ಕರ್ನಾಟಕದ ಜಿಲ್ಲಾ ಸುದ್ದಿಗಳ ಕ್ವಿಕ್ ಲುಕ್
ಮಡಿಕೇರಿ, ನ.6: ಮಡಿಕೇರಿಯಲ್ಲಿ ಜನವರಿಯಲ್ಲಿ ನಡೆಯಲಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನ.15ರೊಳಗೆ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಾಹಿತ್ಯ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಟಿ.ಪಿ. ರಮೇಶ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಮಡಿಕೇರಿಯಲ್ಲಿ ಜನವರಿ 7 ರಿಂದ 9 ರವರೆಗೆ 3 ದಿನಗಳ ಕಾಲ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನ.15ರೊಳಗಾಗಿ 300 ಶುಲ್ಕ ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದರು. ರಾಜ್ಯದ 30 ಜಿಲ್ಲೆಗಳಿಗೆ ಈಗಾಗಲೇ 8 ಸಾವಿರ ಪ್ರತಿನಿಧಿಗಳ ನೋಂದಣಿಗೆ ಸಂಬಂಧಿಸಿದ ಪುಸ್ತಕಗಳನ್ನು ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಯಾವುದೇ ಜಿಲ್ಲೆಯಿಂದ ಪ್ರತಿನಿಧಿಗಳ ನೋಂದಣಿಗೆ ಅಗತ್ಯವಿರುವ ಪುಸ್ತಕಗಳಿಗೆ ಹೆಚ್ಚಿನ ಮುಂದೆ ಬೇಡಿಕೆ ಬಂದರೆ, ಅವುಗಳನ್ನು ಕಳುಹಿಸಿ ಕೊಡಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ಕೊಡಗು ಜಿಲ್ಲೆಯವರು ನೋಂದಣಿಗಾಗಿ ಆಯಾ ತಾಲೂಕು ಪರಿಷತ್ತುಗಳ ಅಧ್ಯಕ್ಷರನ್ನು, ವಿವಿಧ ಹೋಬಳಿ ಘಟಕಗಳ ಅಧ್ಯಕ್ಷರನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಜನವರಿ 7, 8 ಮತ್ತು 9ರಂದು ಕನ್ನಡ ಸಾಹಿತ್ಯ ಸಮ್ಮೇಳನ ಮಡಿಕೇರಿಯ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನ ಹಾಗೂ ಪೊಲೀಸ್ ಮೈದಾನದಲ್ಲಿ ನಡೆಯಲಿದೆ. 80ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳದನ ಲಾಂಚನ ಬಿಡುಗಡೆ ಮಾಡಲಾಗಿದ್ದು, ಸಮ್ಮೇಳನ ನಡೆಸಲು ಅಗತ್ಯ ತಯಾರಿಗಳನ್ನು ಆರಂಭಿಸಲಾಗಿದೆ. (ಕರ್ನಾಟಕದ ಇತರ ಜಿಲ್ಲಾ ಸುದ್ದಿಗಳು)

ಸಮ್ಮೇಳನಕ್ಕೆ ನೋಂದಣಿ ಮಾಡಿಸಿಕೊಳ್ಳಿ
ಮಡಿಕೇರಿಯಲ್ಲಿ ಜನವರಿಯಲ್ಲಿ ನಡೆಯಲಿರುವ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನ.15ರೊಳಗೆ ಹೆಸರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಸಾಹಿತ್ಯ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಟಿ.ಪಿ. ರಮೇಶ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಮಡಿಕೇರಿಯಲ್ಲಿ ಜನವರಿ 7 ರಿಂದ 9 ರವರೆಗೆ 3 ದಿನಗಳ ಕಾಲ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ನ.15ರೊಳಗಾಗಿ 300 ಶುಲ್ಕ ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ರಾಷ್ಟ್ರಗೀತೆಗೆ ಅವಮಾನ
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನಲ್ಲಿ ನ.1ರಂದು ನಡೆದ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ತಾಲೂಕು ಆಡಳಿತ ಮಂಡಳಿ ವತಿಯಿಂದ ನಾಡಗೀತೆ ಹಾಗೂ ರಾಷ್ಟ್ರಗೀತೆಗೆ ಅವಮಾನ ಮಾಡಲಾಗಿದೆ. ನಾಡಹಬ್ಬದ ಕಾರ್ಯಕ್ರಮದಲ್ಲಿ ಗಣ್ಯರು, ಅತಿಥಿಗಳು ಹಾಗೂ ಮಕ್ಕಳಿಗೆ ತಿಂಡಿ ವಿತರಿಸಿದ ಪೇಪರ್ ಪ್ಲೇಟ್ ಹಿಂಬದಿಯಲ್ಲಿ ರಾಷ್ಟ್ರಗೀತೆ ಹಾಗೂ ನಾಡಗೀತೆಯ ಸಂಪೂರ್ಣ ಸಾಲುಗಳು ಮುದ್ರಿತಗೊಂಡಿತ್ತು. ಇದನ್ನು ಗಮನಿಸದೇ ಅದೇ ತಟ್ಟೆಯಲ್ಲಿ ತಿಂಡಿ ನೀಡಲಾಗಿದೆ. ಸದ್ಯ ಈ ವಿಷಯವನ್ನು ಸಾರ್ವಜನಿಕರು ತೀವ್ರವಾಗಿ ಖಂಡಿಸುತ್ತಿದ್ದಾರೆ.

