ಗುಲ್ಬರ್ಗದಲ್ಲಿ ಶೂಟೌಟ್ ಮತ್ತು ಇತರ ಜಿಲ್ಲಾ ಸುದ್ದಿಗಳು
ಬೆಂಗಳೂರು, ನ.4 : ಗುಲ್ಬರ್ಗ ಜಿಲ್ಲೆಯ ಜೇವರ್ಗಿ ತಾಲೂಕಿನ ಕುಕನೂರು ಗ್ರಾಮದಲ್ಲಿ ಸೋಮವಾರ ಬೆಳ್ಳಬೆಳಗ್ಗೆ ಗ್ರಾಮ ಪಂಚಾಯಿತಿ ಸದಸ್ಯನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಕುಕನೂರು ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯರಾದ ನಿಂಗಪ್ಪ(45)ಅವರನ್ನು ಸೋಮವಾರ ಬೆಳಗ್ಗೆ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಯಡ್ರಾವಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.
ಗ್ರಾಮಸ್ಥರು ಮತ್ತು ನಿಂಗಪ್ಪ ನಡುವೆ ನ್ಯಾಯಬೆಲೆ ಅಂಗಡಿ ವಿಚಾರದಲ್ಲಿ ಕೆಲವು ದಿನಗಳ ಹಿಂದೆ ಜಗಳ ನಡೆದಿತ್ತು. ಆದ್ದರಿಂದ ಗ್ರಾಮಸ್ಥರೇ ಅವರನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. (ಕರ್ನಾಟಕದ ಇತರ ಜಿಲ್ಲಾ ಸುದ್ದಿಗಳು)

ಗುಲ್ಬರ್ಗದಲ್ಲಿ ಶೂಟೌಟ್
ಗುಲ್ಬರ್ಗ ಜಿಲ್ಲೆಯ ಜೇವರ್ಗಿ ತಾಲೂಕಿನ ಕುಕನೂರು ಗ್ರಾಮದಲ್ಲಿ ಸೋಮವಾರ ಬೆಳ್ಳಬೆಳಗ್ಗೆ ಗ್ರಾಮ ಪಂಚಾಯಿತಿ ಸದಸ್ಯ ನಿಂಗಪ್ಪ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಗ್ರಾಮಸ್ಥರು ಮತ್ತು ನಿಂಗಪ್ಪ ನಡುವೆ ನ್ಯಾಯಬೆಲೆ ಅಂಗಡಿ ವಿಚಾರದಲ್ಲಿ ಕೆಲವು ದಿನಗಳ ಹಿಂದೆ ಜಗಳ ನಡೆದಿತ್ತು. ಆದ್ದರಿಂದ ಗ್ರಾಮಸ್ಥರೇ ಅವರನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಯಡ್ರಾವಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಕೈದಿಗಳ ಪರಾರಿ, ಐವರು ಅಮಾನತು
ಬಳ್ಳಾರಿ ಕೇಂದ್ರ ಕಾರಾಗೃಹದಿಂದ ವಿಚಾರಣಾಧೀನ ಕೈದಿಗಳಿಬ್ಬರು ಎರಡು ದಿನಗಳ ಹಿಂದೆ ಜೈಲುಗೋಡೆ ಹಾರಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಜೈಲರ್, ಮುಖ್ಯ ವೀಕ್ಷಕ ಸೇರಿದಂತೆ ಐವರು ಜೈಲು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ರಾಜ್ಯ ಕಾರಾಗೃಹ ಇಲಾಖೆಯ (ಬಂಧಿಖಾನೆ) ಡಿಐಜಿ ಎಚ್.ಸಿ. ವಿಶ್ವನಾಥಯ್ಯ, ವಿ.ಎಸ್. ರಾಜ ಅವರು ಹೇಳಿದ್ದಾರೆ. ಬಳ್ಳಾರಿಯ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ವಿಚಾರ ತಿಳಿಸಿದ್ದಾರೆ.

