ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾಸನ, ಚಾಮರಾಜ ನಗರ, ಯಾದಗಿರಿಯಲ್ಲಿ ಡಿಪ್ಲೊಮಾ ಕಾಲೇಜು

|
Google Oneindia Kannada News

ಬೆಂಗಳೂರು, ಮಾರ್ಚ್ 15: ರಾಯಚೂರಿನಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ವಿಚಾರವನ್ನು 2017ರ ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೈದರಾಬಾದ್ ಕರ್ನಾಟಕದಲ್ಲಿನ ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಸನ, ಚಾಮರಾಜ ನಗರ ಹಾಗೂ ಯಾದಗಿರಿಯಲ್ಲಿ ಡಿಪ್ಲೊಮಾ ಕಾಲೇಜು ಸ್ಥಾಪಿಸಲಾಗುವುದು[LIVE: ಮೇಕೆದಾಟು ಯೋಜನೆ ಅನುಷ್ಠಾನ : ಸಿದ್ದರಾಮಯ್ಯ]

District wise allocation in Budget 2017 by Karnataka CM Siddaramaiah

ಇದಲ್ಲದೆ, ರಾಜ್ಯದಲ್ಲಿ ಕುರಿ ಸಾಕಾಣಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬಳ್ಳಾರಿಯ ಕುರಿಕುಪ್ಪೆಯಲ್ಲಿ ಕುರಿ ಸಂವರ್ಧನೆ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.

ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕ್ಯಾಂಟೀನ್ ಗಳಿಂದ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಸಿಗುವ ವ್ಯವಸ್ಥೆ ಜಾರಿಯಾಗಲಿದೆ.

ಇದಲ್ಲದೆ, 21 ಜಿಲ್ಲೆಗಳಿಂದ 49 ಹೊಸ ತಾಲೂಕುಗಳನ್ನು ರಚಿಸಲು ಸರ್ಕಾರ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.

English summary
Chief Minister Siddaramaiah anounces various projects and programs for various districts while annoucing state budgets for 2017-18 year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X