ಫೆ.12ಕ್ಕೆ ದೇವೇಗೌಡರ ಪ್ರತಿಮೆ ಅನಾವರಣ
ಬಿಜಾಪುರ, ಫೆ.7 : ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪ್ರತಿಮೆಯನ್ನು ಸಿಂದಗಿ ತಾಲೂನಿನ ಗೋಲಗೇರಿ ಬಳಿ ನಿರ್ಮಿಸಲಾಗಿದ್ದು, ಫೆ. 12ರಂದು ಪ್ರತಿಮೆಯನ್ನು ಅನಾವರಣಗೊಳಿಸಗುತ್ತದೆ.
ಈ ಕುರಿತು ಮಾಹಿತಿ ನೀಡಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಸಿ.ಮನಗೂಳಿ, ಸಿಂದಗಿ ತಾಲೂಕಿನ ಗೋಲಗೇರಿ ಬಳಿ ಫೆ.12ರಂದು ನಡೆಯುವ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಚ್.ಡಿ.ದೇವೆಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದರು ಹೇಳಿದರು.
ಗುತ್ತಿ ಬಸವಣ್ಣ ಏತ ನೀರಾವರಿ ರೈತ ಹಿತರಕ್ಷಣಾ ಸಮಿತಿ ಹಾಗೂ ಗೋಲಗೇರಿ ಸುತ್ತಮುತ್ತಲಿನ ಗ್ರಾಮಸ್ಥರು 12.60 ಲಕ್ಷ ರೂ. ವೆಚ್ಚದಲ್ಲಿ ದೇವೇಗೌಡರ ಈ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಸಿಂದಗಿ ಮತ್ತು ಇಂಡಿ ತಾಲೂಕಿನ ರೈತರು ಸ್ವಯಂ ಪ್ರೇರಣೆಯಿಂದ ವಂತಿಗೆ ಹಣ ಸಂಗ್ರಹಿಸಿ ಮೂರ್ತಿ ಪ್ರತಿಷ್ಠಾಪಿಸಿ, ಅದನ್ನು ಅನಾವರಣಗೊಳಿಸಲು ನಿರ್ಧರಿಸಿದ್ದಾರೆ ಎಂದರು.
ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡಿ ಸದಾ ಬರಗಾಲಕ್ಕೆ ತುತ್ತಾಗುತ್ತಿದ್ದ ಇಂಡಿ-ಸಿಂದಗಿ ತಾಲೂಕುಗಳ ನೀರಾವರಿ ಸಮಸ್ಯೆ ಬಗೆಹರಿಸಿದ್ದಕ್ಕಾಗಿ ದೇವೇಗೌಡರ ಪ್ರತಿಮೆ ನಿರ್ಮಸಲಾಗಿದೆ ಎಂದು ಅವರು ತಿಳಿಸಿದರು. ಎಚ್.ಡಿ.ಕುಮಾರಸ್ವಾಮಿ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ ಎಂದು ಮನಗೂಳಿ ತಿಳಿಸಿದರು. [ಕರ್ನಾಟಕದ ಇತರ ಜಿಲ್ಲಾಸುದ್ದಿಗಳು]

ಫೆ.12ಕ್ಕೆ ಗೌಡರ ಪ್ರತಿಮೆ ಅನಾವರಣ
ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಗೆ ಮಂಜೂರಾತಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪ್ರತಿಮೆಯನ್ನು ಸಿಂದಗಿ ತಾಲೂನಿನ ಗೋಲಗೇರಿ ಬಳಿ ನಿರ್ಮಿಸಲಾಗಿದ್ದು, ಫೆ. 12ರಂದು ಪ್ರತಿಮೆಯನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅನಾವರಣಗೊಳಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಸಿ.ಮನಗೂಳಿ, ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಚ್.ಡಿ.ದೇವೆಗೌಡ ಸಹ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಮನೆ ಮನೆಗೆ ಆಮ್ ಆದ್ಮಿ ಅಭಿಯಾನಕ್ಕೆ ಚಾಲನೆ
ಫೆ.9ರ ಭಾನುವಾರದಂದು ಬೆಳಗ್ಗೆ 10:30 ಆಮ್ ಆದ್ಮಿ ಪಕ್ಷ ರಾಯಚೂರಿನ ಸ್ಟೇಷನ್ ರಸ್ತೆಯಲ್ಲಿರುವ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದ ಎದುರು 'ಮನೆ ಮನೆಗೆ ಆಮ್ ಆದ್ಮಿ, ಮನೆ ಮನೆಯಲ್ಲಿ ಆಮ್ ಆದ್ಮಿ' ಎಂಬ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಿದೆ. ಈ ಸಂದರ್ಭದಲ್ಲಿ ಎಸ್.ಆರ್.ಹಿರೇಮಠ್, ರಾಘವೇಂದ್ರ ಕುಷ್ಟಗಿ ಮತ್ತಿತರ ಸಾಮಾಜಿಕ ಕಾರ್ಯಕರ್ತರು, ಆಮ್ ಆದ್ಮಿ ಪಕ್ಷದ ಸ್ಥಳೀಯ ಮತ್ತು ರಾಜ್ಯದ ಮುಖಂಡರು ಉಪಸ್ಥಿತರಿರುವರು.

