ಫೆ.22ರಂದು ಕೆಎಂಎಫ್ ರೈತರ ಬೃಹತ್ ಸಮಾವೇಶ

ಬೆಂಗಳೂರು, ಫೆ.18 : ನಂದಿನಿ ಹಾಲಿನ ಮಾರಾಟ ಉತ್ತೇಜಿಸಲು ಬೆಂಗಳೂರಿಲ್ಲಿ ಫೆ.22ರಂದು ಹಾಲು ಉತ್ಪಾದಕರ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಹಸುಗಳಿಗೆ ಬರುವ ಕಾಲುಬಾಯಿ ರೋಗದ ಬಗ್ಗೆ ಸಮಾವೇಶದಲ್ಲಿ ರೈತರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಸೋಮಶೇಖರ ರೆಡ್ಡಿ, ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಎದುರಿನ ಮೈದಾನದಲ್ಲಿ ಫೆ.22ರಂದು ಹಾಲು ಉತ್ಪಾದಕರ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದ್ದು ಸುಮಾರು 3 ಲಕ್ಷ ರೈತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಸ್ತುತ ನಂದಿನಿ ಹಾಲು ಉತ್ಪಾದನೆಯಲ್ಲಿ ಕರ್ನಾಟಕದ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಇದನ್ನು ಮೊದಲನೇ ಸ್ಥಾನಕ್ಕೆ ತೆಗೆದುಕೊಂಡು ಹೋಗುವ ಗುರಿಯನ್ನು ಕೆಎಂಎಫ್ ಹೊಂದಿದೆ. ಸದ್ಯ, ಕಾಲುಬಾಯಿ ರೋಗದಿಂದಾಗಿ ಹಾಲಿನ ಉತ್ಪಾದನೆಯಲ್ಲಿ ಸ್ಪಲ್ಪ ಇಳಿಕೆಯಾಗಿದೆ. ಇದು ಮುಂದಿನ ದಿನಗಳಲ್ಲಿ ಹೆಚ್ಚಾಗಲಿದೆ ಎಂದು ಸೋಮಶೇಖರ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.

ಸಮಾವೇಶದಲ್ಲಿ ಕೆಎಂಎಫ್‌ ಬೆಳವಣಿಗೆಗೆ ಉತ್ತೇಜನ ನೀಡಿದ ಸಿಎಂ ಸಿದ್ದರಾಮಯ್ಯ ಅವರಿಗೆ ಸನ್ಮಾನ ಮಾಡಲಾಗುವುದು ಮತ್ತು ನಂದಿನಿ ಹಾಲಿಗೆ ರಾಯಭಾರಿಯಾಗಿ ಕೆಲಸ ನಿರ್ವಹಿಸಿದ ನಟ ಪುನೀತ್ ರಾಜ್‌ಕುಮಾರ್ ಅವರನ್ನು ಸನ್ಮಾನಿಸಲಾಗುವುದು ಎಂದು ಸೋಮಶೇಖರ ರೆಡ್ಡಿ ತಿಳಿಸಿದರು.

ಸಮಾವೇಶದ ವೇಳೆ ನಂದಿನಿ ವಿಶೇಷ ಹಾಲನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ ರೆಡ್ಡಿ, ಫೆ.15ರಿಂದ ಮಾ.15ರವರೆಗೆ ಕಾಲುಬಾಯಿ ರೋಗಕ್ಕೆ ಲಸಿಕೆ ಹಾಕಿಸುವ ಕುರಿತು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಮಾವೇಶದಲ್ಲಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಪಶು ಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ, ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾ ದ್ ಮುಂತಾದವರು ಭಾಗವಹಿಸಲಿದ್ದಾರೆ ಎಂದರು. [ಕರ್ನಾಟಕದ ಇತರ ಜಿಲ್ಲಾಸುದ್ದಿಗಳು]

ಹಾಲು ಉತ್ಪಾದಕರ ಸಮಾವೇಶ

ಹಾಲು ಉತ್ಪಾದಕರ ಸಮಾವೇಶ

ನಂದಿನಿ ಹಾಲಿನ ಮಾರಾಟ ಉತ್ತೇಜಿಸಲು ಬೆಂಗಳೂರಿಲ್ಲಿ ಫೆ.22ರಂದು ಹಾಲು ಉತ್ಪಾದಕರ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ತಿಳಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದ ಎದುರಿನ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸುಮಾರು 3 ಲಕ್ಷ ರೈತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರೆಡ್ಡಿ ಹೇಳಿದರು.

