ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಆಂತರಿಕ ಬೇಗುದಿಯ ನಡುವೆ ಕಾಂಗ್ರೆಸ್ ಕಾರ್ಯಾಧ್ಯಕ್ಷ ಸಿಡಿಸಿದ ಹೊಸ ಬಾಂಬ್

|
Google Oneindia Kannada News

ಬಿಜೆಪಿಯಲ್ಲಿನ ಅತೃಪ್ತ ಶಾಸಕರ ಬಣದ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ, ಕೆಪಿಸಿಸಿ ಕಾರ್ಯಾಧ್ಯಕ್ಷರು ಹೊಸ ವಿಷಯವೊಂದನ್ನು ಬಹಿರಂಗ ಪಡಿಸಿದ್ದಾರೆ.

ರಾಜ್ಯ ಜಲಸಂಪನ್ಮೂಲ ಖಾತೆಯ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಕೌಂಟರ್ ನೀಡುತ್ತಾ, ಈಶ್ವರ ಖಂಡ್ರೆ ನೀಡಿರುವ ಹೇಳಿಕೆ, ಬಿಜೆಪಿಯಲ್ಲಿ ಹೊಸ ಗೊಂದಲವನ್ನು ಸೃಷ್ಟಿಸುವ ಸಾಧ್ಯತೆಯಿದೆ.

ತೆರೆಯ ಮೇಲಿನ ಸಿಎಂ ಬಿಎಸ್ವೈ, ತೆರೆಯ ಹಿಂದಿನ ಮುಖ್ಯಮಂತ್ರಿ ಯಾರು?ತೆರೆಯ ಮೇಲಿನ ಸಿಎಂ ಬಿಎಸ್ವೈ, ತೆರೆಯ ಹಿಂದಿನ ಮುಖ್ಯಮಂತ್ರಿ ಯಾರು?

ಮನೆಯೆಂದ ಮೇಲೆ ವ್ಯತ್ಯಾಸಗಳು ಇರುವುದು ಸಹಜ, ಅದನ್ನೆಲ್ಲಾ ಸರಿಮಾಡಿಕೊಂಡು ಮುಂದಕ್ಕೆ ಸಾಗುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿಕೆಯನ್ನು ನೀಡುತ್ತಿದ್ದರೂ, ರಾಜ್ಯಸಭಾ ಚುನಾವಣೆಯ ಈ ಹೊತ್ತಿನಲ್ಲಿ ಆಂತರಿಕ ಬೇಗುದಿ ಇನ್ನಷ್ಟು ಜಾಸ್ತಿಯಾಗುವ ಸಾಧ್ಯತೆಯಿದೆ.

ಬಿಎಸ್ವೈ ಬದಲಾವಣೆಗೆ ಯತ್ನಿಸುತ್ತಿರುವ ಬಿಜೆಪಿಯ ಆ ರಾಷ್ಟ್ರ ನಾಯಕರಾರು?ಬಿಎಸ್ವೈ ಬದಲಾವಣೆಗೆ ಯತ್ನಿಸುತ್ತಿರುವ ಬಿಜೆಪಿಯ ಆ ರಾಷ್ಟ್ರ ನಾಯಕರಾರು?

ಸಚಿವ ಜಾರಕಿಹೊಳಿ ಇತ್ತೀಚೆಗೆ ಹೇಳಿಕೆಯನ್ನು ನೀಡುತ್ತಾ, ಕಾಂಗ್ರೆಸ್ಸಿನ ಇಪ್ಪತ್ತಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲು ಸಿದ್ದರಾಗಿದ್ದಾರೆ ಎನ್ನುವ ಹೇಳಿಕೆಯನ್ನು ನೀಡಿದ್ದರು. ಇದಕ್ಕೆ ಬಿಜೆಪಿಯವರಿಗೆ ಕಸಿವಿಸಿ ಉಂಟಾಗುವ
ಹೇಳಿಕೆಯನ್ನು ಈಶ್ವರ ಖಂಡ್ರೆ ನೀಡಿದ್ದಾರೆ.

