28 ಕ್ಷೇತ್ರಗಳಲ್ಲೂ ಬಿಎಸ್ಪಿ ಸ್ಪರ್ಧೆ ಇತರ ಜಿಲ್ಲಾ ಸುದ್ದಿ
ಮೈಸೂರು, ಜ.7 : ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವು ರಾಜ್ಯದ 28 ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೇ ಸ್ವತಂತ್ರವಾಗಿ ಚುನಾವಣೆ ಎದುರಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದ್ದಾರೆ.
ಲೋಕಸಭೆ ಚುನಾವಣೆಗೆ ಪಕ್ಷ ಸಕಲ ರೀತಿಯಲ್ಲಿ ತಯಾರಿ ನಡೆಸಿದ್ದು, ಜೆಡಿಎಸ್, ಜೆಡಿಯು ಮತ್ತು ಬಿಎಸ್ಪಿ ಹೊಂದಾಣಿಕೆ ಮಾಡಿಕೊಳ್ಳುತ್ತವೆ ಎಂಬುದು ಸುಳ್ಳು. ಎಲ್ಲಾ 28 ಲೋಕಸಭಾ ಕ್ಷೇತ್ರದಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ, ಕನಿಷ್ಠ ನಾಲ್ಕು ಕ್ಷೇತ್ರದಲ್ಲಿ ಜಯಗಳಿಸುತ್ತೇವೆ ಎಂದು ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಜ.15 ರಂದು ಲಕ್ನೋದಲ್ಲಿ ಪಕ್ಷದ ಬೃಹತ್ ಸಮಾವೇಶ ನಡೆಯಲಿದೆ. ಇದೆ ವೇಳೆ ಮಾಯಾವತಿ ಅವರು ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಲು ಕರ್ನಾಟಕದಿಂದ ಒಂದು ಸಾವಿರ ಜನರು ತೆರಳಲಿದ್ದಾರೆ ಎಂದು ಅವರು ಹೇಳಿದರು. ಕರ್ನಾಟಕದ ಜಿಲ್ಲಾ ಸುದ್ದಿಗಳು

28 ಕ್ಷೇತ್ರಗಳಲ್ಲಿಯೂ ಸ್ಪರ್ಧೆ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿಯೂ ಬಹುಜನ ಸಮಾಜ ಪಕ್ಷವು ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದ್ದಾರೆ. ಜೆಡಿಎಸ್, ಜೆಡಿಯು ಮತ್ತು ಬಿಎಸ್ಪಿ ಹೊಂದಾಣಿಕೆ ಮಾಡಿಕೊಳ್ಳುತ್ತದೆ ಎಂಬ ಮಾತು ಸುಳ್ಳು. ಜ.15 ರಂದು ಲಕ್ನೋದಲ್ಲಿ ನಡೆಯುವ ಸಮಾವೇಶದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಉಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಿಬ್ಬಂದಿಗಳ ವರ್ಗಾವಣೆ
ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿರುವ ಬಿಜಾಪುರ ವಿಭಾಗವು ದೊಡ್ಡದಾಗಿದ್ದು, ಸುಮಾರು 200 ಚಾಲನಾ ಸಿಬ್ಬಂದಿ ಹುದ್ದೆಗಳು ಖಾಲಿಯಿವೆ. ಈ ಹುದ್ದೆಗಳಿಗೆ ಸಂಸ್ಥೆಯ ಇತರೆ ವಿಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಚಾಲನಾ ಸಿಬ್ಬಂದಿಯನ್ನು ವಿಜಾಪುರ ವಿಭಾಗಕ್ಕೆ ವರ್ಗಾವಣೆ ಮಾಡಲಾಗುವುದು ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ.ಎನ್. ಶಿವಮೂರ್ತಿ ಹೇಳಿದ್ದಾರೆ. ಆಡಳಿತಾತ್ಮಕ ಕಾರಣಗಳಿಂದ ವಿಜಾಪುರ ವಿಭಾಗಕ್ಕೆ ಯಾವುದೇ ಚಾಲನಾ ಸಿಬ್ಬಂದಿ ವರ್ಗಾವಣೆ ಮಾಡಿರುವುದಿಲ್ಲ. ಆದ್ದರಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಬಿ.ಎಡ್.ಪ್ರವೇಶ ಪ್ರಕ್ರಿಯೆ ಆರಂಭ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿ.ಎಡ್. ಪ್ರವೇಶ ಪ್ರಕ್ರಿಯೆ ಜ.4. ರಿಂದ ಆರಂಭವಾಗಿದ್ದು, ಜ. 1೦.ಪ್ರವೇಶ ಪಡೆಯಲು ಕೊನೆಯ ದಿನವಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ http://www.schooleducation.kar.nic.in , http://www.schooleducation.kar.nic.in ವೆಬ್ ಸೈಟ್ ನಲ್ಲಿ ಲಭ್ಯವಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಆಯ್ಕೆಯಾಗಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ, ಟೌನ್‌ಹಾಲ್ ಬಳಿ, ಮಂಗಳೂರು ಇಲ್ಲಿ ಪರಿಶೀಲನೆಗೆ ಹಾಜರಾಗಿ ನಿಗದಿತ ಶುಲ್ಕ ಪಾವತಿಸಿ ದಾಖಲಾತಿ ಮಾಡಿಕೊಳ್ಳಬಹುದು.

