ರಾಮದೇವ್ ಹೇಳಿಕೆ ಖಂಡಿಸಿ ಹುಬ್ಬಳ್ಳಿ, ಚಿಕ್ಕೋಡಿ ಬಂದ್
ಹುಬ್ಬಳ್ಳಿ, ಮೇ .5: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಯೋಗಗರು ಬಾಬಾ ರಾಮದೇವ್ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳು ಹುಬ್ಬಳ್ಳಿ, ಚಿಕ್ಕೋಡಿ ಬಂದ್ ಗೆ ಕರೆ ನೀಡಿವೆ. ಬಂದ್ ಗೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹುಬ್ಬಳ್ಳಿಯಲ್ಲಿ ಬಸ್ ಸಂಚಾರದಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗಿದೆ. ಪೊಲೀಸರು ಮುನ್ನೆಚ್ಚರಿಗೆ ಕ್ರಮವಾಗಿ ಅಗತ್ಯ ಬಂದೋಬಸ್ತ್ ಕೈಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸೋಮವಾರ ಮುಂಜಾನೆಯಯಿಂದಲೇ ಬಸವೇಶ್ವರ ವೃತ್ತದಲ್ಲಿ ಸಂಘಟನೆಯ ಕಾರ್ಯಕರ್ತರು ಟೈಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು. ಹಳೆ ಹುಬ್ಬಳ್ಳಿ ಬಸ್ ನಿಲ್ದಾಣಗಳಲ್ಲಿ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಾಪಸ್ ಕಳಿಸಿದರು.
ಚಿಕ್ಕೋಡಿಯಲ್ಲೂ ಮಿಶ್ರ ಪ್ರತಿಕ್ರಿಯೆ : ಚಿಕ್ಕೋಡಿ ಪಟ್ಟಣದಲ್ಲಿಯೂ ದಲಿತ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಭೀಮನಗರದಿಂದ ಎಸಿ ಕಛೇರಿವರೆಗೆ ಪಾದಯಾತ್ರೆ ನಡೆಸಿದ ಕಾರ್ಯಕರ್ತರು ರಾಮದೇವ್ ಹೇಳಿಕೆಯನ್ನು ಖಂಡಿಸಿದರು. ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಲಕ್ನೋದಲ್ಲಿ ಬಾಬಾ ರಾಮದೇವ್ ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುವಾಗ "ರಾಹುಲ್ ಗಾಂಧಿ ಹನಿಮೂನ್ ಮಾಡಲು ದಲಿತರ ಮನೆಗಳಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆಂದು" ಹೇಳಿಕೆ ನೀಡಿದ್ದರು. ರಾಮದೇವ್ ಇಂತಹ ಹೇಳಿಕೆ ಮೂಲಕ ದಲಿತರಿಗೆ ಅವಮಾನ ಮಾಡಿದ್ದಾರೆ ಎಂದು ಅವರ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ.

ಹುಬ್ಬಳ್ಳಿ, ಚಿಕ್ಕೋಡಿಯಲ್ಲಿ ರಾಮದೇವ್ ವಿರುದ್ಧ ಪ್ರತಿಭಟನೆ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಯೋಗಗರು ಬಾಬಾ ರಾಮದೇವ್ ಹೇಳಿಕೆ ಖಂಡಿಸಿ ದಲಿತ ಸಂಘಟನೆಗಳು ಹುಬ್ಬಳ್ಳಿ, ಚಿಕ್ಕೋಡಿ ಬಂದ್ ಗೆ ಕರೆ ನೀಡಿವೆ. ಬಂದ್ ಗೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹುಬ್ಬಳ್ಳಿಯಲ್ಲಿ ಬಸ್ ಸಂಚಾರದಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗಿದೆ. ಪೊಲೀಸರು ಮುನ್ನೆಚ್ಚರಿಗೆ ಕ್ರಮವಾಗಿ ಅಗತ್ಯ ಬಂದೋಬಸ್ತ್ ಕೈಗೊಂಡಿದ್ದಾರೆ.

