ಸಿಎಂ ಭೇಟಿಗೆ ಬದಲು ಲಾಠಿ ಏಟು, ಇತರ ಸುದ್ದಿಗಳು

ಬೆಂಗಳೂರು, ನ. 14 : ಕೋಲಾರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಹೋದ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಸದಸ್ಯರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಸರ್ಕಾರಿ ಫ್ರೌಡಶಾಲೆಯ ಹೆಲಿಪ್ಯಾಡ್ ನಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲು ಯತ್ನಿಸಿದ ಹೋರಾಟ ಸಮಿತಿ ಸದಸ್ಯರನ್ನು ಬಂಧಿಸಿದ ಪೊಲೀಸರು ನಂತರ ಅವರನ್ನು ಬಿಡುಗಡೆ ಮಾಡಿದ್ದಾರೆ.

ಗುರುವಾರ ಕೋಲಾರ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಮುಖಂಡರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಗೂಳೂರು ಗ್ರಾಮದ ಸರ್ಕಾರಿ ಫ್ರೌಡಶಾಲೆಯ ಹೆಲಿಪ್ಯಾಡ್ ಗೆ ಹೋಗಿದ್ದಾರೆ. ನೀರಾವರಿ ಸೌಲಭ್ಯ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದು ಅವರ ಉದ್ದೇಶವಾಗಿತ್ತು.

ಸಿಎಂ ಹೆಲಿಕಾಪ್ಟರ್‌ನಿಂದ ಇಳಿದ ಕೂಡಲೇ ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆಂಜನೇಯರೆಡ್ಡಿ ನೇತೃತ್ವದಲ್ಲಿ ಮನವಿ ಸಲ್ಲಿಸಲು ಹೋದಾಗ ಪೊಲೀಸರು ತಡೆದರು. ಆ ವೇಳೆ ಸಮಿತಿ ಮುಖಂಡರು ಮುಖ್ಯಮಂತ್ರಿ ಬಳಿಗೆ ನುಗ್ಗಲು ಯತ್ನಿಸಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಮುಖ್ಯಮಂತ್ರಿಗಳ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ತಕ್ಷಣ ಪರಿಸ್ಥಿತಿ ತಿಳಿಗೊಳಿಸಿಲು ಲಘು ಲಾಠಿ ಪ್ರಹಾರ ನಡೆಸಿದರು. ಸಮಿತಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ವಾಗ್ವಾದ ನಡೆಯಿತು. ಇದರಿಂದಾಗಿ ಪೊಲೀಸರು ಸಮಿತಿ ಕಾರ್ಯರ್ತರನ್ನು ಬಂಧಿಸಿ, ಬಾಗೇಪಲ್ಲಿ ಪೊಲೀಸ್ ಠಾಣೆಗೆ ಕರೆದುಕೊಮಡು ಹೋಗಿ ನಂತರ ಬಿಡುಗಡೆ ಮಾಡಿದರು. (ಕರ್ನಾಟಕದ ಇತರ ಜಿಲ್ಲಾ ಸುದ್ದಿ)

 ದೊರೆಗೆ ಮನವಿ ಕೊಡಲು ಬಂದವರಿಗೆ ಲಾಠಿ ರುಚಿ

ದೊರೆಗೆ ಮನವಿ ಕೊಡಲು ಬಂದವರಿಗೆ ಲಾಠಿ ರುಚಿ

ಕೋಲಾರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಹೋದ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಸದಸ್ಯರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಸರ್ಕಾರಿ ಫ್ರೌಡಶಾಲೆಯ ಹೆಲಿಪ್ಯಾಡ್ ನಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲು ಯತ್ನಿಸಿದ ಹೋರಾಟ ಸಮಿತಿ ಸದಸ್ಯರನ್ನು ಬಂಧಿಸಿದ ಪೊಲೀಸರು ನಂತರ ಅವರನ್ನು ಬಿಡುಗಡೆ ಮಾಡಿದ್ದಾರೆ. ಕೋಲಾರ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಮುಖಂಡರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಗೂಳೂರು ಗ್ರಾಮದ ಸರ್ಕಾರಿ ಫ್ರೌಡಶಾಲೆಯ ಹೆಲಿಪ್ಯಾಡ್ ಗೆ ತೆರಳಿದ್ದರು. ನೀರಾವರಿ ಸೌಲಭ್ಯ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದು ಅವರ ಉದ್ದೇಶವಾಗಿತ್ತು. ಆದರೆ, ಪೊಲೀಸರಿಂಗೆ ಅವರು ಜಟಾಪಟಿ ನಡೆಸಿದ್ದರಿಂದ ಅವರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ.