ವಿವರಣೆ ಕೇಳಿದ ಪ್ರಣಬ್ ಮುಖರ್ಜಿ
ತಮ್ಮ ಫೇಸ್ ಬುಕ್ ನಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಿ ಚಿತ್ರಗಳನ್ನು ಪೋಸ್ಟ್ ಮಾಡಿದ ಬೀದರ್ ಜಿಲ್ಲಾಧಿಕಾರಿ ಡಿಸಿ ಡಾ.ಪಿ.ಸಿ.ಜಾಫರ್ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ಬೀದರ್ ಭಜರಂಗದಳದ ಜಿಲ್ಲಾಧ್ಯಕ್ಷರು ಹೇಳಿದ್ದಾರೆ. ಜಿಲ್ಲಾ ಭಜರಂಗದಳ ಹಿಂದೂ ದೇವತೆಗಳಾದ ಶ್ರೀರಾಮು-ಸೀತಾ, ಹನುಮತರಿಗೆ ಅವಮಾನಿಸಿರುವ ಜಿಲ್ಲಾಧಿಕಾರಿಗಳಿಗೆ ದೂರು ನೀಡಿತ್ತು. ಈ ದೂರಿನ ಅನ್ವಯ ರಾಷ್ಟ್ರಪತಿಗಳು ವಿವರಣೆ ಕೇಳಿದ್ದಾರೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಪರಿಹಾರಕ್ಕೆ ಪ್ರಸ್ತಾವನೆ
ದ.ಕನ್ನಡ ಜಿಲ್ಲೆಯಲ್ಲಿ ಅಡಿಕೆಗೆ ತಗುಲಿದ ಕೊಳೆ ರೋಗದಿಂದ ನಷ್ಟ ಅನುಭವಿಸಿದ ರೈತರಿಗೆ ಒಟ್ಟು 20 ಕೋಟಿ ರೂ. ಪರಿಹಾರ ವಿತರಿಸಲಾಗಿದ್ದು ಹೆಚ್ಚುವರಿಯಾಗಿ ಇನ್ನೂ 10.41 ಕೋಟಿ ರೂ. ಅನುದಾನಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭರತ್‌ಲಾಲ್ ಮೀನಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಲಾಗಿದೆ. ಜಿಲ್ಲೆಯಲ್ಲಿ ಕೊಳೆ ರೋಗದಿಂದ ಒಟ್ಟು 28555 .6 ಹೆ. ಪ್ರದೇಶದ ಅಡಿಕೆ ಬೆಳೆ ಬಾಧಿತವಾಗಿದ್ದು 310.56 ಕೋ.ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಜ.11ರಿಂದ ಶರಣ ಮೇಳ
ಬಾಗಲಕೋಟೆ ಜಿಲ್ಲೆಯ ಕೂಡಲ ಸಂಗಮದಲ್ಲಿ ಜ.11ರಿಂದ 15ರವರೆಗೆ 27ನೇ ಶರಣ ಮೇಳ ನಡೆಯಲಿದೆ. ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಗೋವಾ ಸೇರಿದಂತೆ ವಿವಿಧ ರಾಜ್ಯಗಳಿಂದ ಸುಮಾರು 3 ಲಕ್ಷ ಮಂದಿ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. 11ರಂದು ಮಹಿಳಾ ಗೋಷ್ಠಿ, 12ರಂದು ರಾಷ್ಟ್ರೀಯ ಬಸವ ದಳ ಅಧಿವೇಶನ, 13ರಂದು ಶರಣಮೇಳ ನಡೆಯಲಿದ್ದು 15ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಶರಣ ಮೇಳ ಉತ್ಸವ ಸಮಿತಿ ತಿಳಿಸಿದೆ.












Click it and Unblock the Notifications