ವಿದ್ಯಾರ್ಥಿಗಳಿಗೆ 31ರಂದು ನೋಟ್ ಬುಕ್ ವಿತರಣೆ
ಉಡುಪಿಯ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಮತ್ತು ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಸಹಯೋಗದಲ್ಲಿ ಪ್ರತಿ ವರ್ಷದಂತೆ ಜಿಲ್ಲೆಯ 5275 ಮಂದಿ ಬಡ ಪ್ರತಿಭಾವಂತ ಮಕ್ಕಳಿಗೆ ನೋಟ್ ಪುಸ್ತಕ ವಿತರಣಾ ಸಮಾರಂಭವನ್ನು 31ರಂದು ಹಮ್ಮಿಕೊಳ್ಳಲಾಗಿದೆ. 2014 - 15ನೇ ಸಾಲಿನ 5ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಶೇ.75 ಅಂಕ ಗಳಿಸಿರುವ ಓಬಿಸಿ ವರ್ಗದ ಮತ್ತು ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಪುಸ್ತಕ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಮೇ 10ರಂದು ಬೆಳಗ್ಗೆ 9.30ರಿಂದ ಸಂಜೆ 5 ಗಂಟೆಯೊಳಗೆ ಉಡುಪಿಯ ಶ್ಯಾಮಿಲಿ ಸಭಾಂಗಣ ಅಥವಾ ಕುಂದಾಪುರದ ಗೋಕುಲ್ ಕಾಂಪ್ಲೆಕ್ಸ್‌ನಲ್ಲಿರುವ ಯುವ ಸಂಘಟನೆಯ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಲಾಗಿದೆ.

ಆಲಮಟ್ಟಿ ಸಂತ್ರಸ್ತರಿಗೆ ಮನೆ ಭಾಗ್ಯ
ಬಾಗಲಕೋಟೆ ಜಿಲ್ಲೆಯ ಆಲಮಟ್ಟಿ ಜಲಾಶಯದ ಎತ್ತರವನ್ನು ಈಗಿರುವ 519.60 ಮೀಟರ್ ನಿಂದ 524.256 ಮೀಟರ್ ಗೆ ಹೆಚ್ಚಿಸಿದಾಗ ಮುಳುಗಡೆಯಾಗಲಿರುವ ವಿಜಾಪುರ-ಬಾಗಲಕೋಟೆ ಜಿಲ್ಲೆಗಳ 22 ಗ್ರಾಮಗಳ 22,223 ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವ ಜೊತೆಗೆ ಮನೆ ನಿರ್ಮಿಸಿಕೊಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಇಲಾಖೆ, ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಸಜ್ಜಾಗುತ್ತಿದೆ.

ಸಚಿವ ಆಂಜನೇಯ ಸಿನಿಮಾ ನಿರ್ಮಾಪಕ
ವಿಧಾನಸೌಧದ ಗೋಡೆ ಒಡೆದು ವಿವಾದ ವೆಬ್ಬಿಸಿದ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಚಲನಚಿತ್ರವೊಂದನ್ನು ನಿರ್ಮಿಸುತ್ತಿದ್ದಾರೆ. ಈ ಕುರಿತು ಸ್ವತಃ ಆಂಜನೇಯ ಚಿತ್ರದುರ್ಗದಲ್ಲಿ ಮಾಹಿತಿ ನೀಡಿದ್ದು, " ನಾನು ಚಲನಚಿತ್ರವೊಂದನ್ನು ನಿರ್ಮಿಸುತ್ತಿದ್ದೇನೆ. ಆದರೆ, ಯಾರನ್ನು ಹಾಕಿಕೊಂಡು, ಯಾವ ವಿಷಯ ಇಟ್ಟುಕೊಂಡು ಚಿತ್ರ ನಿರ್ಮಿಸುತ್ತೇನೆ ಎಂಬುದನ್ನು ಈಗಲೇ ಹೇಳುವುದಿಲ್ಲ. ಅದಕ್ಕಾಗಿ ಕಾದು ನೋಡಿ" ಎಂದು ಹೇಳಿದ್ದಾರೆ.

ಗದಗದಲ್ಲಿ ಒಂದು ತಿಂಗಳ ಮಾವು ಮೇಳ ಆರಂಭ
ಗದಗ ನಗರದಲ್ಲಿ ರೈತರು ಬೆಳೆದ ಮಾವುಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದಿಂದ ಮಾವು ಮೇಳವನ್ನು ಆಯೋಜಿಸಲಾಗಿದೆ. ನಗರದ ಎಪಿಎಂಸಿ ಆವರಣದ ಟೆಂಡರ್ ಹಾಲ್ ನಲ್ಲಿ ಮೇ 4ರಂದು ಮೇಳ ಆರಂಭವಾಗಿದ್ದು ಒಂದು ತಿಂಗಳಕಾಲ ನಡೆಯಲಿದೆ.


Click it and Unblock the Notifications
