ತುಮಕೂರಿನಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿವೆ?

ತುಮಕೂರು, ಫೆ.13 : ತುಮಕೂರು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲಾ ಪೊಲೀಸ್ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ, ನಾವೇ ಕಾನೂನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸೊಗಡು ಶಿವಣ್ಣ, ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂದೂ ಯುವಕರ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ. ಆದರೆ, ಅಲ್ಪಸಂಖ್ಯಾತ ಯುವಕರ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗುತ್ತಿಲ್ಲ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ಯುವತಿಯರಿಗೆ ವಂಚನೆ ಮಾಡಲಾಗುತ್ತಿದೆ. ಜಿಲ್ಲಾಡಳಿತ ಈ ಬಗ್ಗೆ ಸೂಕ್ತಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾವು ಕಾನೂನನ್ನು ಕೈಗೆ ತೆಗೆದುಕೊಂಡ ಅದನ್ನು ತಡೆಯಲು ಮುಂದಾಗಬೇಕಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.

ಮೆಡಿಕಲ್ ಕಾಲೇಜಿಗಾಗಿ ಹೋರಾಟ : ತುಮಕೂರು ಜಿಲ್ಲೆಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಈ ವರ್ಷದಿಂದಲೇ ಕಾಲೇಜು ಆರಂಭಿಸುವಂತೆ ಮನವಿ ಮಾಡಿದ್ದೇವೆ. ಬಜೆಟ್‌ನಲ್ಲಿ ಇದನ್ನು ಘೋಷಿಸಿದ್ದಿದ್ದರೆ, ಮಾರ್ಚ್ 1ರಿಂದ ಹೋರಾಟ ಆರಂಭಿಸಲಾಗುವು ಎಂದು ಸೊಗಡು ಶಿವಣ್ಣ ಹೇಳಿದರು. [ಕರ್ನಾಟಕದ ಇತರ ಜಿಲ್ಲಾ ಸುದ್ದಿಗಳು]

ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಿ

ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಿ

ತುಮಕೂರು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ. ಜಿಲ್ಲಾ ಪೊಲೀಸ್ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದರೆ, ನಾವೇ ಕಾನೂನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ಗುರುವಾರ ತುಮಕೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸೊಗಡು ಶಿವಣ್ಣ, ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಿಂದೂ ಯುವಕರ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ. ಆದರೆ, ಅಲ್ಪಸಂಖ್ಯಾತ ಯುವಕರ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗುತ್ತಿಲ್ಲ ಎಂದು ಆರೋಪಿಸಿದರು.

ಕನಕಪುರ ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ತನಿಖೆ

ಕನಕಪುರ ಅಕ್ರಮ ಕಲ್ಲುಗಣಿಗಾರಿಕೆ ವಿರುದ್ಧ ತನಿಖೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರದಲ್ಲಿ ಅಕ್ರಮ ಕಲ್ಲುಗಣಿಗಾರಿಕೆಗೆ ಸಹಕಾರ ನೀಡಿದ ಎಸಿಎಫ್ ಕೆ.ಡಿ.ಶ್ರೀನಿವಾಸಯ್ಯ ವಿರುದ್ಧ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ. ನಿವೃತ್ತ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಸುಭಾಷ್ ಟಿ.ಗೋಗಿ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಎಸಿಎಫ್ ಕೆ.ಲಿಂಗಪ್ಪ ಅವರು ಮಾನದಂಡ ಅಧಿಕಾರಿಯಾಗಿ ನೇಮಕವಾಗಿದ್ದಾರೆ. ಶ್ರೀನಿವಾಸಯ್ಯ ವಿರುದ್ಧ ಅರಣ್ಯ ಪ್ರದೇಶ ಒತ್ತುವರಿಗೆ ಸಹಕಾರ, ರಸ್ತೆ ಅಗಲೀಕರಣಕ್ಕೆ ಸಹಕಾರ, ಅಕ್ರಮ ಕಲ್ಲುಗಣಿಗಾರಿಗೆ ಸಹಕಾರ ನೀಡಿದ ಆರೋಪಗಳಿವೆ.

ರಾಣೆಬೆನ್ನೂರಿನಲ್ಲಿ ಸಾಹಿತ್ಯ ಸಮ್ಮೇಳನ

ರಾಣೆಬೆನ್ನೂರಿನಲ್ಲಿ ಸಾಹಿತ್ಯ ಸಮ್ಮೇಳನ

81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಸ್ಪಷ್ಟಪಡಿಸಿದ್ದಾರೆ. ಮಡಿಕೇರಿ ಸಾಹಿತ್ಯ ಸಮ್ಮೇಳನದಲ್ಲಿ ಹಾವೇರಿಯಲ್ಲಿ ಸಮ್ಮೇಳನ ನಡೆಯಲಿದೆ ಎಂದು ಪ್ರಕಟಿಸಲಾಗಿದೆ. ಅದು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಎಂದು ಆಗಬೇಕಿತ್ತು. ರಾಣೆಬೆನ್ನೂರಿನಲ್ಲಿ ಸಮ್ಮೇಳನ ನಡೆಯಲಿದೆ ಅದರಲ್ಲಿ ಯಾವುದೇ ಅನುಮಾನ ಬೇಡ ಎಂದು ಅವರು ಹೇಳಿದರು.ಸಮ್ಮೇಳದನ ಅತಿಥ್ಯದ ಬಗ್ಗೆ ಯಾವುದೇ ಗದ್ದಲ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಸೂಕ್ಷ್ಮ ಪ್ರದೇಶದಲ್ಲಿ ಕೈಗಾರಿಕಾ ಭದ್ರತಾ ಪಡೆ ನಿಯೋಜನೆ