ಅಗ್ನಿ ಅವಘಡ, ಕೋಟ್ಯಾಂತರ ರೂ.ನಷ್ಟ
ಬೆಂಗಳೂರಿನ ಬಸವೇಶ್ವರ ನಗರದ ಎಂ.ಕೆ ಮಾರ್ಕೆಟಿಂಗ್ ಪೇಂಟ್ ಅಂಗಡಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಕೋಟ್ಯಾಂತರ ರೂ.ಗಳು ನಷ್ಟ ಸಂಭವಿಸಿದೆ. ಸೋಮವಾರ ಬೆಳಗ್ಗೆ 4 ಗಂಟೆಯ ವೇಳೆಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ನಾಲ್ಕು ಅಗ್ನಿ ಶಾಮಕದಳಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಬಸವೇಶ್ವರ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮೌಲಾ ಕೊಲೆ ಯತ್ನ
ಕುಡಿಯಲು ನೀರು ಕೇಳುವ ನೆಪದಲ್ಲಿ ಆಗಮಿಸಿದ ದುಷ್ಕರ್ಮಿಗಳು ದರ್ಗಾದ ಮೌಲಾ ಮೇಲೆ ಗುಂಡು ಹಾರಿಸಿ, ಕೊಲೆ ಮಾಡಲು ಯತ್ನಿಸಿರುವ ಘಟನೆ, ಕಲಘಟಗಿ ತಾಲೂಕಿನ ಉಗ್ನಿಕೇರಿ ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಉಗ್ನಿಕೇರಿ ಗ್ರಾಮದ ಬಳಿ ಹೆದ್ದಾರಿ ಪಕ್ಕದ ಕಮರ್ ಅಲಿ ಶಾ ದರ್ಗಾದ ಮೌಲಾ ಖಲೀಲ ಅಹ್ಮದ ಶೇಖ್ (38) ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅಹ್ಮದ ಶೇಖ್ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೈಕೋಳ ತೋಡಿಸಿದ್ದಕ್ಕೆ 5 ಸಾವಿರ ದಂಡ
ಬಸ್‌ಗೆ ಕಲ್ಲು ತೂರಿದ ಆರೋಪ ಎದುರಿಸುತ್ತಿದ್ದವರನ್ನು ಕೋರ್ಟ್‌ಗೆ ಕರೆದೊಯ್ಯು ವಾಗ ಕೈಕೋಳ ತೊಡಿಸಿದ ಬೆಳಗಾವಿಯ ಪೊಲೀಸ್ ಅಧಿಕಾರಿಯೊಬ್ಬರಿಗೆ ದಂಡ ವಿಧಿಸಿರುವ ಹೈಕೋರ್ಟ್, ಆರೋಪಿಗೆ 5,000 ಪರಿಹಾರ ನೀಡಬೇಕು ಎಂದು ಆದೇಶ ನೀಡಿದೆ. ಬೆಳಗಾವಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಬ್ ಇನ್ಸ್‌ಪೆಕ್ಟರ್ ಎನ್.ಎ. ಅಪ್ಟೇಕರ ವಿರುದ್ಧ ಅಗತ್ಯ ಕಂಡುಬಂದರೆ ಕ್ರಮ ಜರುಗಿಸಬಹುದು ಎಂದು ನಿರ್ದೇಶನ ನೀಡಿದೆ. ಬೆಳಗಾವಿಯ ದೀಪಕ್ ಮತ್ತು ಆರು ಜನ ಇತರರು ಬಸ್‌ಗೆ ಕಲ್ಲು ತೂರಿದ್ದಾರೆ, ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಉದ್ಯಮಬಾಗ್ ಪೊಲೀಸ್ ಠಾಣೆಗೆ ಬಸ್ ಚಾಲಕ ಸುರೇಶ್ ಅವರು 2006ರಲ್ಲಿ ದೂರು ಸಲ್ಲಿಸಿದ್ದರು. ಆರೋಪಿಗಳನ್ನು ಬಂಧಿಸಿದ ಪೊಲೀಸರು, ಕೋರ್ಟ್‌ಗೆ ಹಾಜರುಪಡಿಸಿದರು. ಅವರನ್ನು ನಂತರ ನ್ಯಾಯಾಂಗ ವಶಕ್ಕೆ ನೀಡಲಾಯಿತು. ದೀಪಕ್ ಮತ್ತು ಇತರ ಆರೋಪಿಗಳಿಗೆ ಕೈಕೋಳ ತೊಡಿಸಿ 2006ರ ನವೆಂಬರ್ 2 ರಂದು ಮ್ಯಾಜಿ ಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಖಾನಾಪುರದಲ್ಲಿ ಕನ್ನಡಿಗರ ಪ್ರತಿಭಟನೆ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಲಸಿ ಗ್ರಾಮದಲ್ಲಿ ದುಷ್ಕರ್ಮಿಗಳು ಕನ್ನಡ ಧ್ವಜ ಮತ್ತು ಧ್ವಜಸ್ತಂಭ ಕಿತ್ತು ಹಾಕಿದ್ದಾರೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕನ್ನಡ ಪರ ಸಂಘಟನೆಗಳು ಟೈರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿವೆ. ಖಾನಾಪುರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.












Click it and Unblock the Notifications