ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ವಿಸ್ತರಣೆ ಬೆನ್ನಲ್ಲೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ರಾಜೀನಾಮೆ ಬೆದರಿಕೆ!

|
Google Oneindia Kannada News

ಬೆಂಗಳೂರು, ಆ. 04: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಕೊಟ್ಟಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಕಳೆದ ಭಾನುವಾರವೇ ದೆಹಲಿಗೆ ತೆರಳಿದ್ದ ಸಿಎಂ ಬೊಮ್ಮಾಯಿ ನಾಲ್ಕು ದಿನಗಳಿಂದ ದೆಹಲಿಯಲ್ಲಿಯೇ ಉಳಿದುಕೊಂಡಿದ್ದರು. ಇದೀಗ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಕೊಟ್ಟಿರುವುದರಿಂದ ಸಿಎಂ ಬಸವರಾಜ ಬೊಮ್ಮಾಯಿ ಅವರ ಮುಂದಿದ್ದ ಮೊದಲು ಸವಾಲು ಪರಿಹಾರವಾದಂತಾಗಿದೆ. ಆದರೆ ಇದೇ ಸಂದರ್ಭದಲ್ಲಿ ಮತ್ತೊಂದು ದೊಡ್ಡ ಸವಾಲು ಸಿಎಂ ಬೊಮ್ಮಾಯಿ ಅವರಿಗೆ ಎದುರಾಗಿದ್ದು, ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟವಾಗಿದೆ. ಮಂತ್ರಿ ಸ್ಥಾನ ಸಿಗದಿದ್ದರೆ ರಾಜೀನಾಮೆ ಕೊಡುವ ಬೆದರಿಕೆಯನ್ನು ಶಾಸಕರು ಹಾಕಿದ್ದಾರೆ.

ಸಿಎಂ ಬೊಮ್ಮಾಯಿ ಸಂಪುಟ ಸೇರುವವರ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ. ತಮ್ಮ ಸಂಪುಟ ಸೇರುವವರ ಪಟ್ಟಿಯೊಂದಿಗೆ ಇದೀಗ ವಿಧಾನಸೌಧಕ್ಕೆ ಬಂದಿರುವ ಸಿಎಂ, ಪ್ರಮಾಣ ವಚನ ಸ್ವೀಕರಿಸುವವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಕೊಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ದೂರವಾಣಿ ಕರೆ ಬರದವರು ಅಸಮಾಧಾನ ವ್ಯಕ್ತಪಡಿಸಿದ್ದು, ಸಂಪುಟ ಸೇರುವವರ ಪಟ್ಟಿ ಅಧಿಕೃತವಾಗಿ ಪ್ರಕಟವಾದ ಬಳಿಕ ಬಿಜೆಪಿಯಲ್ಲಿ ಇನ್ನಷ್ಟು ಶಾಸಕರು ಅಸಮಾಧಾನ ವ್ಯಕ್ತಪಡಿಸುವ ಸಾಧ್ಯತೆಯಿದೆ.

ಮಂತ್ರಿಸ್ಥಾನ ಸಿಗದಿದ್ದರೆ ರಾಜೀನಾಮೆ ಕೊಡುವ ಬೆದರಿಕೆಯನ್ನು ಬೆಳಗಾವಿ ಜಿಲ್ಲೆಯ ಶಾಸಕರೊಬ್ಬರು ಈಗಾಗಲೇ ಹಾಕಿದ್ದಾರೆ. ಹೀಗಾಗಿ ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಬೆಳಗಾವಿ ಕಂಟಕವಾಗಲಿದೆಯಾ? ರಾಜೀನಾಮೆ ಬೆದರಿಕೆ ಹಾಕಿರುವ ಶಾಸಕರು ಯಾರು? ಮುಂದಿದೆ ಮಾಹಿತಿ!

ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಬೊಮ್ಮಾಯಿ

ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಬೊಮ್ಮಾಯಿ

ಸಂಪುಟ ವಿಸ್ತರಣೆಗೆ ಹೈಕಮಾಂಡ್ ಕೊಟ್ಟಿರುವ ಪಟ್ಟಿಯೊಂದಿದೆ ಸಿಎಂ ಬೊಮ್ಮಾಯಿ ಬೆಂಗಳೂರಿಗೆ ಬಂದಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ವಿಧಾನಸೌಧಕ್ಕೆ ಅವರು ಆಗಮಿಸಿದ್ದು, ರಾಜಭವನಕ್ಕೆ ಸಂಪುಟ ಸೇರುವವರ ಪಟ್ಟಿಯನ್ನು ಕಳುಹಿಸಲಿದ್ದಾರೆ.


