ಡಿ.19ರಿಂದ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್
ಮಂಗಳೂರು. ಡಿ.10 : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದರೆಯ ವಿದ್ಯಾಗಿರಿಯಲ್ಲಿ ಡಿ.19 ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ಕನ್ನಡ ನಾಡು-ನುಡಿ-ಸಂಸ್ಕೃತಿಯ ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ 2013 ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಅಧ್ಯಕ್ಷತೆ ವಹಿಸಲಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಸಮಾವೇಶ ಉದ್ಘಾಟಿಸಲಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ವಿಶ್ವ ನುಡಿಸಿರಿ ವಿರಾಸತ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ಸಮ್ಮೇಳನಕ್ಕಾಗಿ ಸುಮಾರು 70 ಎಕರೆ ವಿಸ್ತೀರ್ಣದಲ್ಲಿ ಒಂಬತ್ತು ವೇದಿಕೆಗಳನ್ನು ನಿರ್ಮಿಸಲಾಗುತ್ತಿದೆ ಎಂದರು. ಮುಖ್ಯ ಸಮಾರಂಭ ನಡೆಯುವ ವೇದಿಕೆ 20 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿದೆ ಎಂದರು.
ಡಿ.19 ರಂದು ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ಆರಂಭವಾಗಲಿದ್ದು, 6 ಗಂಟೆಗೆ ಮುಖ್ಯ ವೇದಿಕೆಗೆ ತಲುಪಲಿದೆ. ಉದ್ಘಾಟನೆ ಸಮಾರಂಭದಲ್ಲಿ ಸಚಿವೆ ಉಮಾಶ್ರೀ ಸೇರಿದಂತೆ ಹಲವು ಸಚಿವರು, ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಆಳ್ವ ಹೇಳಿದರು. ಡಿ.20ರಂದು ವಿವಿಧ ಗೋಷ್ಠಿಗಳು ನಡೆಯಲಿದ್ದು, 22ರಂದು ನಡೆಯವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. (ಕರ್ನಾಟಕದ ಇತರ ಜಿಲ್ಲಾ ಸುದ್ದಿಗಳು)

ಆಳ್ವಾಸ್ ನುಡಿಸಿರಿಗೆ ಮೂಡಬಿದರೆ ಸಜ್ಜು
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದರೆಯ ವಿದ್ಯಾಗಿರಿಯಲ್ಲಿ ಡಿ.19 ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ಕನ್ನಡ ನಾಡು-ನುಡಿ-ಸಂಸ್ಕೃತಿಯ `ಆಳ್ವಾಸ್ ವಿಶ್ವ ನುಡಿಸಿರಿ ವಿರಾಸತ್ 2013` ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಹಂಪಿ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ವಿರಾಸತ್ ಅಧ್ಯಕ್ಷತೆ ವಹಿಸಲಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಸಮಾವೇಶ ಉದ್ಘಾಟಿಸಲಿದ್ದಾರೆ.

ವಿಜೃಂಭಣೆಯಿಂದ ಹಂಪಿ ಉತ್ಸವ
ಬಳ್ಳಾರಿಯ ಜಿಲ್ಲೆಯ ಹಂಪಿ ಉತ್ಸವವನ್ನು ವೈಭವ ಮತ್ತು ವಿಜೃಂಭಣೆಯಿಂದ ಜನವರಿ 10, 11 ಮತ್ತು 12ರಂದು ಆಚರಿಸಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಹಂಪಿ ಉತ್ಸವ ಪೂರ್ವಭಾವಿ ಸಭೆ ನಡೆಸಿದ ಅವರು, ಹಂಪಿ ಉತ್ಸವ ಆಚರಣೆಗಾಗಿ 5 ಕೋಟಿ ರೂ. ವೆಚ್ಚವಾಗುತ್ತದೆ ಎಂದು ಅಂದಾಜಿಸಲಾಗಿದೆ. ಜಿಲ್ಲಾಡಳಿತ ಕಾರ್ಯಕ್ರಮಗಳ ರೂಪುರೇಷಗಳ ತಯಾರಿಸಿದೆ ಎಂದರು.

