Get Updates
Get notified of breaking news, exclusive insights, and must-see stories!

A Khata: "ಬೆಂಗಳೂರಲ್ಲಿ ಈ ಮನೆಗಳಿಗೆ ಬಿ ಖಾತೆ ಹೊಂದಿದ್ದರೂ, ಹೊಂದಿರದಿದ್ದರೂ ಎ‌‌ ಖಾತೆ ವಿತರಣೆ"

ಬೆಂಗಳೂರು, ಅಕ್ಟೋಬರ್‌ 18: ಬೆಂಗಳೂರಿನ ಜನತೆಗೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ನೀಡಿದೆ. ಕಂದಾಯ ಭೂಮಿಯಲ್ಲಿ ಕಟ್ಟಿರುವ ಮನೆಗಳಿಗೆ 'ಬಿ' ಖಾತೆ ಹೊಂದಿರುವ ಹಾಗೂ ಹೊಂದಿರದವರು 500 ರೂಪಾಯಿ ಶುಲ್ಕ ಹಾಗೂ ಆಸ್ತಿ ಮೌಲ್ಯದ ಶೇ.5 ರಷ್ಟು ‌ಹಣ ಪಾವತಿ ಮಾಡಿದರೆ 'ಎ‌‌' ಖಾತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಹೇಳಿದರು.

ಕೆ.ಆರ್‌‌ ಪುರಂ ಭಾಗದಲ್ಲಿ ರಸ್ತೆ ಒತ್ತುವರಿ ಪ್ರಕರಣಗಳು ಹೆಚ್ಚಿವೆ. ಒಬ್ಬೊಬ್ಬರು ಐದಾರು ನಿವೇಶಗಳಲ್ಲಿ ಅಕ್ರಮ ನಿರ್ಮಾಣಗಳನ್ನು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅಕ್ರಮವಾಗಿ ಕಟ್ಟುವ ಕಟ್ಟಡಗಳನ್ನು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನೆಲಸಮ‌ ಮಾಡಲಾಗುವುದು. 30×40 ಅಳತೆಯ ಕಟ್ಟಡಗಳಿಗೆ ಓಸಿ ಸಿಸಿ ವಿನಾಯಿತಿ ನೀಡಲಾಗಿದೆ. ಇದು ತಾತ್ಕಾಲಿಕ ವಿನಾಯಿತಿ. ಹೀಗಾಗಿ ಮುಂದೆ ಎಲ್ಲರೂ ಕಟ್ಟಡ ನಕ್ಷೆ ಅನುಮೋದನೆ ಪಡೆದುಕೊಳ್ಳಿ. ಕಡಿಮೆ ವಿಸ್ತೀರ್ಣದ ನಿವೇಶನದಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಮಹಡಿಗಳನ್ನು ನಿರ್ಮಾಣ‌ ಮಾಡುವುದು, ಸೆಟ್ ಬ್ಯಾಕ್ ಬಿಡದೆ ಒತ್ತೊತ್ತಾಗಿ ಮನೆ ಕಟ್ಟುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

Distribution Of A Khata For Houses On Government Land In Bengaluru Says DK Shivakumar

ಆಸ್ಪತ್ರೆ, ಅಕ್ರಮ ಭೂ ಒತ್ತುವರಿ, ಸಂತೆಯ ಸ್ಥಳಾಂತರ, ಸಂಚಾರ ದಟ್ಟಣೆ ನಿವಾರಣೆಗೆ ಮೇಲ್ಸೇತುವೆ, ಪಾದಚಾರಿ ಮೇಲ್ಸೇತುವೆ, ಸಿಸಿಟಿವಿ ಅಳವಡಿಕೆ ವಿಚಾರವಾಗಿ ಸಾರ್ವಜನಿಕರು ಬೇಡಿಕೆ ಇಟ್ಟಿದ್ದಾರೆ. ಈ ಎಲ್ಲಾ ವಿಚಾರಗಳಿಗೂ ನಾವು ಶೀಘ್ರ‌ ಸ್ಪಂದಿಸಲಿದ್ದೇವೆ. ಪಾದಚಾರಿ ಮಾರ್ಗ ಒತ್ತುವರಿ ತಪ್ಪಿಸಲು ರಸ್ತೆ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ನೀಡಲಾಗಿದೆ. ಶೇ.10-30 ರಷ್ಟು ‌ಹಣ ಪಾವತಿಸಿದರೆ ವಾಹನ‌ ನೀಡುವ ವ್ಯವಸ್ಥೆ ಪಾಲಿಕೆಯಲ್ಲಿದೆ.‌ ನಗರದಲ್ಲಿ ಸುಮಾರು 30 ಸಾವಿರ ರಸ್ತೆ ವ್ಯಾಪಾರಿಗಳಿದ್ದಾರೆ. ಎಲ್ಲೆಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ನಾಗರಿಕರೊಬ್ಬರು ಮನವಿ ನೀಡಿದ್ದಾರೆ.‌‌ ಇವೆಲ್ಲದಕ್ಕೂ ಪ್ರಮುಖ ಆದ್ಯತೆ ನೀಡಿ ಆದಷ್ಟು ‌ಬೇಗ ಬಗೆಹರಿಸಲಾಗುವುದು ಎಂದು ತಿಳಿಸಿದರು. ‌
ನಾನು ಈ ಹಿಂದೆ ನಗರಾಭಿವೃದ್ಧಿ ಸಚಿನನಾದ ಕಾಲದಿಂದಲೂ ಈ ಸಂತೆಯನ್ನು ನೋಡಿದ್ದೇನೆ. ಇದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ.‌ ಜನಸಂಖ್ಯೆ ‌ಹೆಚ್ಚಳವಾದ ಕಾರಣಕ್ಕೆ ಈಗ ತೊಂದರೆಯಾಗುತ್ತಿದೆ. ಸಂತೆ ನಡೆಯುವ ಜಾಗವನ್ನು ನಾನು ಪರಿಶೀಲನೆ ಮಾಡುತ್ತೇನೆ ಹಾಗೂ ಅದನ್ನು ಎಲ್ಲಿಗೆ ಸ್ಥಳಾಂತರ ಮಾಡಬಹುದು ಎಂಬುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಭರವಸೆ ನೀಡಿದರು.