ಜನಸಂಗ್ರಾಮ ಪರಿಷತ್ ಗೆ ಬೆಂಬಲ
ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ನೇತೃತ್ವದ ಜನಸಂಗ್ರಾಮ ಪರಿಷತ್ ಫೆ.8ರ ಶನಿವಾರ ಮತ್ತು ಫೆ.9ರ ಭಾನುವಾರದಂದು ರಾಯಚೂರಿನಲ್ಲಿ ಪ್ರಥಮ ರಾಜ್ಯ ಮಟ್ಟದ ಸಮ್ಮೇಳನ ಮತ್ತು ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ. ಈ ಸಮ್ಮೇಳನಕ್ಕೆ ಆಮ್ ಆದ್ಮಿ ಪಾರ್ಟಿ ರಾಜ್ಯಘಟಕವು ತನ್ನ ಸಂಪೂರ್ಣ ಬೆಂಬಲವನ್ನು ಘೋಷಿಸಿದೆ. ಹೈದರಾಬಾದ್-ಕರ್ನಾಟಕ ಪ್ರಾಂತ್ಯದ ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರು ಈ ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಪಕ್ಷದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ದೆಹಲಿಯಲ್ಲಿ ಲಿಂಗಾಯತ ಧರಣಿ
ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಘೋಷಿಸಿ ಸಾಂವಿಧಾನಿಕ ಮಾನ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲು ಲಿಂಗಾಯತ ಧರ್ಮ ಮಹಾಸಭಾ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಫೆ.17-18 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಧರಣಿ ಹಮ್ಮಿಕೊಂಡಿದೆ ಎಂದು ಮಹಾಸಭಾದ ಅಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ. ಕರ್ನಾಟಕ ಮಹಾರಾಷ್ಟ್ರ, ಆಂಧ್ರ ಮತ್ತು ತಮಿಳುನಾಡಿನ 3 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ರೈಲು ನಿಲುಗಡೆಗಾಗಿ ಮನವಿ
ದೊಡ್ಡಬಳ್ಳಾಪುರ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಕೊಡಬೇಕು ಎಂಬ ಒತ್ತಾಯಿಸಿ, ನೈರುತ್ಯ ರೈಲ್ವೇ ವಲಯ ವ್ಯವಸ್ಥಾಪಕ ಪಿ.ಕೆ. ಸಕ್ಸೇನಾ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ. ರೈಲು ನಿಲ್ದಾಣದಲ್ಲಿ ಸದ್ಯ ಕಾಚಿಗುಡ ಎಕ್ಸ್‌ಪ್ರೆಸ್, ಉದ್ಯಾನ್ ಎಕ್ಸ್‌ಪ್ರೆಸ್, ನಾಂದೇಡ್ ಎಕ್ಸ್‌ಪ್ರೆಸ್ ಸೇರಿದಂತೆ ಕೆಲವೇ ರೈಲುಗಳಿಗೆ ನಿಲುಗಡೆ ಇದೆ. ಹೆಚ್ಚಿನ ಜನರಿಗೆ ಅನುಕೂಲವಾಗುವಂತೆ, ಬಸವ ಎಕ್ಸ್‌ಪ್ರೆಸ್, ಪ್ರಶಾಂತಿ ಎಕ್ಸ್‌ಪ್ರೆಸ್, ಕರ್ನಾಟಕ ಎಕ್ಸ್‌ಪ್ರೆಸ್, ಕುರ್ಲಾ ಎಕ್ಸ್‌ಪ್ರೆಸ್ ಸೇರಿದಂತೆ ಉಳಿದ ರೈಲುಗಳ ನಿಲುಗಡೆಯನ್ನು ಆರಂಭಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ಗ್ರಾಮಗಳ ಪಟ್ಟಿ ಮಾಡಲು ಸೂಚನೆ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿ ಸಿದ್ಧಪಡಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಪಂಚಾಯತ್‌ರಾಜ್ ಎಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಜಿಲ್ಲಾಧಿಕಾರಿ ಬಿ.ಎಸ್. ಶೇಖರಪ್ಪ ಸೂಚಿಸಿದ್ದಾರೆ. ಕಡೂರು ತಾಲೂಕು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿದೆ. ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಪೋರ್ಸ್ ಸಮಿತಿಯ ಸಭೆಯಲ್ಲಿ 363.80 ಲಕ್ಷ ಕ್ರಿಯಾಯೋಜನೆ ಸಿದ್ಧಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದು, ಸದ್ಯದಲ್ಲೇ ಅದನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಬ್ಯಾರೇಜ್ ನಿರ್ಮಾಣ ಮಾಡಲು ಅನುಮತಿ
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಿವಿಧ ಗ್ರಾಮಗಳ ಹಳ್ಳಕ್ಕೆ ಅಡ್ಡಲಾಗಿ ಬ್ರೀಜ್ ಕಮ್ ಬ್ಯಾರೇಜ್ ನಿರ್ಮಾಣ ಮಾಡಲು ಸರ್ಕಾರ ಅನುಮತಿ ನೀಡಿದೆ ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದ್ದಾರೆ. 38 ಕೋಟಿ ರೂ. ವೆಚ್ಚದ ಕಾಮಗಾರಿಗೆ ಜಲಸಂಪನ್ಮೂಲ ಇಲಾಖೆ ಹಸಿರು ನಿಶಾನೆ ತೋರಿದ್ದು, ಕಾಮಗಾರಿಗಳಿಗೆ ಟೆಂಡರ್ ಸಹ ಕರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.












Click it and Unblock the Notifications