ಇಪ್ಪತ್ತು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ

ಇಪ್ಪತ್ತು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ

ಚಾಮರಾಜನಗರದಲ್ಲಿ ಮಾತನಾಡುತ್ತಿದ್ದ ಸಚಿವ ರಮೇಶ್ ಜಾರಕಿಹೊಳಿ, "ಇಪ್ಪತ್ತು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ. ಮೊದಲು ಟ್ರಯಲ್ ರನ್ ಎನ್ನುವಂತೆ, ಐವರನ್ನು ಬಿಜಿಪಿಗೆ ಸೇರಿಸುತ್ತೇನೆ. ಬಿಜೆಪಿಯ ವರಿಷ್ಠರು ನನಗೆ ಅನುಮತಿ ನೀಡದರಷ್ಟೇ ಸಾಕು, ಮಿಕ್ಕಿದ್ದನ್ನು ನಾನು ನೋಡಿಕೊಳ್ಳುತ್ತೇನೆ"ಎಂದು ಹೇಳಿದ್ದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ

ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಈಶ್ವರ ಖಂಡ್ರೆ, "ಕಾಂಗ್ರೆಸ್ಸಿನ ಯಾರೊಬ್ಬರೂ ಬಿಜೆಪಿಗೆ ಹೋಗುವುದಿಲ್ಲ. ಅಸಲಿಗೆ, ರಮೇಶ್ ಜಾರಕಿಹೊಳಿ ಕಾಂಗ್ರೆಸ್ಸಿಗೆ ವಾಪಸ್ ಬರಲು ಪ್ರಯತ್ನ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿನ ಮಾತುಕತೆಯಲ್ಲಿ ಉತ್ಸುಕರೂ ಆಗಿದ್ದಾರೆ" ಎನ್ನುವ ಹೇಳಿಕೆಯನ್ನು ಖಂಡ್ರೆ ನೀಡಿದ್ದಾರೆ.

ಜಾರಕಿಹೊಳಿ ಹೇಳಿಕೆಯಲ್ಲಿ ಸತ್ಯವಿಲ್ಲ

ಜಾರಕಿಹೊಳಿ ಹೇಳಿಕೆಯಲ್ಲಿ ಸತ್ಯವಿಲ್ಲ

"ಕಾಂಗ್ರೆಸ್ಸಿನ ಇಪ್ಪತ್ತಕ್ಕೂ ಹೆಚ್ಚು ಶಾಸಕರು ಬಿಜೆಪಿಗೆ ಸೇರಲಿದ್ದಾರೆ ಎನ್ನುವ ಜಾರಕಿಹೊಳಿ ಹೇಳಿಕೆಯಲ್ಲಿ ಸತ್ಯವಿಲ್ಲ, ಸುಮ್ಮನೆ ಗಾಳಿಗೆ ಗುಂಡು ಹೊಡೆಯುವ ಕೆಲಸವನ್ನು ಅವರು ಮಾಡಿದ್ದಾರೆ. ಅವರೇ ಬಿಜೆಪಿ ತೊರೆಯಲು ಸಿದ್ದರಾಗುತ್ತಿದ್ದಾರೆ"ಎನ್ನುವ ಹೇಳಿಕೆಯನ್ನು ಈಶ್ವರ ಖಂಡ್ರೆ ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ

ರಮೇಶ್ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ

"ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸುಳ್ಳು ಹೇಳುತ್ತಿದ್ದಾರೆ. ಭಿನ್ನಮತೀಯರು ರಹಸ್ಯ ಸಭೆ ಮತ್ತು ತಮ್ಮ ಪಕ್ಷದೊಳಗಿನ ಒಳಜಗಳವನ್ನು ಮುಚ್ಚಿಕೊಳ್ಳಲು ಈ ರೀತಿ ಹೇಳುತ್ತಿದ್ದಾರೆ" ಎನ್ನುವ ಟ್ವೀಟ್ ಅನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ಮಾಡಿದ್ದರು.

English summary
Dissident Activities Within BJP: KPCC Working President Eshwar Khandre Statement.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X