ಜಾಮೀನಿಗಾಗಿ ಮೊರೆ ಹೋದ ಜೀವವರಾಜ್

ಜಾಮೀನಿಗಾಗಿ ಮೊರೆ ಹೋದ ಜೀವವರಾಜ್

ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಶೃಂಗೇರಿ ಕ್ಷೇತ್ರದ ಶಾಸಕ ಜೀವರಾಜ್ ಮತ್ತು ಪ್ರಕರಣದ ಆರೋಪಿಗಳಾಗಿರುವ ನಾಗರಾಜ್, ಆಶಿಶ್ ಕುಮಾರ್ ಅವರು ಬಂಧನದ ಭೀತಿ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಚಿಕ್ಕಮಗಳೂರು ಪ್ರಧಾನ ಸತ್ರ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನ.16ವರೆಗೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ನ್ಯಾಯಾಲಯ ಅವಕಾಶ ಕಲ್ಪಿಸಿದೆ. ಆಕ್ಷೇಪಣೆಯ ನಂತರ ಜಾಮೀನಿನ ಕುರಿತಾಗಿ ನ್ಯಾಯಾಲಯ ಆದೇಶ ನೀಡಲಿದೆ.

ಜಿಲ್ಲಾ ಪ್ರವಾಸದಲ್ಲಿ ಕುಮಾರಸ್ವಾಮಿ

ಜಿಲ್ಲಾ ಪ್ರವಾಸದಲ್ಲಿ ಕುಮಾರಸ್ವಾಮಿ

ವಿಧಾನಸಭೆ ಅಧಿವೇಶನ ಪ್ರಾರಂಭವಾಗುತ್ತಿರುವುದರಿಂದ ಪ್ರತಿಪಕ್ಷ ನಾಯಕ ಎಚ್.ಡಿ.ಕುಮಾರಸ್ವಾಮಿ ಗುರುವಾರದಿಂದ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿದ ಅವರು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು, ರೈತರ ಜ್ವಲಂತ ಸಮಸ್ಯೆಗಳನ್ನು ಪರಿಹಾರ ಮಾಡುವಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ ರೈತರು ಸೂಕ್ತ ಬೆಲೆಯಿಲ್ಲದೆ ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸರ್ಕಾರ ಬೆಲೆ ನಿಯಂತ್ರಣ ಆಯೋಗ ರಚನೆ ಮಾಡದೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದರು. ಜನರ ಸಮಸ್ಯೆಗಳ ಕುರಿತು ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಚರ್ಚೆ ನಡೆಸುತ್ತೇನೆ ಎಂದು ಹೇಳಿದರು.

ರೈಲಿಗಾಗಿ ದೆಹಲಿಗೆ ನಿಯೋಗ

ರೈಲಿಗಾಗಿ ದೆಹಲಿಗೆ ನಿಯೋಗ

ಚಿತ್ರದುರ್ಗ- ತುಮಕೂರು ನೇರ ರೈಲು ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನ ಮಾಡಬೇಕೆಂದು ಒತ್ತಾಯಿಸಲು ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಲು ರೈಲ್ವೆ ಹೋರಾಟ ಸಮಿತಿ ದೆಹಲಿಗೆ ತೆರಳಲಿದೆ ಎಂದು ಸಮಿತಿ ಅಧ್ಯಕ್ಷ ಪಿ.ಕೋದಂಡರಾಮಯ್ಯ ಹೇಳಿದ್ದಾರೆ. ಬಹು ದಿನಗಳ ಕನಸಾಗಿರುವ ಚಿತ್ರದುರ್ಗ- ತುಮಕೂರು ನೇರ ರೈಲು ಸಂಚಾರಕ್ಕೆ ರೈತರ ಮನವೊಲಿಸಿ, ಭೂಮಿ ಪಡೆದು , ಅವರಿಗೆ ಸೂಕ್ತ ಪರಿಹಾರ ನೀಡಿ ಶೀಘ್ರವೇ ರೈಲು ಸಂಪರ್ಕ ಯೋಜನೆ ಕಾರ್ಯರೂಪಕ್ಕೆ ತರಬೇಕು ಎಂದು ರೈಲ್ವೆ ಸಚಿವರಿಗೆ ಮನವಿ ಮಾಡಲು ಸಮಿತಿ ನಿರ್ಧರಿಸಿದೆ.

