳ ವಿಚಾರಣೆ ಒಟ್ಟಿಗೆ ನಡೆಯುವ ಸಾಧ್ಯತೆ ಇದೆ.

English summary
Supreme court may send Karnataka's 17 MLA's petition to constitution bench. 14 Congress and 3 JDS MLA's moved court after assembly speaker disqualified them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X