ಸಮವಸ್ತ, ಶೂ; ಸರ್ಕಾರಕ್ಕೆ ತರಾಟೆ, ಅಧಿಕಾರಿಗಳಿಗೆ ಜೈಲಿನ ಎಚ್ಚರಿಕೆ

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ, ಶೂ ಮತ್ತು ಕಾಲು ಚೀಲ ವಿತರಣೆ ಮಾಡದ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು, ಫೆಬ್ರವರಿ 15; ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಸಮವಸ್ತ್ರ, ಶೂ ಮತ್ತು ಕಾಲು ಚೀಲ ವಿತರಿಸಿರುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ಮಾಹಿತಿ ನೀಡದ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ಮತ್ತೆ ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಸರಿ ಹೋಗುತ್ತದೆ, ಆಗ ಸಮವಸ್ತ್ರ, ಶೂ ಹೇಗೆ ಬರುತ್ತದೆ? ಎಂಬುದು ತಿಳಿದಿದೆ ಎಂದು ನ್ಯಾಯಪೀಠ ಹೇಳಿದೆ.

ಕೊಪ್ಪಳ ಜಿಲ್ಲೆಯ ಮಾಸ್ಟರ್ ಮಂಜುನಾಥ್ ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ನೀಡಬೇಕು ಎಂದು 2019ರ ಆ.28ರ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ಅವರ ನೇತೃತ್ವದ ವಿಭಾಗೀಯ ಪೀಠ ಸರ್ಕಾರ ಮತ್ತು ಅಧಿಕಾರಿಗಳ ಕಾರ್ಯವೈಖರಿಯನ್ನು ಖಂಡಿಸಿತು.

ನ್ಯಾಯಮೂರ್ತಿ ಬಿ. ವೀರಪ್ಪ ಅವರು, ಅಧಿಕಾರಿಯನ್ನು ಜೈಲಿಗೆ ಕಳಿಸುತ್ತೇವೆ. ಆಗ ಮಕ್ಕಳಿಗೆ ಸಮವಸ್ತ್ರ ಹೇಗೆ ಬರುವುದಿಲ್ಲ ಎನ್ನುವುದು ನೋಡುತ್ತೇವೆ. ಸರ್ಕಾರದ ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ನಮ್ಮನ್ನು ಕಾಪಾಡಲು ನ್ಯಾಯಾಲಯವಿದೆ ಎಂಬುದು ಜನರಿಗೆ ಗೊತ್ತಾಗುತ್ತದೆ. ಮಾನ ಮಾರ್ಯದೆ ಇಲ್ಲದಿದ್ದರೆ ಅಧಿಕಾರಿಗಳು ಆರು ತಿಂಗಳು ಜೈಲಿಗೆ ಹೋಗಿಬರುತ್ತಾರೆ. ಆಗ ಏನೂ ಮಾಡುವುದಕ್ಕೆ ಆಗಲ್ಲ. ಕೋರ್ಟ್‌ಗೂ ಸಹ ಎಲ್ಲೋ ಒಂದು ಕಡೆ ಸರ್ಕಾರದ ಮೇಲೆ ನಂಬಿಕೆ ಹೊರಟು ಹೋಗಿದೆ ಎಂದರು.

Distribution Of Uniform Shoe To Govt School Students HC Upset With Govt Warned Officials

ಅಲ್ಲದೆ, ರಾಜ್ಯದ ಎಲ್ಲಾ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು (ಡಿಡಿಪಿಐ), ಸಮವಸ್ತ್ರ ಖರೀದಿಸಲು ರಾಜ್ಯ ಸರ್ಕಾರ ಎಷ್ಟು ಹಣ ಬಿಡುಗಡೆ ಮಾಡಿದೆ. ಅದರಲ್ಲಿ ಎಷ್ಟು ಹಣ ಸದ್ಭಳಕೆಯಾಗಿದೆ ಎಂಬ ಬಗ್ಗೆ ವೈಯಕ್ತಿಕವಾಗಿ ಪರಿಶೀಲನೆ ನಡೆಸಬೇಕು.