ಬಳ್ಳಾರಿಯಲ್ಲಿ ಬಿರುಸಿನಿಂದ ಸಾಗಿದೆ ವಿಚಾರಣೆ

ಬಳ್ಳಾರಿಯಲ್ಲಿ ಬಿರುಸಿನಿಂದ ಸಾಗಿದೆ ವಿಚಾರಣೆ

ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಬಳ್ಳಾರಿಯಲ್ಲಿ ಜಿಲ್ಲೆಯಲ್ಲಿ ಬಿರುಸಿನಿಂದ ವಿಚಾರಣೆ ನಡೆಸುತ್ತಿದೆ. ಜನಾರ್ದನ ರೆಡ್ಡಿ ಪಾಲುದಾರತ್ವದ ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಒಎಂಸಿ ಗಣಿ ಪ್ರಕರಣದ ಕುರಿತು ಹೈದರಾಬಾದ್ ಸಿಬಿಐ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ. ಬಳ್ಳಾರಿಯ ಪೊಲೀಸ್ ಜಿಮ್ಖಾನ ಬೀಡು ಬಿಟ್ಟಿರುವ ಅಧಿಕಾರಿಗಳು ಕರ್ನಾಟಕದ ಗಡಿಯಲ್ಲಿ ಬರುವ ಎಂಬಿಟಿ, ಎಚ್ಟಿ, ಟಿಎನ್ಆರ್ ಗಣಿ ಕಂಪನಿಗೆ ಸಂಬಂಧಿಸಿದಂತೆ ಕೆಲವರನ್ನು ವಿಚಾರಣೆ ನಡೆಸುತ್ತಿದ್ದಾರೆ. ಮೂರು ದಿನಗಳಿಂದ ಸಿಬಿಐ ಅಧಿಕಾರಿಗಳು ನಗರದಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ತಿಳಿದುಬಂದಿದೆ.

ಬಸವ ವಸತಿ ಯೋಜನೆಯನ್ನು ಬಳಸಿಕೊಳ್ಳಿ

ಬಸವ ವಸತಿ ಯೋಜನೆಯನ್ನು ಬಳಸಿಕೊಳ್ಳಿ

ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಬಸವ ವಸತಿ ಯೋಜನೆ ಅಡಿಯಲ್ಲಿ ಸುಮಾರು 3 ಸಾವಿರ ಹೆಚ್ಚುವರಿ ಮನೆ ಮಂಜೂರು ಮಾಡಲಾಗಿದೆ ಶಾಸಕ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬಾಲ್ಕಿ ತಾಲೂಕಿನ ಕೊಂಗಳಿ ಗ್ರಾಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಬಳಿಕ, ಬಸವ ವಸತಿ ಯೋಜನೆಗೆ ಹೆಚ್ಚಿನ ಹಣ ಒದಗಿಸಲಾಗಿದೆ. ಅರ್ಹ ಫಲಾನುಭವಿಗಳು ಬಸವ ವಸತಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕರು ಕರೆ ನೀಡಿದರು.