ಸಮೀಕ್ಷೆ ಮಾಡಿ ವರದಿ ಕೊಡಿ, ಮನೆ ಕೊಡಿಸುವೆ

ಸಮೀಕ್ಷೆ ಮಾಡಿ ವರದಿ ಕೊಡಿ, ಮನೆ ಕೊಡಿಸುವೆ

ಚಿಕ್ಕಬಳ್ಳಾಪುರದಲ್ಲಿನ ಎಲ್ಲಾ ಗ್ರಾಮಗಳ ನಿರಾಶ್ರಿತರ ಬಗ್ಗೆ ಜಿಲ್ಲಾಡಳಿತ ಸಮೀಕ್ಷೆ ನಡೆಸಿ ವರದಿ ನೀಡಿದರೆ ಸರ್ಕಾರದ ವತಿಯಿಂದ ಮನೆಗಳನ್ನು ನೀಡಲಾಗುವುದು ಎಂದು ವಸತಿ ಸಚಿವ ಅಂಬರೀಶ್ ಹೇಳಿದ್ದಾರೆ. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಎಲ್ಲರಿಗೂ ಮನೆ ಒದಗಿಸಬೇಕೆಂಬುದು ಸರ್ಕಾರದ ಗುರಿಯಾಗಿದೆ. ಜಿಲ್ಲೆಯಲ್ಲಿ ನಿರಾಶ್ರಿತರ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ರಸ್ತೆ ದುರಸ್ತಿಗಾಗಿ ಪತ್ರ ಚಳವಳಿ

ರಸ್ತೆ ದುರಸ್ತಿಗಾಗಿ ಪತ್ರ ಚಳವಳಿ

ಹಾನಸ ಜಿಲ್ಲೆಯಲ್ಲಿನ ರಸ್ತೆಗಳನ್ನು ದುರಸ್ತಿಗೊಳಿಸಿ, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವಂತೆ ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಒಕ್ಕೂಟದ (ಡಿವೈಎಫ್‌ಐ) ಕಾರ್ಯಕರ್ತರು ಪತ್ರ ಚಳವಳಿ ನಡೆಸುತ್ತಿದ್ದಾರೆ. ಗುರುವಾರ ನಗರದ ಕೇಂದ್ರ ಅಂಚೆ ಕಚೇರಿಯ ಮುಂದೆ ಘೋಷಣೆ ಕೂಗಿ ಪತ್ರಗಳನ್ನು ಅಂಚೆ ಮೂಲಕ ಸರ್ಕಾರಕ್ಕೆ ರವಾನಿಸಿದರು. ಜಿಲ್ಲೆಯಲ್ಲಿನ ಎಲ್ಲಾ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ಜನರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣಿಸಲು ಪರದಾಡುವಂತಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದ ರಸ್ತೆಗಳೂ ಸೇರಿದಂತೆ ಎಲ್ಲಾ ಮುಖ್ಯ ರಸ್ತೆಗಳು, ರಾಜ್ಯ ಹೆದ್ದಾರಿಗಳ ಸ್ಥಿತಿಯೂ ಅದೇ ರೀತಿಯಲ್ಲಿ ಇದೆ. ರಸ್ತೆಗಳ ಇಂತಹ ಸ್ಥಿತಿಯಿಂದಾಗಿ ಜನ ಜೀವನ ಸಂಪೂರ್ಣವಾಗಿ ತೊಂದರೆ ಸಿಲುಕಿದ್ದು, ಪ್ರತಿ ನಿತ್ಯ ಓಡಾಡಲು ಕಷ್ಟಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಯಲಹಂಕ ಠಾಣೆ ಮುಂದೆ ಜನರ ಪ್ರತಿಭಟನೆ

ಯಲಹಂಕ ಠಾಣೆ ಮುಂದೆ ಜನರ ಪ್ರತಿಭಟನೆ

ವಾಜಪೇಯಿ ವಸತಿ ಸಂಕೀರ್ಣದಲ್ಲಿ ಮನೆ ಕೊಡಿಸುವುದಾಗಿ ಜನರಿಗೆ ನಂಬಿಸಿ ಸುಶೀಲ ಎಂಬಾಕೆ ಲಕ್ಷಾಂತರ ರೂ. ವಂಚನೆ ಮಾಡಿದ್ದಾಳೆ ಎಂದು ಆರೋಪಿಸಿ ಯಲಹಂಕದ ನಿವಾಸಿಗಳು ಗುರುವಾರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಸ್ಥಳೀಯ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಹೆಸರು ಹೇಳುವ ಮೂಲಕ ಮಹಿಳೆ ಜನರಿಗೆ ನಂಬಿಕೆ ಬರುವಂತೆ ಮಾಡಿ ನಂತರ ಅವರಿಂದ ಹಣ ವಸೂಲಿ ಮಾಡಿ ವಂಚನೆ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಲಾಗಿದೆ. ಸುಮಾರು 80 ಜನರಿಂದ ಹಣ ಪಡೆದು ವಂಚಿಸಲಾಗಿದೆ ಎಂದು ದೂರಿದ್ದಾರೆ. ಶಾಸಕ ವಿಶ್ವನಾಥ್ ಸಹ ಪೊಲೀಸ್ ಠಾಣೆಗೆ ಆಗಮಿಸಿ ಮಹಿಳೆ ವಿರುದ್ಧ ತನಿಖೆ ನಡೆಸುವಂತೆ ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+