ದೆಹಲಿಯಿಂದ ವಿಧಾನಸೌಧಕ್ಕೆ ಆಗಮಿಸಿರುವ ಸಿಎಂ ಬೊಮ್ಮಾಯಿ ಅವರು, "ಈಗ ಬೆಳಗ್ಗೆ 11 ಗಂಟೆಗೆ ಹೈಕಮಾಂಡ್‌ನಿಂದ ಶುಭ ಸುದ್ದಿ ಬರುವ ನಿರೀಕ್ಷೆ ಇದೆ. ಇನ್ನು ಎರಡು ವಿಷಯಗಳು ಬಾಕಿ ಇರುವುದರಿಂದ ಅಂತಿಮ ಪಟ್ಟಿ ಪ್ರಕಟಕ್ಕೆ ಕಾಯುತ್ತಿದ್ದೇವೆ. ಹೈಕಮಾಂಡ್ ಆ ಎರಡು ವಿಷಯಗಳನ್ನು ತೀರ್ಮಾನ ಮಾಡಿದ ತಕ್ಷಣ ರಾಜಭವನಕ್ಕೆ ಶಾಸಕರ ಪಟ್ಟಿಯನ್ನು ಕಳುಹಿಸುತ್ತೇವೆ" ಎಂದು ಮಾಹಿತಿ ಕೊಟ್ಟಿದ್ದಾರೆ. ಈ ಮಧ್ಯೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟವಾಗಿದೆ. ಮಂತ್ರಿಸ್ಥಾನ ಸಿಗದಿದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಆನಂದ್ ಮಾಮನಿ ಹೇಳಿಕೆ ನೀಡಿದ್ದಾರೆ.

ಅಸಮಾಧಾನ ಸ್ಪೋಟ, ರಾಜೀನಾಮೆ ಬೆದರಿಕೆ

ಅಸಮಾಧಾನ ಸ್ಪೋಟ, ರಾಜೀನಾಮೆ ಬೆದರಿಕೆ

ಸಂಪುಟ ವಿಸ್ತರಣೆ ನಿಗದಿ ಆಗುತ್ತಿದ್ದಂತೆಯೆ ಬಿಜೆಪಿಯಲ್ಲಿ ಅಸಮಾಧಾನ ಸ್ಪೋಟವಾಗಿದೆ. ಮಂತ್ರಿಯಾಗದಿದ್ದರೆ ರಾಜೀನಾಮೆ ಕೊಡುತ್ತೇನೆ ಎಂದು ಬೆಳಗಾವಿ ಜಿಲ್ಲೆ ಸವದತ್ತಿ ಎಲ್ಲಮ್ಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಮಾಮನಿ ಅವರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಟ್ಟಿರುವ ಅವರು, ಸಚಿವ ಸ್ಥಾನ ಸಿಗದಿದ್ದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ‌ ನೀಡುವುದು ಖಚಿತ ಎಂದು ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ಹೇಳಿಕೆ ನೀಡಿದ್ದಾರೆ. ಬಿಬಿಎಂಪಿ ಚುನಾವಣೆ ನೆಪವೊಡ್ಡಿ ಬೆಂಗಳೂರಿಗೆ ಸಂಪುಟವನ್ನು ಸೀಮಿತಗೊಳಿಸಿದ್ದಾರೆ. ಮಂತ್ರಿ ಸ್ಥಾನದ ಬಗ್ಗೆ ಈ ಹಿಂದೆಯೇ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದರು. ಮಂತ್ರಿ ಆಗದಿದ್ದರೆ ಉಪ ಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ನಾನು ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಪಕ್ಷ ನಿಷ್ಠನಾಗಿ ದಶಕಗಳ ಕಾಲ ಕೆಲಸ ಮಾಡಿದ್ದೇನೆ. ಮುಂದೆಯೂ ನಾನು ಪಕ್ಷ ನಿಷ್ಠನಾಗಿ ಕೆಲಸ ಮಾಡಿಕೊಂಡು ಇರುತ್ತೇನೆ" ಎಂದು ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ್ ಮಾಮನಿ ಸ್ಪಷ್ಟಪಡಿಸಿದ್ದಾರೆ.


ಹೀಗಾಗಿ ಮತ್ತೆ ಬೆಳಗಾವಿ ಜಿಲ್ಲೆಯಿಂದಲೇ ಸರ್ಕಾರಕ್ಕೆ ಆತಂಕ ಶುರುವಾಗುತ್ತದೆಯಾ? ಎಂಬ ಸಂದೇಹ ಮೂಡಿದೆ. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಬೆಳಗಾವಿ ರಾಜಕೀಯ ಕಾರಣವಾಗಿದ್ದನ್ನು ಹಿಂದೆ ನಡೆದಿತ್ತು.

ಸಂಪುಟ ವಿಸ್ತರಣೆ ಬಳಿಕ ಮತ್ತಷ್ಟು ಅಸಮಾಧಾನ ಸ್ಪೋಟ?

ಸಂಪುಟ ವಿಸ್ತರಣೆ ಬಳಿಕ ಮತ್ತಷ್ಟು ಅಸಮಾಧಾನ ಸ್ಪೋಟ?

