ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಅವಿಶ್ವಾಸ ನಿರ್ಣಯ ಹೈಕೋರ್ಟ್ ಮಹತ್ವದ ಆದೇಶ
Recommended Video

ಬೆಂಗಳೂರು, ಅಕ್ಟೋಬರ್ 13: ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿಶ್ವಾಸ ನಿರ್ಣಯದ ಕುರಿತು ಮಹತ್ವದ ಆದೇಶವನ್ನು ಹೈಕೋರ್ಟ್ ನಿನ್ನೆ (ಅಕ್ಟೋಬರ್ 12) ನೀಡಿದೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೇಲೆ ಭ್ರಷ್ಟಾಚಾರದ ನಿರ್ದಿಷ್ಟ ಆರೋಪ ಇದ್ದಲ್ಲಿ ಕಾಲ ಮಿತಿ ಇಲ್ಲದೆ ಯಾವಾಗ ಬೇಕಾದರೂ ಅವಿಶ್ವಾಸ ನಿರ್ಣಯ ಮಾಡಿ ಅಧ್ಯಕ್ಷ-ಉಪಾಧ್ಯಕ್ಷರನ್ನು ಸ್ಥಾನದಿಂದ ಕೆಳಗೆ ಇಳಿಸಬಹುದು ಎಂದು ಹೈಕೋರ್ಟ್ ಹೇಳಿದೆ.
30 ತಿಂಗಳ ವರೆಗೆ ಅಧ್ಯಕ್ಷ-ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವಂತಿರಲಿಲ್ಲ ಇದು ಈ ಮುಂಚೆ ಇದ್ದ ನಿಯಮವಾಗಿತ್ತು. ಈಗ ಈ ನಿಯಮವನ್ನು ಹೈಕೋರ್ಟ್ ಬದಲಾಯಿಸಿದೆ.

ಆದರೆ ಹೈಕೋರ್ಟ್ ತೀರ್ಪಿನಲ್ಲಿ ಪ್ರಮುಖ ಅಂಶವೊಂದು ಇದ್ದು. ಅಕಸ್ಮಾತ್, ಅಧ್ಯಕ್ಷ ಅಥವಾ ಉಪಾಧ್ಯಕ್ಷರ ಮೇಲೆ ಯಾವುದೇ ಭ್ರಷ್ಟಾಚಾರ ಅಥವಾ ಮತ್ತಿತರೆ ಆರೋಪಗಳು ಇಲ್ಲವೆಂದಾದಲ್ಲಿ 30 ತಿಂಗಳ ಕಾಲ ಅವಿಶ್ವಾಸ ಗೊತ್ತುವಳಿ ಮಂಡಿಸುವಂತಿಲ್ಲ ಎಂದು ಸಹ ಹೈಕೋರ್ಟ್ ಹೇಳಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೇಲೆ ಅಧಿಕಾರ ದುರುಪಯೋಗ, ಭ್ರಷ್ಟಾಚಾರ, ಅನುದಾನ ದುರ್ಬಳಕೆ, ಯೋಜನೆ ಅನುಷ್ಠಾನದಲ್ಲಿ ಅವ್ಯವಹಾರ ಇಂತಹಾ ನಿರ್ದಿಷ್ಟ ಭ್ರಷ್ಟಾಚಾರದ ಆರೋಪಗಳು ಇದ್ದರಷ್ಟೆ ಅಧ್ಯಕ್ಷ-ಉಪಾಧ್ಯಕ್ಷರ ಮೇಲೆ ಸದಸ್ಯರು ಅವಿಶ್ವಾಸ ನಿರ್ಣಯ ಸಲ್ಲಿಸಬಹುದು.
60ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು-ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಆಯಾ ಪಂಚಾಯಿತಿಯ ಉಪವಿಭಾಗಾಧಿಕಾರಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸಿ ಆದೇಶ ನೀಡಿದೆ. ಆದೇಶದ ಬಗ್ಗೆ ಅಸಾಮಾಧಾನ ಹೊಂದಿರುವ ಅರ್ಜಿದಾರರು ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.












Click it and Unblock the Notifications