ಉದ್ಯಾನ ನಡಿಗೆ ವೇಳೆ ಸಾರ್ವಜನಿಕರಿಂದ ಬಂದ ಅಹವಾಲು, ದೂರನ್ನು ಶೀಘ್ರ ಬಗೆಹರಿಸುತ್ತೇವೆ. ಪಕ್ಷದ ಕಾರ್ಯಕರ್ತರ ಉತ್ಸಾಹದಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದರೆ‌‌ ನಾನು ಕ್ಷಮೆ ಕೇಳುತ್ತೇನೆ. ಕಾರ್ಯಕರ್ತರನ್ನು ನಾನು ಬೇರೆ ಸಂದರ್ಭದಲ್ಲಿ ‌ಭೇಟಿ ಮಾಡುತ್ತೇನೆ. ಈ ಕಾರ್ಯಕ್ರಮದಲ್ಲಿ ಜನರಿಗೆ ಹೆಚ್ಚು ಅವಕಾಶ ಸಿಗಬೇಕು. ಇಂದು ನನ್ನ ಬಳಿ ತಮ್ಮ ಅಹವಾಲು ಹೇಳಿಕೊಳ್ಳಲು ಯಾರಿಗೆ ಸಾಧ್ಯವಾಗಿಲ್ಲವೋ ಅವರು, 1533 ಸಹಾಯವಾಣಿಗೆ ಸಂಪರ್ಕಿಸಿ, ನಿಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ತಿಳಿಸಿದರು.

ಇಲ್ಲಿ ಜನರು ಹೇಳಿಕೊಂಡ ಅಹವಾಲುಗಳನ್ನು ಮಾಧ್ಯಮಗಳು ದಾಖಲಿಸಿಕೊಂಡಿವೆ. ಯಾರೆಲ್ಲಾ ನನ್ನೊಂದಿಗೆ ಸಮಸ್ಯೆ ಹೇಳಿಕೊಂಡಿದ್ದಾರೋ ಅವರ ಅಹವಾಲು ಹಾಗೂ ದೂರವಾಣಿ ಸಂಖ್ಯೆ ದಾಖಲಿಸಿಕೊಂಡಿದ್ದಾರೆ. ನಮ್ಮ ಅಧಿಕಾರಿಗಳು ಈ ಸಮಸ್ಯೆಗಳನ್ನು ಬಗೆಹರಿಸಿ ಅವರಿಗೆ ಮತ್ತೆ ಕರೆ ಮಾಡುತ್ತೇವೆ. ಈ ಸಮಸ್ಯೆಗಳನ್ನು ಹೇಗೆ ಬಗೆಹರಿಸಿದ್ದೇವೆ ಎಂಬ ವಿಚಾರವನ್ನು ನಾವು ತಿಳಿಸುತ್ತೇವೆ. ಕಾನೂನು ಪ್ರಕಾರವಾಗಿರುವುದನ್ನು ನಾವು ಪರಿಹಾರ ನೀಡಿ, ಅಗತ್ಯ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ನೀಡಲಾಗಿದ್ದು, ಮೇಲ್ಸೇತುವೆ, ಮೆಟ್ರೋ ಸೌಕರ್ಯ ಕಲ್ಪಿಸಲಾಗಿದ್ದು, ಟನಲ್ ರಸ್ತೆಯನ್ನು ಈ ಭಾಗಕ್ಕೆ ಕಲ್ಪಿಸಲಾಗುವುದು. ಈ ಭಾಗದ ಜನರೊಂದಿಗೆ ಹೆಜ್ಜೆ ಹಾಕಿ, ನೂರಾರು ನಿವಾಸಿಗಳ ಜೊತೆ ಚರ್ಚೆ ಮಾಡಿದ್ದೇನೆ. ನಾನು ನೂರಕ್ಕೆ ನೂರರಷ್ಟು ಸರಿಯಲ್ಲದಿರಬಹುದು. ಆದರೆ, ನಾನು ನನ್ನ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಈ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಈ ಭಾಗದ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಹಿರಿಯ ನಾಯಕರು, ಮಾಜಿ ಕಾರ್ಪೊರೇಟರ್ ಗಳು, ನಿವಾಸಿ ಸಂಘಟನೆಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಅವರ ಸಲಹೆಗಳನ್ನು ಸರ್ಕಾರ ಹಾಗೂ ಜಿಬಿಎ ಪರಿಹಾರ ನೀಡಲು ಬದ್ಧವಾಗಿದೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+