ಸಂಪುಟ ವಿಸ್ತರಣೆ ಬಳಿಕ ಮತ್ತಷ್ಟು ಅಸಮಾಧಾನ ಸ್ಪೋಟವಾಗುವ ಸಾಧ್ಯತೆಗಳು ಕಂಡು ಬಂದಿವೆ. ಬೇರೆ ಪಕ್ಷಗಳಿಂದ ಬಿಜೆಪಿಗೆ ಬಂದು ಮಂತ್ರಿಯಾಗಿದ್ದ ಇಬ್ಬರನ್ನು ಸಂಪುಟಕ್ಕೆ ಸೇರಿಸಲಾಗುತ್ತಿಲ್ಲ ಎಂಬ ಮಾಹಿತಿಯಿದೆ. ಜೊತೆಗೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಬಂಡಾಯವೆದ್ದಿದ್ದ ಮೂವರಿಗೆ ಮಂತ್ರಿಸ್ಥಾನ ಸಿಕ್ಕಿಲ್ಲ ಎಂಬ ಮಾಹಿತಿಯೂ ಇದೆ. ಹೀಗಾಗಿ ಅವರೆಲ್ಲರೂ ಮುಂದಿನ ದಿನಗಳಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕುವ ಸಾಧ್ಯತೆಯಿದೆ.

ಇದೀಗ ದೆಹಲಿಯಿಂದ ಬೆಂಗಳೂರಿಗೆ ವಾಪಸಾಗಿರುವ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರು ತಮಗೆ ಮಂತ್ರಿಸ್ಥಾನ ಸಿಗದಿರುವ ಬಗ್ಗೆ ಪ್ರತಿಕ್ರಿಯೆ ಕೊಡಲು ನಿರಾಕರಿಸಿದ್ದಾರೆ. ಆದರೆ "ನಾನು ಇಂತಹ ಪರಿಸ್ಥಿತಿಗಳನ್ನು ಈ ಹಿಂದೆ ಅನೇಕ ಬಾರಿ ಎದುರಿಸಿದ್ದೇನೆ. ಪಕ್ಷದ ತೀರ್ಮಾನವನ್ನು ಸ್ವಾಗತಿಸುತ್ತೇನೆ" ಎಂದು ಹೇಳಿಕೆ ಕೊಡುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಸಂಪುಟಕ್ಕೆ 28 ಜನರ ಸೇರ್ಪಡೆಗೆ ಹೈಕಮಾಂಡ್ ಸೂಚನೆ

ಸಂಪುಟಕ್ಕೆ 28 ಜನರ ಸೇರ್ಪಡೆಗೆ ಹೈಕಮಾಂಡ್ ಸೂಚನೆ

ಇಂದು ಮಧ್ಯಾಹ್ನ 02.15ಕ್ಕೆ ಸಚಿವ ಸಂಪುಟ ವಿಸ್ತರಣೆಗೆ ಕಾಲ ನಿಗದಿಯಾಗಿದೆ. ಹೀಗಾಗಿ ದೆಹಲಿಯಿಂದ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸುವವರಿಗೆ ದೂರವಾಣಿ ಕರೆ ಮಾಡಿ ಆಹ್ವಾನ ನೀಡುತ್ತಿದ್ದಾರೆ. ಇಂದು ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ 28 ಜನರು ಮಂತ್ರಿಯಾಗಿ ಪಮಾಣ ವಚನ ಸ್ವೀಕರಿಸಲಿದ್ದಾರೆ.

ಹೀಗಾಗಿ ಉಳಿದಿರುವ 5 ಸ್ಥಾನಗಳನ್ನು ಕಾಯ್ದಿರಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನ ಮಾಡಿದೆ. ಹೀಗಾಗಿ ಅಸಮಾಧಾನ ಹೆಚ್ಚಾದಲ್ಲಿ ಅವರಿಗೆ ಮಂತ್ರಿ ಪದವಿ ಕೊಡಲು ಬಿಜೆಪಿ ತೀರ್ಮಾನ ಮಾಡಿದೆ. ಆದರೆ ಎಲ್ಲರನ್ನೂ ಸಿಎಂ ಬೊಮ್ಮಾಯಿ ಹೇಗೆ ಸಂಬಾಳಿಸುತ್ತಾರೆ ಎಂಬುದರ ಮೇಲೆ ರಾಜ್ಯ ಬಿಜೆಪಿ ಸರ್ಕಾರದ ಭವಿಷ್ಯ ನಿಂತಿದೆ ಎಂದು ಹೇಳಬಹುದಾಗಿದೆ.

Recommended Video

ಆಟಗಾರರ ಆಯ್ಕೆ ಯಲ್ಲಿ ಸೋತ ವಿರಾಟ್ ಕೊಹ್ಲಿ | Oneindia Kannada

English summary
Dissatisfaction started among BJP MLAs amid Karnataka Cabinet Expansion Today. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X