ಹಾಗೆಯೇ, 2019-20ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಎರಡು ಜೊತೆ ಸವವಸ್ತ್ರ ಮತ್ತು ಶೂ, ಕಾಲು ಚೀಲ ವಿತರಣೆ ಮಾಡುವ ಮೂಲಕ ಸರ್ಕಾರವು ಹೈಕೋರ್ಟ್‌ ತೀರ್ಪು ಪಾಲಿಸಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಾತರಿಪಡಿಸಿ ಎರಡು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಸರ್ಕಾರದ ಪ್ರಮಾಣ ಪತ್ರವು ನ್ಯಾಯಾಲಯಕ್ಕೆ ತೃಪ್ತಿ ತಂದಿಲ್ಲ. ರಾಜ್ಯದ ಎಲ್ಲಾ 35 ಜಿಲ್ಲೆಗಳಲ್ಲಿ ಸಮವಸ್ತ್ರ ವಿತರಣೆಗೆ ಹಣ ಸರ್ಕಾರ ಬಿಡುಗಡೆ ಮಾಡಿದೆಯೇ?. ಅದರಲ್ಲಿ ಎಷ್ಟು ಬಳಕೆಯಾಗಿದೆ ಎಂಬ ಬಗ್ಗೆ ಡಿಡಿಪಿಐಗಳು ದಾಖಲೆಗಳನ್ನು ಪಡೆದು ಪರಿಶೀಲಿಸಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠ, ಅದನ್ನು ಕಾನೂನು ಸೇವಾ ಪ್ರಾಧಿಕಾರದ ಮೂಲಕ ನ್ಯಾಯಾಲಯ ಮರು ಪರಿಶೀಲನೆ ನಡೆಸಲಿದೆ ಎಂದು ಹೇಳಿತು.

ದಾಖಲೆಗಳಿಲ್ಲ: ಇದಕ್ಕೂ ಮುನ್ನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ನಿರ್ದೇಶಕರು ಸಲ್ಲಿಸಿರುವ ಪ್ರಮಾಣ ಪತ್ರ ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ಒದಗಿಸಿದರು. ಸಮವಸ್ತ್ರ ಖರೀದಿಸಲು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. 2019-20, 2020-21, 2021-22, 2022-23ನೇ ಶೈಕ್ಷಣಿಕ ಸಾಲಿನಲ್ಲಿ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳ ಸರ್ಕಾರಿ ಶಾಲೆಗಳ ಮಕ್ಕಳಿಗೆ ಶೂ ಮತ್ತು ಕಾಲುಚೀಲ ನೀಡಲಾಗಿದೆ ಎಂದು ತಿಳಿಸಿದ್ದರು.

ಆ ಪ್ರಮಾಣ ಪತ್ರ ಪರಿಶೀಲಿಸಿದ ನ್ಯಾಯಪೀಠ, ಸಮವಸ್ತ್ರ, ಶೂ ಮತ್ತು ಕಾಲುಚೀಲ ನೀಡಿರುವುದನ್ನು ಪುಷ್ಠೀಕರಿಸುವ ದಾಖಲೆ ಒದಗಿಸಿಲ್ಲ. ವಿದ್ಯಾರ್ಥಿಗಳಿಗೆ ಸಮವಸ್ತ್ರ ತಲುಪಿರುವುದು ದೇವರಿಗೆ ಮಾತ್ರ ಗೊತ್ತಾಗಬೇಕು. ಸರ್ಕಾರವು ಕೋರ್ಟ್ ಆದೇಶ ಪಾಲಿಸಿಲ್ಲ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸಬೇಕೆಂಬ ಮನೋಭಾವ ಸರ್ಕಾರಕ್ಕೆ ಇದ್ದರೆ, ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ನ್ಯಾಯಾಂಗ ನಿಂದನೆ ಆರೋಪದಿಂದ ತಪ್ಪಿಕೊಳ್ಳಬೇಕೆಂದು ಕೋರ್ಟ್‌ಗೆ ಸುಮ್ಮನೆ ಪ್ರಮಾಣಪತ್ರ ಸಲ್ಲಿಸಿದರೆ ಸಾಲದು ಎಂದು ಕಿಡಿಕಾರಿತಲ್ಲದೆ, ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ನ್ಯಾಯಾಂಗ ನಿಂದನೆ ಆರೋಪ ಹೊರಿಸಲಾಗುವುದು ಎಂದು ತಿಳಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+