ರೇಡಿಯೊ ಪಾಠವನ್ನು ಬಿತ್ತರಿಸಲಾಗುತ್ತದೆ

ರೇಡಿಯೊ ಪಾಠವನ್ನು ಬಿತ್ತರಿಸಲಾಗುತ್ತದೆ

ಎಸ್ ಎಸ್ಎಲ್ ಸಿ ಪರೀಕ್ಷೆಗಳು ಮಾ.28ರಿಂದ ಎಪ್ರಿಲ್ 9ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಡುಪಿ ಜಿಲ್ಲಾಡಳಿತ ಮಾ.3ರಿಂದ ವಾರದಲ್ಲಿ ಸೋಮವಾರದಿಂದ ಶುಕ್ರವಾರ ದವರೆಗೆ ಪ್ರತಿದಿನ ಮಧ್ಯಾಹ್ನ 2:35ರಿಂದ 3:05ರವರೆಗೆ ಆಕಾಶವಾಣಿಯಲ್ಲಿ ರೇಡಿಯೊ ಪಾಠವನ್ನು ಪ್ರಸಾರ ಮಾಡಲಾಗುತ್ತದೆ. ವಿಷಯವಾರು ಸಂಪನ್ಮೂಲ ವ್ಯಕ್ತಿಗಳು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ ಕುರಿತು ಮಾರ್ಗದರ್ಶನ ನೀಡಲಿದ್ದಾರೆ. ಪ್ರತಿಯೊಂದು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಪಾಠಗಳನ್ನು ಆಲಿಸಲು ವ್ಯವಸ್ಥೆಯನ್ನು ಕಲ್ಪಿಸುವಂತೆ ಪ್ರೌಢ ಶಾಲಾ ಮುಖ್ಯಸ್ಥರಿಗೆ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸೂಚನೆ ನೀಡಿದ್ದಾರೆ.

ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ

ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ

ಗದಗ ಜಿಲ್ಲಾ 6 ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರೋಣ ಪಟ್ಟಣದಲ್ಲಿ ಸಿದ್ಧತೆ ನಡೆಯುತ್ತಿದ್ದು, ಫೆ. 22 ಮತ್ತು 23ರಂದು ಸಮ್ಮೇಳನ ನಡೆಯಲಿದೆ. ಸಮ್ಮೇಳನದ ಯಶಸ್ವಿಗೆ ಒಟ್ಟು 28 ಸಮಿತಿಗಳನ್ನು ರಚಿಸಿ ಸಿದ್ಧತೆ ನಡೆಸಲಾಗುತ್ತಿದೆ. ಪಟ್ಟಣದ ರಾಜೀವ್ ಗಾಂಧಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಸಮ್ಮೇಳನ ನಡೆಯಲಿದ್ದು, 5000 ಜನರ ಏಕಕಾಲಕ್ಕೆ ಸಮ್ಮೇಳನ ನೋಡಲು ಅವಕಾಶವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಪುಸ್ತಕ ಮಾರಾಟ ಮತ್ತು ಪ್ರದರ್ಶನಕ್ಕಾಗಿ 40 ಪ್ರತ್ಯೇಕ ಮಳಿಗೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಚಾಮರಾಜನಗರ ಇನ್ನು ಕಸಮುಕ್ತ ನಗರ

ಚಾಮರಾಜನಗರ ಇನ್ನು ಕಸಮುಕ್ತ ನಗರ

ಕರ್ನಾಟಕದಲ್ಲಿ ಮೊದಲ ಬಾರಿಗೆ ಪೌರ ಘನತ್ಯಾಜ್ಯ ನಿರ್ವಹಣೆ ಮತ್ತು ವಿಲೇವಾರಿ ನಿಯಮ 2000 ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಜಾರಿಗೆ ತರಲಾಗುತ್ತಿದೆ ಆ ಮೂಲಕ ಮೊದಲ ಕಸಮುಕ್ತ ನಗರವನ್ನಾಗಿಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ನಿರ್ದೇಶನಾಲಯದ ಕಾರ್ಯನಿರ್ವಾಹಕ ಎಂಜಿನಿಯರ್ ಶ್ರೀಪ್ರಕಾಶ್ ಹೇಳಿದ್ದಾರೆ. ಯೋಜನೆಯನ್ನು ಶಿಸ್ತುಬದ್ಧ, ಕ್ರಮಬದ್ಧವಾಗಿ ಅನುಷ್ಠಾನಗೊಳಿಸಲು ನಗರಸಭೆ ಹಾಗೂ ಪೌರಕಾರ್ಮಿಕರ ಜೊತೆ ನಗರದ ನಾಗರಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+