ಸೂಕ್ಷ್ಮ ಪ್ರದೇಶದಲ್ಲಿ ಕೈಗಾರಿಕಾ ಭದ್ರತಾ ಪಡೆ ನಿಯೋಜನೆ

ಕರ್ನಾಟಕದ ವಿಮಾನ ನಿಲ್ದಾಣ, ಜಲಾಶಯಗಳು ಮುಂತಾದ ಸೂಕ್ಷ್ಮ ಪ್ರದೇಶಗಳ ಮೇಲೆ ಹದ್ದಿನ ಕಣ್ಣಿಡಲು ಹಾಗೂ ಅವುಗಳಿಗೆ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮಾದರಿಯಲ್ಲಿ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯನ್ನು ರೂಪಿಸಿದೆ ಎಂದು ಈಶಾನ್ಯ ವಲಯ ಪೊಲೀಸ್ ಮಹಾ ನಿರೀಕ್ಷಕ ಮೋಹ್ಮದ್ ವಜೀರ್ ಅಹ್ಮದ್ ತಿಳಿಸಿದ್ದಾರೆ. ಸದ್ಯ ಸೂಕ್ಷ್ಮ ಪ್ರದೇಶಗಳಿಗೆ ಈ ಪಡೆ ಭದ್ರತೆ ನೀಡುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆಯು ಭದ್ರತೆಯನ್ನು ನೀಡುವುದು ಕಷ್ಟವೆಂದು ಚಿಂತನೆ ನಡೆಸಿದ ಸರ್ಕಾರ ಕೈಗಾರಿಕಾ ಭದ್ರತಾ ಪಡೆಯನ್ನು ರಚಿಸಿದೆ. ಇದರಡಿಯಲ್ಲಿ 1,500ಕ್ಕಿಂತ ಹೆಚ್ಚು ಕಾನ್ಸ್‌ಟೇಬಲ್ ಹಾಗೂ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ತಲೆ ಮರಿಸಿಕೊಂಡಿದ್ದ ಕೈದಿ ಸೆರೆ

ತಲೆ ಮರಿಸಿಕೊಂಡಿದ್ದ ಕೈದಿ ಸೆರೆ

ಪೆರೋಲ್ ಪಡೆದು ಜೈಲಿನಿಂದ ಹೊರ ಬಂದು ತಲೆಮರೆಸಿಕೊಂಡಿದ್ದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬನನ್ನು ಪಶ್ಚಿಮ ವಿಭಾಗದ ವಿಶೇಷ ತಂಡ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬೆಂಗಳೂರಿನ ಬನಶಂಕರಿ ಒಂದನೇ ಹಂತದ ನಿವಾಸಿಯಾದ ತೇಜಸ್ ಅಲಿಯಾಸ್ ತೇಜ (29) ಬಂಧಿತ ಕೈದಿ. ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಲಯ, 2009, ಅ.16 ರಂದು ತೇಜಸ್‌ಗೆ ಜೀವಾವಧಿ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿತ್ತು. ಪರಪ್ಪನಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ತೇಜಸ್, ಮೂರು ವರ್ಷ ಶಿಕ್ಷೆ ಅನುಭಿಸಿದ ನಂತರ ಪರೋಲ್ ಪಡೆದು 2012, ಫೆ.4 ರಂದು ಜೈಲಿನಿಂದ ಹೊರಬಂದಿದ್ದ, ನಂತರ ಜೈಲಿಗೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹಾಲು ಒಕ್ಕೂಟದಿಂದ ರೈತರಿಗೆ ಬಂಪರ್ ಕೊಡುಗೆ

ಹಾಲು ಒಕ್ಕೂಟದಿಂದ ರೈತರಿಗೆ ಬಂಪರ್ ಕೊಡುಗೆ

ಶಿವಮೊಗ್ಗ ಹಾಲು ಒಕ್ಕೂಟ ರೈತರಿಗೆ ಪ್ರತಿ ಲೀಟರ್‌ಗೆ 3 ರೂ ಹೆಚ್ಚುವರಿ ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಇದರಿಂದಾಗಿ ಸರ್ಕಾರ ನೀಡುತ್ತಿರುವ 4 ಪ್ರೋತ್ಸಾಹ ಧನದ ಜೊತೆ ಒಟ್ಟು 28.15 ದೊರೆಯಲಿದೆ. ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷ ಕೆ.ಎಲ್. ಜಗದೀಶ್ವರ್ ಪ್ರಸಕ್ತ ಹಣಕಾಸು ವರ್ಷದಲ್ಲಿ ಶಿಮುಲ್ 400 ಕೋಟಿಗಳಷ್ಟು ವ್ಯವಹಾರ ಮಾಡಿದೆ. ಸುಮಾರು 8 ಕೋಟಿ ಲಾಭ ಗಳಿಸಿದೆ. ಆದ್ದರಿಂದ ರೈತರಿಗೇ ಪ್ರೋತ್ಸಾಹಧನ ಹೆಚ್ಚಿಸಲಾಗಿದೆ. ಶಿವಮೊಗ್ಗ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಹಾಲು ಉತ್ಪಾದಕರು ಇದರ ಲಾಭ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+