ಅತ್ಯಾಚಾರ ಪೊಲೀಸ್ ಪೇದೆ ಅಮಾನತು
ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಪೊಲೀಸ್ ಪೇದೆಯನ್ನು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕಾಶಿನಾಥ್ ತಳಕೇರಿ ಅವರು ತತ್‌ಕ್ಷಣಕ್ಕೆ ಜಾರಿಯಾಗುವಂತೆ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಚಿಂಚೋಳಿ - ಗುಲ್ಬರ್ಗ ರಾಜ್ಯ ಹೆದ್ದಾರಿ ಬಳಿಯ ಮುಲ್ಲಾಮಾರಿ ನದಿ ಸೇತುವೆ ಬಳಿ ಯುವತಿ ಮೇಲೆ ಅತ್ಯಾಚಾರ ನಡೆದಿತ್ತು. ಯುವತಿ ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಮದುವೆಯಾಗುವುದಾಗಿ ನಂಬಿಸಿ ಕಮಲಾಪುರ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಮೋಹನರೆಡ್ಡಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಳು. ಯುವತಿ ಚಿಂಚೋಳಿ ತಾಲೂಕಿನ ಹಸರಗುಂಡಗಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗುಮಾಸ್ತೆಯಾಗಿ ಕೆಲಸ ಮಾಡುತ್ತಿದ್ದಾಳೆ.

15 ಕಾಡಾನೆಗಳ ಆಗಮನ, ಗ್ರಾಮಸ್ಥರಲ್ಲಿ ಆತಂಕ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಶಿಡ್ಲಕೋಣಕೆರೆ ಗ್ರಾಮದ ಬಳಿ 15 ಕಾಡಾನೆಗಳ ಗುಂಪು ಆಗಮಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಳೆದ ಹತ್ತುದಿನಗಳಿಂದಲೂ ಕಾಡಾನೆಗಳು ಗ್ರಾಮದ ಹೊರವಲಯದ ಕೆರೆಯ ಸಮೀಪ ಬೀಡುಬಿಟ್ಟಿದ್ದು, ಬೆಳೆಗಳನ್ನು ನಾಶಪಡಿಸಿವೆ. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಕೈಗೊಂಡ ನಂತರ ಆನೆಗಳು ಎರಡು ಗುಂಪುಗಳಾಗಿ ಚದುರಿ ಹೋಗಿದ್ದು, ರೈತರಲ್ಲಿ ಮತ್ತಷ್ಟು ಆತಂಕ ಉಂಟುಮಾಡಿದೆ. ಅರಣ್ಯ ಇಲಾಖೆಯ ಕಾರ್ಯಾಚರಣೆ ಸದ್ಯ ಮುಂದುವರೆದಿದೆ.

ಹೈಕಮಾಂಡ್ ಗೆ ದೂರು ನೀಡಲಿರುವ ಲಾಡ್
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಶಿಡ್ಲಕೋಣಕೆರೆ ಗ್ರಾಮದ ಬಳಿ 15 ಕಾಡಾನೆಗಳ ಗುಂಪು ಆಗಮಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಳೆದ ಹತ್ತುದಿನಗಳಿಂದಲೂ ಕಾಡಾನೆಗಳು ಗ್ರಾಮದ ಹೊರವಲಯದ ಕೆರೆಯ ಸಮೀಪ ಬೀಡುಬಿಟ್ಟಿದ್ದು, ಬೆಳೆಗಳನ್ನು ನಾಶಪಡಿಸಿವೆ. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಕೈಗೊಂಡ ನಂತರ ಆನೆಗಳು ಎರಡು ಗುಂಪುಗಳಾಗಿ ಚದುರಿ ಹೋಗಿದ್ದು, ರೈತರಲ್ಲಿ ಮತ್ತಷ್ಟು ಆತಂಕ ಉಂಟುಮಾಡಿದೆ. ಅರಣ್ಯ ಇಲಾಖೆಯ ಕಾರ್ಯಾಚರಣೆ ಸದ್ಯ ಮುಂದುವರೆದಿದೆ.

ಮನೆಬಾಗಿಲಿಗೆ ಪಿಂಚಣಿ, ರೇಷನ್ ಕಾರ್ಡ್
ಕೋಲಾರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ಅಧಿಕಾರಿಗಳು ಆಗಮಿಸಿ ಪಿಂಚಣಿ ಮತ್ತು ರೇಷನ್ ಕಾರ್ಡ್ ವಿತರಿಸುವ ವ್ಯವಸ್ಥೆಯನ್ನು 10 ದಿನಗಳಲ್ಲಿ ಆರಂಭಿಸಲಾಗುವುದು ಎಂದು ಶಾಸಕ ಎಸ್.ಎಸ್.ಸುಬ್ಬಾರೆಡ್ಡಿ ಹೇಳಿದ್ದಾರೆ. ಹೋಬಳಿಗೊಂದು ವಾಹನ ವ್ಯವಸ್ಥೆ ಮಾಡಲಾಗುವುದು. ಅದರಲ್ಲಿ ಆಗಮಿಸುವ ಅಧಿಕಾರಿಗಳು ಸ್ಥಳದಲ್ಲಿಯೇ ಪಿಂಚಣಿ ಮತ್ತು ರೇಷನ್ ಕಾರ್ಡ್ ವಿತರಣೆ ಮಾಡಲಿದ್ದಾರೆ ಎಂದು ಶಾಸಕರು ಹೇಳಿದರು.











Click it and Unblock the Notifications