ಸಿಬಿಐ ತನಿಖೆಗೆ ವಹಿಸಿ
ಬಿಜಾಪುರ ಟಿಪ್ಪು ಸುಲ್ತಾನ್ ವೃತ್ತದಲ್ಲಿ ನಾಲ್ಕು ವರ್ಷಗಳ ಹಿಂದೆ ಪಾಕಿಸ್ತಾನ ಧ್ವಜ ಹಾರಿಸಿದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಜಿಲ್ಲೆಯ ವಿವಿಧ ಪ್ರಗತಿಪರ ಸಂಘಟನೆಗಳು ಆಗ್ರಹಿಸಿವೆ. ಶಿರಾತ-ಏ- ಮುಸ್ತಖಿಮ್, ರಾಜ್ಯ ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಈ ಕುರಿತು ಮನವಿ ಮಾಡಿದ್ದಾರೆ. ಘಟನೆ ನಡೆದು ನಾಲ್ಕು ವರ್ಷಗಳು ಕಳೆದರೂ ಯಾವುದೇ ತನಿಖೆ ನಡೆಸಿಲ್ಲ ಎಂದು ಸಂಘಟನೆಗಳು ಆರೋಪಿಸಿವೆ.

ಜಯಚಂದ್ರ ಭಾಷಣಕ್ಕೆ ಅಡ್ಡಿ
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ಅವರ ಭಾಷಣಕ್ಕೆ ಮಾಹಿತಿ ಹಕ್ಕು(ಆರ್.ಟಿ.ಐ) ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ಮಂಗಳವಾರ ಬೆಂಗಳೂರಿನ ಭಾರತೀಯ ವಿದ್ಯಾಭವನದಲ್ಲಿ ನಡೆದಿದೆ. `ಅಂತಾರಾಷ್ಟ್ರೀಯ ಮಾನವ ಹಕ್ಕು ದಿನಾಚರಣೆ` ಅಂಗವಾಗಿ ವಿದ್ಯಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಚಿವ ಟಿ.ಬಿ. ಜಯಚಂದ್ರ ಅವರು ಭಾಷಣ ಮಾಡಲು ಮುಂದಾದ ಸಂದರ್ಭದಲ್ಲಿ ಆರ್.ಟಿ.ಐ ಕಾರ್ಯಕರ್ತರು ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡದೇ ಇರುವ ಹಿನ್ನೆಲೆಯಲ್ಲಿ ಟಿ.ಬಿ ಜಯಚಂದ್ರ ವಿರುದ್ಧ ಪ್ರತಿಭಟನೆ ನಡೆಸಿ ಭಾಷಣಕ್ಕೆ ಅಡ್ಡಿಪಡಿಸಿದರು. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು.

ಸಾಹಿತ್ಯ ಹುಣ್ಣಿಮೆಗೆ ನೂರರ ಸಂಭ್ರಮ
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆರಂಭಿಸಿದ್ದ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮಕ್ಕೆ ನೂರು ಕಂತುಗಳನ್ನು ಪೂರೈಸಿದೆ. ಡಿಸೆಂಬರ್ 15 ಭಾನುವಾರ ಈ ನೂರರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಲ್ಲೇಶ್ವರದಲ್ಲಿರುವ ಮಾಜಿ ಉಪ ಮುಖ್ಯ ಮಂತ್ರಿಗಳಾದ ಕೆ. ಎಸ್. ಈಶ್ವರಪ್ಪನವರ ಮನೆಯ ಮುಂದೆ ಆರಂಭವಾಗಿದ್ದ ಕಾರ್ಯಕ್ರಮವನ್ನು ನಗರದ ವಿವಿಧ ಬಡಾವಣೆಗಳಲ್ಲಿ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಈ ಕಾರ್ಯಚಟುವಟಿಕೆ ನಡೆಸಲಾಗುತ್ತಿದ್ದು, ಸದ್ಯ ನೂರನೇ ಕಾರ್ಯಕ್ರಮ ನಡೆಸಲಾಗುತ್ತಿದೆ.

ಬೆಳಗಾವಿಯಲ್ಲಿ ಎರಡು ಬಾರಿ ಅಧಿವೇಶನ
ಬೆಳಗಾವಿಯ ಸುವರ್ಣ ವಿಧಾನಸೌಧ ಕಟ್ಟಡದಲ್ಲಿ ಎರಡು ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ಕನಿಷ್ಠ ವರ್ಷದಲ್ಲಿ 100 ದಿನ ಅಧಿವೇಶನ ನಡೆಯಬೇಕು. ಅದು ಸಾಧ್ಯವಿಲ್ಲ ಎನ್ನುವುದಾದದರೆ 60 ದಿನಗಳ ಅಧಿವೇಶನದಲ್ಲಿ 40 ದಿನ ಬೆಂಗಳೂರಿನಲ್ಲಿ ಮತ್ತು 20 ದಿನ ಬೆಳಗಾವಿಯಲ್ಲಿ ಕಲಾಪಗಳನ್ನು ನಡೆಸಬೇಕು. ಸುವರ್ಣ ವಿಧಾನಸೌಧದ ಕಟ್ಟಡ ಸುದುಪಯೋಗ ಪಡಿಸಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ ಎಂದರು.











Click it and Unblock the Notifications